2022ಕ್ಕೆ ಎಲ್ಲಾ ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ : ವಾಯುಪಡೆ ಮುಖ್ಯಸ್ಥ ಬದೌರಿಯಾ ಭರವಸೆ
Team Udayavani, Jun 19, 2021, 8:58 PM IST
ಹೈದರಾಬಾದ್: ಫ್ರಾನ್ಸ್ನಿಂದ ಭಾರತಕ್ಕೆ ಬರಬೇಕಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು 2022ರ ಹೊತ್ತಿಗೆ ಭಾರತೀಯ ವಾಯುಪಡೆಯನ್ನು (ಐಎಎಫ್) ಸೇರ್ಪಡೆಗೊಳ್ಳಲಿವೆ ಎಂದು ಐಎಎಫ್ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ ತಿಳಿಸಿದ್ದಾರೆ.
ಹೈದರಾಬಾದ್ನ ದಿಂಡಿಗಲ್ನ ವಾಯು ನೆಲೆಯಲ್ಲಿ ಮಾತನಾಡಿದ ಅವರು, “”ಜಗತ್ತಿನಾದ್ಯಂತ ಎರಡು ವರ್ಷ ಕೊರೊನಾ ನಿರ್ಬಂಧಗಳು ಜಾರಿಯಾಗಿದ್ದರಿಂದ ಕಳೆದ ವರ್ಷ ಹಾಗೂ ಈ ವರ್ಷ ಬರಬೇಕಿದ್ದ ರಫೇಲ್ ವಿಮಾನಗಳು ಸ್ವಲ್ಪ ತಡವಾಗಿ ಬರಬಹುದು. ಆದರೆ, ಉಳಿದೆಲ್ಲಾ ಕೆಲಸಗಳು ಅಂದುಕೊಂಡಂತೆ ನಡೆಯುತ್ತಿದೆ. ಈಗಾಗಲೇ ನಿರ್ಧರಿಸುವ ಗಡುವಿಗೆ ಇದ್ಯಾವುದೂ ಬಾಧೆಯಾಗದು. 2022ರ ಹೊತ್ತಿಗೆ ಎಲ್ಲಾ 36 ರಫೇಲ್ಗಳೂ ಭಾರತಕ್ಕೆ ಸಿಗುವುದು ಖಂಡಿತ” ಎಂದು ತಿಳಿಸಿದ್ದಾರೆ.
ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ನಡುವೆ ಏರ್ಪಟ್ಟಿರುವ ಗಡಿ ಬಿಕ್ಕಟ್ಟು ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಉಭಯ ದೇಶಗಳ ಸೇನಾ ಕಮಾಂಡರ್ ಮಟ್ಟದ ಮತ್ತೂಂದು ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಬದೌರಿಯಾ ತಿಳಿಸಿದ್ದಾರೆ.
ಇದನ್ನೂ ಓದಿ:ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ
ಭಾರತಕ್ಕೆ ಎಚ್ಚರಿಕೆ ಕರೆಗಂಟೆ
ಶ್ರೀಲಂಕಾದ ಕೆಲವು ಬಂದರುಗಳನ್ನು ಅಭಿವೃದ್ಧಿಗೊಳಿಸುವ ಕೆಲವು ಯೋಜನೆಗಳನ್ನು ಚೀನಾ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದು ಭಾರತಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಭಾರತೀಯ ನೌಕಾಪಡೆಯ ಉಪ ಅಡ್ಮಿರಲ್ ಅಶೋಕ್ ಕುಮಾರ್ ಹೇಳಿದ್ದಾರೆ. ಭಾರತದ ಸಾಗರೋತ್ತರ ಗಡಿಯನ್ನು ಸಂರಕ್ಷಿಸಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.