ದೂಡಾದಿಂದ ಅಮರ್ ಜವಾನ್ ಸ್ಮಾರಕ ನಿರ್ಮಾಣ
Team Udayavani, Jun 20, 2021, 8:26 PM IST
ದಾವಣಗೆರೆ : ಹುತಾತ್ಮ ಸೈನಿಕರ ನೆನಪಿಗಾಗಿ ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿನ ವರ್ತುಲ ರಸ್ತೆ ವೃತ್ತದ (ಸರ್ಕಾರಿ ನೌಕರರ ಸಮುದಾಯ ಭವನದ ಎದುರು) ಬಳಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಯ್ದಿರಿಸಲಾದ ಬಯಲು ಜಾಗದಲ್ಲಿ ಅಮರ್ ಜವಾನ್ ಸ್ಮಾರಕ ನಿರ್ಮಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು.
ದೂಡಾ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಮರ್ ಜವಾನ್ ಸ್ಮಾರಕದ ಜೊತೆಗೆ ಹುತಾತ್ಮರಾದ ಸೈನಿಕರ ನೆನಪಿಗಾಗಿ ದೇಶದಲ್ಲಿಯೇ ಉತ್ತಮವಾದ ಸ್ಮಾರಕ ಹಾಗೂ ಸೌಂದಯಕರಣ ಉದ್ಯಾನವನವನ್ನಾಗಿ ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರಾಧಿಕಾರದ ವತಿಯಿಂದ 63 ಲಕ್ಷ ರೂ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ.
ಉದ್ಯಾನವನಕ್ಕೆ ಹೆಚ್ಚುವರಿಯಾಗಿ ಪ್ರಾಧಿಕಾರದಿಂದ ಒಂದು ಕೋಟಿ ರೂ. ಹಣ ನಿಗದಿ ಮಾಡಿ ಹೆಚ್ಚು ಅಭಿವೃದ್ಧಿ ಮಾಡಲು ಸಂಸದ ಜಿ.ಎಂ. ಸಿದ್ದೇಶ್ವರವರು ಸೂಚನೆ ನೀಡಿದ್ದಾರೆ ಎಂದರು.
ಸೈನಿಕ ಸಂಘದ ಮಾಜಿ ಅಧ್ಯಕ್ಷ ಸತ್ಯಪ್ರಕಾಶ ಮಾತನಾಡಿ, ಮೈದಾನದ ಮಧ್ಯ ಭಾಗದಲ್ಲಿ ಫ್ಲಾಟ್‌ಫಾರ್ಮ್, ಕೆಳ ಭಾಗದಲ್ಲಿ ಪ್ರವಾಸಿಗರಿಗೆ ಧ್ಯಾನ ಮಾಡಲು ಒಂದು ಚಿಕ್ಕ ಕೊಠಡಿ ಹಾಗೂ ಮೈದಾನದ ಮೂಲೆಯಲ್ಲಿ (ಸರ್ಕಲ್) ಒಂದು ಓಪನ್ ಆಡಿಟೋರಿಯಂ ರೀತಿಯ ವೇದಿಕೆ ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕೆಂದು ಸಲಹೆ ನೀಡಿದರು. ನಕ್ಷೆಗಳನ್ನು ತಯಾರಿಸಿ ಕಚೇರಿಗೆ ಒಂದು ಡೆಮೋ ಮಾದರಿ ನೀಡಬೇಕೆಂದು ದೂಡಾ ಅಧ್ಯಕ್ಷರು ಆಯುಕ್ತರಿಗೆ ಮತ್ತು ಸೈನಿಕ ಸಂಘದವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.