ಕಲಬುರಗಿಯ ಜಿಮ್ಸ್ ನಲ್ಲಿ ಅತ್ಯಾಚಾರ ಯತ್ನ ನಡೆಸಿದ್ದ ಆರೋಪಿಯ ಹಳೆಯ ಹೀನ ಕೃತ್ಯ ಬಯಲು


Team Udayavani, Jun 20, 2021, 11:39 AM IST

Untitled-1

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರ ಯತ್ನದ ಪ್ರಕರಣದ ಆರೋಪಿ, ಈ ಹಿಂದೆಯೂ ಕೂಡ ಆಸ್ಪತ್ರೆಯಲ್ಲೇ ಇಂತಹದೊಂದು ಕೃತ್ಯಕ್ಕೆ ಯತ್ನಿಸಿದ್ದ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಜೂ.9ರಂದು ಕೋವಿಡ್ ವಾರ್ಡ್ ನಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಪ್ರೇಮಸಾಗರ ಅಲಿಯಾಸ್ ಪಿಂಟು ಎಂಬುವನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.  ಆಸ್ಪತ್ರೆಯಲ್ಲೇ ನಡೆದಿರುವ ಈ ಅತ್ಯಾಚಾರ ಯತ್ನ ಘಟನೆ ಸಾರ್ವಜನಿಕರ ಆಘಾತಕ್ಕೆ ಕಾರಣವಾಗಿತ್ತು. ಅಲ್ಲದೇ, ಮೂರು ದಿನಗಳ ಹಿಂದೆ ಅತ್ಯಾಚಾರ ಯತ್ನಕ್ಕೆ ಒಳದಾಗಿದ್ದ ಮಹಿಳೆ ಸಾವನ್ನಪ್ಪಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಇದೇ ಆರೋಪಿ ಪಿಂಟು ಈ ಹಿಂದೆ ಕೂಡ ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಲಿಫ್ಟ್ ನಲ್ಲಿ ಹೋಗುತ್ತಿದ್ದಾಗ ಈ ಆರೋಪಿ ಹಿರಿಯ ಮಹಿಳೆ ಮೇಲೆ ಕೈ ಹಾಕಿ ಕೆಟ್ಟದ್ದಾಗಿ ನಡೆದುಕೊಂಡಿದ್ದು ಬಯಲಾಗಿದೆ.

ಇದನ್ನೂ ಓದಿ: ತೀರ್ಥಹಳ್ಳಿ: ಅಪ್ರಾಪ್ತೆ ಮದುವೆಯಾಗಿ ಅತ್ಯಾಚಾರ! : ಯುವಕ ಅಂದರ್

ಅಂದೇ ಈ ವಿಷಯ ತಿಳಿದ ಮಹಿಳೆಯ ಕುಟುಂಬಸ್ಥರು ಆರೋಪಿಯನ್ನು ಹಿಡಿದಿದ್ದರು. ಆಸ್ಪತ್ರೆಯಲ್ಲೇ ಆರೋಪಿಗೆ ಕುಟುಂಬಸ್ಥರು ಮತ್ತು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಥಳಿಸಿದ್ದರು‌. ಆರೋಪಿ ಪಿಂಟುಗೆ ಥಳಿಸಿ ಎಚ್ಚರಿಕೆ ನೀಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.

ಅಂದೇ ಆರೋಪಿ ಪಿಂಟು ವಿರುದ್ಧ ಆಸ್ಪತ್ರೆಯವರು ಪೊಲೀಸರಿಗೆ ದೂರು ನೀಡಿ, ಆತನ ಬಂಧನಕ್ಕೆ ಕ್ರಮ ವಹಿಸಿದ್ದರೆ, ಈಗ ಮತ್ತೊಂದು ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯಾಚಾರ ಯತ್ನದಂತಹ ಪ್ರಕರಣಗಳು ನಡೆಯುವುದು ತುಂಬಾ ಆತಂಕಕಾರಿ. ರಾಜ್ಯ ಸರ್ಕಾರ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಈ ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕ್ರಮ ಜರುಗಿಸಬೇಕೆಂದು ಮಾನವ ಹಕ್ಕುಗಳ ಹೋರಾಟಗಾರ ರಿಯಾಜ್ ಖತೀಬ್ ಆಗ್ರಹಿಸಿದ್ದಾರೆ.

ಇನ್ನು, ಆರೋಪಿ ಪಿಂಟು ಖಾಸಗಿ ಆಂಬ್ಯಲೆನ್ಸ್ ಚಾಲಕನಾಗಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿನ ಮೃತ ದೇಹಗಳನ್ನು ಸಾಗಿಸುತ್ತಿದ್ದ. ಕೋವಿಡ್ ಸೋಂಕಿತೆ ಮೇಲೆ ಅತ್ಯಾಚಾರ ಯತ್ನದ ಘಟನೆಯಲ್ಲಿ ಆರೋಪಿ ವಿರುದ್ಧ  ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.‌

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.