ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ
Team Udayavani, Jun 20, 2021, 10:34 AM IST
![ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ](https://www.udayavani.com/wp-content/uploads/2021/06/Untitled-1-388-620x372.jpg)
![ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ](https://www.udayavani.com/wp-content/uploads/2021/06/Untitled-1-388-620x372.jpg)
ಬೆಳಗಾವಿ: ಜಿಲ್ಲೆಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಮಳೆಯಾಗಿದೆ. ಆದರೆ ಪ್ರವಾಹ ಸ್ಥಿತಿ ಉದ್ಭವಿಸಿಲ್ಲ. ವೇದಗಂಗಾ ನದಿ ಮಾತ್ರ ಸ್ವಲ್ಪಮಟ್ಟಿಗೆ ಹೆಚ್ಚಿನ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿ ಕಾರಿ ಎಂ.ಜಿ.ಹಿರೇಮಠ ಹೇಳಿದರು
ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಅನುಭವದ ಆಧಾರದ ಮೇಲೆ 208 ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಲಾಗಿರುವ ಪ್ರವಾಹ ನಿರ್ವಹಣಾ ತಂಡಗಳ ಸದಸ್ಯರಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗ 26 ಬೋಟ್‌ಗಳು ಲಭ್ಯವಿದ್ದು, ನದಿತೀರದ ಗ್ರಾಮಗಳಲ್ಲಿ ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ಎರಡು ಎಸ್.ಡಿ.ಆರ್. ಎಫ್. ಹಾಗೂ ಒಂದು ಎನ್.ಡಿ.ಆರ್.ಎಫ್. ತಂಡಗಳು ಬೀಡು ಬಿಟ್ಟಿವೆ. ಕಾಳಜಿ ಕೇಂದ್ರದ ಸಮೀಪದಲ್ಲಿ 230 ಜಾನುವಾರು ಶಿಬಿರಗಳನ್ನು ಗುರುತಿಸಲಾಗಿದೆ. ಸಾಕಷ್ಟು ಮೇವು ದಾಸ್ತಾನು ಕೂಡ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಡಳಿತದ ಪಿಡಿ ಖಾತೆಯಲ್ಲಿ ಈಗ 92 ಕೋಟಿ ರೂ. ಲಭ್ಯವಿದ್ದು, ಪ್ರವಾಹ ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮಹಾರಾಷ್ಟ್ರದಿಂದ ಬಿಡುಗಡೆಯಾದ ನೀರು ಬೆಳಗಾವಿ ಮತ್ತಿತರ ನದಿ ಪಾತ್ರದ ಜಿಲ್ಲೆಗಳಿಗೆ ತಲುಪಲು ಒಂದು ದಿನ ಬೇಕಾಗುವುದರಿಂದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸಮಯಾವಕಾಶ ದೊರಕಲಿದೆ. ಆದ್ದರಿಂದ ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ನೀರಿನ ಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು ಮತ್ತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ಪ್ರಸ್ತುತ ಸನ್ನಿವೇಶದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಜನರು ಮತ್ತು ಜಾನುವಾರುಗಳರಕ್ಷಣೆ ಮತ್ತು ತಾತ್ಕಾಲಿಕ ಪುನರ್ವಸತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!](https://www.udayavani.com/wp-content/uploads/2025/02/belag-150x83.jpg)
![Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!](https://www.udayavani.com/wp-content/uploads/2025/02/belag-150x83.jpg)
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
![Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ](https://www.udayavani.com/wp-content/uploads/2025/02/15-8-150x90.jpg)
![Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ](https://www.udayavani.com/wp-content/uploads/2025/02/15-8-150x90.jpg)
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
![Belagavi: Rpe, mrder have increased due to the court system: Muthalik](https://www.udayavani.com/wp-content/uploads/2025/02/mutalik-150x84.jpg)
![Belagavi: Rpe, mrder have increased due to the court system: Muthalik](https://www.udayavani.com/wp-content/uploads/2025/02/mutalik-150x84.jpg)
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
![Belagavi: Return to public life in two weeks: Minister Lakshmi Hebbalkar](https://www.udayavani.com/wp-content/uploads/2025/02/laxmi-150x84.jpg)
![Belagavi: Return to public life in two weeks: Minister Lakshmi Hebbalkar](https://www.udayavani.com/wp-content/uploads/2025/02/laxmi-150x84.jpg)
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್