ಸ್ವಿಸ್ ಬ್ಯಾಕ್ ನಲ್ಲಿನ ಭಾರತೀಯರ ಠೇವಣಿಯ ವಿವರ ಕೇಳಿದ ಹಣಕಾಸು ಸಚಿವಾಲಯ..!
Team Udayavani, Jun 20, 2021, 5:28 PM IST
ನವ ದೆಹಲಿ : ಭಾರತೀಯರು ಸ್ವಿಸ್ ಬ್ಯಾಂಕ್ ನಲ್ಲಿ ಹೊಂದಿರುವ ಠೇವಣಿಗಳ ಕುರಿತು ಮಾಹಿತಿ ಒದಗಿಸುವಂತೆ ಕೇಂದ್ರ ಸರ್ಕಾರವು ಬ್ಯಾಂಕ್ ನ ಉನ್ನತ ಅಧಿಕಾರಿಗಳನ್ನು ಕೇಳಿದೆ.
ವೈಯಕ್ತಿಕ ಹಾಗೂ ಸಾಂಸ್ಥಿಕ ಖಾತೆಗಳಲ್ಲಿ 2020ರಲ್ಲಿ ಇಟ್ಟಿರುವ ಮೊತ್ತದಲ್ಲಿ ಆಗಿರುವ ಬದಲಾವಣೆಗಳಿಗೆ ಸಂಭವನೀಯ ಕಾರಣಗಳನ್ನು ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯ ಸ್ವಿಸ್ ಬ್ಯಾಂಕ್ ನನ್ನುಯ ಕೇಳಿದ್ದು, ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರು ನೇರವಾಗಿ ಠೇವಣಿ ಇಡುತ್ತಿರುವ ಪ್ರಮಾಣವು 2019 ರಿಂದ ಇಳಿಕೆ ಕಾಣುತ್ತಿದೆ ಎಂದಷ್ಟೇ ಸಚಿವಾಲಯ ಹೇಳಿದೆ.
ಇದನ್ನೂ ಓದಿ : ಕುಂಜೂರು ಶ್ರೀ ದುರ್ಗಾ ಸೇವಾ ಸಮಿತಿಯ ವತಿಯಿಂದ ಕೊರಗ ಕುಟುಂಬಗಳಿಗೆ ಸವಲತ್ತು ವಿತರಣೆ
‘ಭಾರತದವರು ಸ್ವಿಸ್ ಬ್ಯಾಂಕ್ ಗಳಲ್ಲಿ ಇಟ್ಟಿರುವ ಹಣದ ಮೊತ್ತವು 2020ರಲ್ಲಿ 20,706 ಕೋಟಿಗೆ ಏರಿಕೆಯಾಘಿದ್ದು, ಬೇರೆ ಬೇರೆ ಹಣಕಾಸು ಉತ್ಪನ್ನಗಳ ಮೂಲಕ ಭಾರತದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ಸ್ವಿಸ್ ಬ್ಯಾಂಕ್ ಗಳಲ್ಲಿ ಇಷ್ಟು ಮೊತ್ತವನ್ನು ಇರಿಸಲಾಗಿದೆ.
13 ವರ್ಷಗಳಿಂದೀಚೆಗಿನ ಅತಿ ದೊಡ್ಡ ಮೊತ್ತ ಇದಾಗಿದೆ ಎಂದು ಸ್ವಿಸ್ ಬ್ಯಾಂಕ್ ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಭಾರತೀಯ ಮೂಲದ ಖಾತೆದಾರರು ಹಾಗೂ ಸಂಸ್ಥೆಗಳು ಇಟ್ಟಿರುವ ಠೇವಣಿಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಕೇಳಿದೆ.
ಇನ್ನು, ಭಾರತೀಯ ಕಂಪನಿಗಳ ಹೆಚ್ಚುತ್ತಿರುವ ವ್ಯಾಪಾರ ವಹಿವಾಟು, ಭಾರತದಲ್ಲಿ ನೆಲೆಗೊಂಡಿರುವ ಸ್ವಿಸ್ ಬ್ಯಾಂಕ್ ಶಾಖೆಗಳ ವ್ಯವಹಾರ ಹಾಗೂ ಸ್ವಿಸ್ ಮತ್ತು ಭಾರತೀಯ ಬ್ಯಾಂಕುಗಳ ನಡುವಿನ ಅಂತರ-ಬ್ಯಾಂಕ್ ವಹಿವಾಟಿನ ಹೆಚ್ಚಳ ಸೇರಿದಂತೆ ಇನ್ನೂ ಹಲವು ಕಾರಣಗಳಿಂದಾಗಿ ಠೇವಣಿಯಲ್ಲಿ ಹೆಚ್ಚಳ ಆಗಿರುವ ಸಾಧ್ಯತೆಯೂ ಇದೆ ಎಂದು ಸಚಿವಾಲಯ ತಿಳಿಸಿದೆ.
ಆದರೇ, ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರು ಇಟ್ಟಿದ್ದಾರೆ ಎಂದು ಹೇಳಲಾದ ಬ್ಲ್ಯಾಕ್ ಮನಿ ಅಥವಾ ‘ಕಪ್ಪುಹಣ’ದ ಬಗ್ಗೆ ಸಂಬಂಧಿಸಿದ ವಿವರ ಇದಲ್ಲ. ಬೇರೆ ದೇಶದ ಕಂಪನಿಗಳ ಹೆಸರಿನಲ್ಲಿ ಭಾರತೀಯರು, ಎನ್ ಆರ್ ಐಗಳು ಅಥವಾ ಇತರರು ಹೊಂದಿರಬಹುದಾದ ಹಣವನ್ನೂ ಇದು ಒಳಗೊಂಡಿಲ್ಲ ಎಂದು ಸಚಿವಾಲಯವು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ : ‘ಪಾನಿಪುರಿ’ ಹೆಸರೇ ಬಾಯಲ್ಲಿ ನೀರೂರಿಸುತ್ತದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.