ಎಚ್. ವಿಶ್ವನಾಥ್ ಪಕ್ಷ ಬಿಡಬಾರದು: ಈಶ್ವರಪ್ಪ
Team Udayavani, Jun 20, 2021, 8:36 PM IST
ಬಳ್ಳಾರಿ: ಎಚ್. ವಿಶ್ವನಾಥ್ ಅವರು ಬಿಜೆಪಿಯವರಲ್ವಾ, ಅವರು ಬಿಜೆಪಿಯಲ್ಲಿ ಇರುವುದಕ್ಕಾಗಿಯೇ ಎಂಎಲ್‌ಸಿ ಆಗಿದ್ದಾರೆ ಎನ್ನುವ ಮೂಲಕ ಎಂಎಲ್‌ಸಿ ಭಿಕ್ಷೆಯಲ್ಲ ಎಂದು ಹೇಳಿಕೆ ನೀಡಿರುವ ಎಚ್. ವಿಶ್ವನಾಥ್ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಲ್‌ಸಿ ಎಚ್.ವಿಶ್ವನಾಥ್ ಸೇರಿದಂತೆ 17 ಶಾಸಕರು ಬಿಜೆಪಿಗೆ ಬಂದಿದ್ದಕ್ಕೆ ರಾಜ್ಯದಲ್ಲಿ ಸರ್ಕಾರ ರಚಿಸಲು ಸಾಧ್ಯವಾಯಿತು. ಅವರ ಅಸಮಾಧಾನ ಏನೇ ಇದ್ದರೂ ಅದನ್ನು ಪಕ್ಷದಲ್ಲಿ ಬಗೆಹರಿಸಿಕೊಳ್ಳಬಹುದು. ಬಿಜೆಪಿ ತೊರೆಯುವುದು ಬೇಡ. ವೈಯಕ್ತಿಕವಾಗಿ ವಿಶ್ವನಾಥ್ ಅವರನ್ನು ಭೇಟಿಯಾಗಿಲ್ಲ. ಪಕ್ಷ ಹೇಳಿದರೆ ಭೇಟಿಯಾಗುವೆ ಎಂದು ತಿಳಿಸಿದರು.
ರಾಜ್ಯಕ್ಕೆ ಭೇಟಿ ನೀಡಿದ್ದ ಅರುಣ್ ಸಿಂಗ್ ಅವರ ಮುಂದೆ ಅಸಮಾಧಾನ ಸೇರಿದಂತೆ ಹಲವು ವಿಷಯ ಚರ್ಚೆಯಾಗಿದೆ. ಎಲ್ಲ ಸಮಸ್ಯೆಗಳನ್ನು ಆಲಿಸಿದ ಅರುಣ್‌ಸಿಂಗ್ ಅವರು, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರಲಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೂ ಮತ್ತೆ ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಮಾತನಾಡುವುದು ಸರಿಯಲ್ಲ. ಹಾಗೆ ಮಾತನಾಡಿದರೆ ಹೈಕಮಾಂಡ್ ಶಿಸ್ತುಕ್ರಮ ತೆಗೆದುಕೊಳ್ಳಲಿದೆ. ಪಕ್ಷದಲ್ಲಿ ಇಷ್ಟು ದಿನ ಅಸಮಾಧಾನ ಹೊರ ಹಾಕಿರೋದು ಸಾಕು. ಯಾರು ಯಾರ ವಿರುದ್ಧ ದೂರು ಕೋಡೋದು ಬೇಡ. ವಿಶ್ವನಾಥ್, ರೇಣುಕಾಚಾರ್ಯ, ಅರವಿಂದ ಬೆಲ್ಲದ್ ಯಾರೂ ಕೂಡಾ ಬಿಜೆಪಿ ಬಿಡಲ್ಲ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಬ್ರಹ್ಮ ಬಂದರೂ ಕಾಂಗ್ರೆಸ್ ಅ ಧಿಕಾರಕ್ಕೆ ಬರಲ್ಲ. ಅಲ್ಲಿ ಒಮ್ಮತವಿಲ್ಲ. ಅಷ್ಟಕ್ಕೂ ಕಾಂಗ್ರೆಸ್‌ನಲ್ಲಿ ಬಿ ಫಾರಂ ಕೊಡೋದು ಜಮೀರೋ ಅಥವಾ ಡಿಕೆಶಿನೋ, ಸಿದ್ದರಾಮಯ್ಯನವರೋ ತಿಳಿಯದಾಗಿದೆ ಎಂದು ಲೇವಡಿ ಮಾಡಿದರು.
ಪೋನ್ ಟ್ಯಾಪಿಂಗ್ ಬಗ್ಗೆ ಗೊಂದಲ ಬೇಡ. ತನಿಖೆ ಅದೇಶ ಮಾಡಲಾಗಿದೆ ಎಂದರು. ಇದಕ್ಕೂ ಮುನ್ನ ಈಶ್ವರಪ್ಪನವರು ಕುಟುಂಬ ಸಮೇತ ನಗರದ ಸಣ್ಣ ಮಾರುಕಟ್ಟೆ ಬಳಿಯ ಆರಾಧ್ಯ ದೇವತೆ ಚೌಡೇಶ್ವರಿ ದೇವಸ್ಥಾನದ ಶಿಲಾನ್ಯಾಸ ಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.