![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 19, 2021, 5:55 PM IST
ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು.
ಇದನ್ನೂ ಓದಿ : ಕೃಷ್ಣಾ ನದಿ ನೀರು ಹಂಚಿಕೆ : ಅಂತಿಮ ಅಧಿಸೂಚನೆಗೆ ಕರ್ನಾಟಕ-ಮಹಾರಾಷ್ಟ್ರ ಜಂಟಿ ಪ್ರಯತ್ನ
ಕಸ ನಿರ್ವಹಣೆಯ ಬಗ್ಗೆ ಹಲವು ದೂರುಗಳು ನಮ್ಮ ಗಮನಕ್ಕೆ ಬಂದಿವೆ. ಇಂತಹ ಯಾವುದೇ ದೂರುಗಳು ಬಂದರೂ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಸಾರ್ವಜನಿಕರು ತ್ಯಾಜ್ಯ ನಿರ್ವಹಣೆ ಬಗ್ಗೆ ನೀಡುವ ದೂರುಗಳನ್ನು ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ ಬಗೆಹರಿಸಬೇಕು, ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಕಸ ಸಂಗ್ರಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕಸವಿಂಗಡಣೆಗೆ ಅವಶ್ಯವಾದ ಸೂಕ್ತ ಸ್ಥಳವಕಾಶ ಇದೆಯೇ ಎಂಬುದನ್ನು ಸ್ಥಳಪರೀಕ್ಷೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ವಿಂಗಡನೆಗೆ ಸೂಕ್ತ ಸ್ಥಳ ಹೊಂದಿರದ ಗುತ್ತಿಗೆದಾರ ಗುತ್ತಿಗೆ ರದ್ದುಪಡಿಸಿ ಎಂದು ಸೂಚಿಸಿದರು.
ತ್ಯಾಜ್ಯ ನಿರ್ವಹಣೆಯ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ಅಭಿಪ್ರಾಯವನ್ನು ಪಡೆದ ಸಚಿವರು ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಅವರುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ಸಹಕಾರವೂ ಬೇಕು ಎಂದು ಮನವಿ ಮಾಡಿದರು.
ಒಣಕಸ ಸಂಗ್ರಹಿಸುವವರು ಅದನ್ನು ಸಂಗ್ರಹಿಸುವ ವಿಧಾನದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ಸಭೆಯಲ್ಲಿ ಸ್ಥಳೀಯ ಮುಖಂಡರ ಜೊತೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಅಭಿಯಂತರ ವಿಶ್ವನಾಥ್, ಅಧೀಕ್ಷಕ ಅಭಿಯಂತರ ಕಬಾಡೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ : ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್..!
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.