ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ: ಸಚಿವ ಈಶ್ವರಪ್ಪ
Team Udayavani, Jun 20, 2021, 8:22 PM IST
ದಾವಣಗೆರೆ: ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಒಂದು ಕುಟುಂಬವಿದ್ದಂತೆ. ಆ ಕುಟುಂಬದಲ್ಲಿರುವ ಸದಸ್ಯರಲ್ಲಿ ಒಂದೊಂದು ಅಭಿಪ್ರಾಯಗಳು, ಗೊಂದಲಗಳು ಸಾಮಾನ್ಯ ಎಂದರು.
ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ನಾಲ್ಕು ಗೋಡೆಗಳ ಮಧ್ಯೆ ಎಲ್ಲ ಶಾಸಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಗಾಗಿಯೇ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಅರ್ಥೈಸುವುದು ಸರಿಯಲ್ಲ. ಮುಖ್ಯಮಂತ್ರಿಗಳ ಬದಲಾವಣೆ ಪ್ರಸ್ತಾಪವೇ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅರುಣ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ಬಂದಿದೆ. ಪಕ್ಷದ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಪಕ್ಷ ಕಟ್ಟಲು ಹೊಸ ಸ್ಫೂರ್ತಿ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಲು ಸಲಹೆ-ಸೂಚನೆ ನೀಡಿದ್ದಾರೆ ಎಂದರು.
ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಎಚ್.ವಿಶ್ವನಾಥ್ ಮಾಡಿದ ಭ್ರಷ್ಟಾಚಾರ ಆರೋಪದ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ವಿಶ್ವನಾಥ್ ಮಾಡಿರುವ ಆರೋಪದ ಕುರಿತು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಇಲಾಖೆ ಕಾರ್ಯದರ್ಶಿಗಳು ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಏನನ್ನೂ ಹೇಳಲು ಇಷ್ಟಪಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.