ಹತ್ತಿ ಬೀಜಕ್ಕಾಗಿ ಸೀಮಾಂಧ್ರದತ್ತ ರೈತರ ಚಿತ್ತ

Team Udayavani, Jun 18, 2021, 10:07 PM IST

18-13

„ಆರ್‌.ಬಸವರೆಡ್ಡಿ ಕರೂರು

ಸಿರುಗುಪ್ಪ: ತಾಲೂಕಿನಲ್ಲಿ ಈಗಾಗಲೇ ಉತ್ತಮ ಮಳೆಯಾದ ಹಳ್ಳಿಗಳಲ್ಲಿ ಹತ್ತಿ ಬಿತ್ತನೆಯ ಕಾರ್ಯ ನಡೆದಿದ್ದು, ತಾಲೂಕಿನಲ್ಲಿ ಹತ್ತಿ ಪ್ರಮುಖ ವಾಣಿಜ್ಯ ಬೆಳೆಯಾಗಿದೆ, ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಒಟ್ಟು 18 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡುವ ಗುರಿಯನ್ನು ಕೃಷಿ ಇಲಾಖೆ ಇಟ್ಟುಕೊಂಡಿದೆ.

ಈಗಾಗಲೇ 2 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ. ತಾಲೂಕಿನ ಬಿ.ಎಂ. ಸೂಗೂರು, ರಾವಿಹಾಳು, ವತ್ತು ಮುರುವಣಿ, ಹಚ್ಚೊಳ್ಳಿ, ಕೆ. ಬೆಳಗಲ್ಲು, ರಾರಾವಿ, ವೆಂಕಟಾಪುರ, ಇಟಿಗಿಹಾಳು, ನಾಗರಹಾಳು, ಬಂಡ್ರಾಳು, ಬೀರಹಳ್ಳಿ, ನಾಡಂಗ, ಅಗಸನೂರು, ಅಲಬನೂರು, ಕುಡುದರಹಾಳು, ನಾಗಲಾಪುರ, ಕುರುವಳ್ಳಿ, ತೊಂಡೆಹಾಳು, ಟಿ. ರಾಂಪುರ, ಬಂಡ್ರಾಳ್‌ ಕ್ಯಾಂಪ್‌, ಕೆ.ಸೂಗೂರು, ಮುದೇನೂರು, ಹೀರೆಹಾಳು ಮುಂತಾದ ಗ್ರಾಮಗಳ ರೈತರು ಹತ್ತಿ ಬೆಳೆಯನ್ನು ಪ್ರಮುಖ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದಾರೆ.

ಈ ಭಾಗದ ರೈತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸೀಮಾಂಧ್ರ ಪ್ರದೇಶದ ಆದೋನಿ ಪಟ್ಟಣದಲ್ಲಿರುವ ವಿವಿಧ ಬೀಜ ಮಾರಾಟದ ಅಂಗಡಿಗಳಿಂದ ಬಿತ್ತನೆಗೆ ಬೇಕಾದ ಹತ್ತಿ ಬೀಜವನ್ನು ಖರೀದಿಸುತ್ತಿದ್ದಾರೆ. ಸಿರುಗುಪ್ಪ ನಗರದಲ್ಲಿ ಹತ್ತಿ ಬೀಜ ಮಾರಾಟ ಮಾಡುವ ಅಂಗಡಿಗಳಿದ್ದರೂ ಗಡಿಭಾಗದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆದೋನಿಯಲ್ಲಿಯೇ ಹತ್ತಿ ಬೀಜ ಖರೀದಿಸುವುದು ಕಂಡುಬರುತ್ತಿದೆ.

ಕಳೆದ ವರ್ಷ ಆದೋನಿಯಿಂದ ಹತ್ತಿ ಬೀಜ ಖರೀದಿಸಿ ತಂದ ಕೆಲ ರೈತರ ಹೊಲದಲ್ಲಿ ಬಿತ್ತನೆ ಮಾಡಿದಾಗ ಉತ್ತಮ ಇಳುವರಿ ಬಂದಿರಲಿಲ್ಲ, ಇದಕ್ಕೆ ಮುಖ್ಯ ಕಾರಣ ಕಳಪೆ ಬೀಜ ಎಂದು ಹೇಳಲಾಗಿತ್ತು. ಆದರೂ ರೈತರು ಆದೋನಿಯಿಂದ ಹತ್ತಿ ಬೀಜ ಖರೀದಿಸುವುದನ್ನು ಮುಂದುವರಿಸಿದ್ದಾರೆ.

ಕೃಷಿ ಇಲಾಖೆಯು ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ಮುಖ್ಯವಾಗಿ ತಾಲೂಕಿನ ಗಡಿ ಗ್ರಾಮಗಳಲ್ಲಿ ಹತ್ತಿ ಬೀಜಗಳ ಖರೀದಿ ಬಗ್ಗೆ ಜಾಗೃತಿ ಮೂಡಿಸಬೇಕು. ನಕಲಿ ಬಿತ್ತನೆ ಬೀಜ ಮಾರಾಟ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಲ ನಕಲಿ ಕಂಪನಿ ಬೀಜ ಮಾರಾಟಗಾರರು ಹಳ್ಳಿಗಳಿಗೆ ತೆರಳಿ ಬೀಜ ಮಾರಾಟ ಮಾಡುವ ಅಪಾಯವಿದೆ.

ಅಲ್ಲದೆ ಕೆಲ ವ್ಯಕ್ತಿಗಳು ಲೂಜ್‌ ಹತ್ತಿ ಬೀಜಗಳನ್ನು ತೆಗೆದುಕೊಂಡು ಬಂದು ರೈತರಿಗೆ ಮಾರಾಟ ಮಾಡುವ ಸಂಚು ಮಾಡುತ್ತಿದ್ದಾರೆ. ಪ್ಯಾಕೆಟ್‌ ಮೇಲೆ ವಿವಿಧ ಕಂಪನಿ ಹತ್ತಿಬೀಜ ಎಂದು ನಮೂದಿಸಿ ಹತ್ತಿ ಬೀಜ ಮಾರಾಟ ಮಾಡುವ ಭೀತಿ ಇದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ವಾ. ಹುಲುಗಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.