ಒಬ್ಬ ಸೋಂಕಿತ, ಆರೈಕೆಗೆ ಆರು ಜನ ಸಿಬ್ಬಂದಿ
Team Udayavani, Jun 20, 2021, 11:30 AM IST
ಕುಷ್ಟಗಿ: ಇಲ್ಲಿನ ಗಜೇಂದ್ರಗಡ ರಸ್ತೆಯಲ್ಲಿರುವ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ವಸತಿ ನಿಲಯದ 100 ಬೆಡ್ ಕೋವಿಡ್ ಕಾಳಜಿ ಕೇಂದ್ರದಲ್ಲಿ ಕೇವಲ ಒಬ್ಬ ಕೊರೊನಾ ಸೋಂಕಿತನ ಆರೈಕೆಗಾಗಿ 6 ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ತಾಲೂಕಿನಲ್ಲಿ ಕೊರೊನಾ ಹಾವಳಿ ತಗ್ಗಿದ್ದು, ಶನಿವಾರ 4 ಜನರಿಗೆ ಸೋಂಕು ದೃಢವಾಗಿದೆ.
ತಾಲೂಕಿನ 6 ಕೋವಿಡ್ ಕಾಳಜಿ ಕೇಂದ್ರಗಳ ಪೈಕಿ ಸೋಂಕಿತರಿಲ್ಲ ಕಾರಣದಿಂದ ಈಗಾಗಲೇ 4 ಕೋವಿಡ್ ಕಾಳಜಿ ಕೇಂದ್ರಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಕುಷ್ಟಗಿಯ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ಡೆಡಿಕೇಟ್ ಕೋವಿಡ್ ಕೇರ್ ಸೆಂಟರ್‌ನಲ್ಲಿ 5 ಜನ, ಹನುಮಸಾಗರ ಕಾಳಜಿ ಕೇಂದ್ರದಲ್ಲಿ 6 ಜನ ದಾಖಲಾಗಿದ್ದಾರೆ. ಕುಷ್ಟಗಿ ಕಾಳಜಿ ಕೇಂದ್ರದಲ್ಲಿ ಕಳೆದ ಮೂರು ದಿನಗಳಿಂದ ಒಬ್ಬ ಸೋಂಕಿತನಿದ್ದು, ನಾಲ್ವರು ಆರೋಗ್ಯ ಇಲಾಖೆ ಸಿಬ್ಬಂದಿ, ಇಬ್ಬರು ಗೃಹರಕ್ಷಕರು ಪಾಳೆ ಪ್ರಕಾರ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಕುರಿತು ತಹಶೀಲ್ದಾರ್ ಎಂ. ಸಿದ್ದೇಶ ಪ್ರತಿಕ್ರಿಯಿಸಿ, ತಾಲೂಕಿನಲ್ಲಿರುವ ಕೋವಿಡ್ ಕಾಳಜಿ ಕೇಂದ್ರಗಳನ್ನು ಡಿಸಿ ಆದೇಶ ನೀಡುವವರೆಗೂ ಸ್ಥಗಿತಗೊಳಿಸುವುದಿಲ್ಲ. ಎಲ್ಲವೂ ಚಾಲ್ತಿಯಲ್ಲಿದ್ದು, ಕೊರೊನಾ ಸೋಂಕು ಪ್ರಕರಣ ದೃಢವಾದರೆ ದಾಖಲಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.