ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ: ಡಿಸಿ ಅಧಿಕೃತ ನಿವಾಸ ನವೀಕರಣ ಪ್ರಕರಣದ ತನಿಖೆಗೆ ಆದೇಶ
Team Udayavani, Jun 21, 2021, 2:17 PM IST
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಡಿಸಿ ಅಧಿಕೃತ ನಿವಾಸದಲ್ಲಿ ನವೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಡೆಸಿ ವರದಿ ನೀಡಲು ಕಂದಾಯ ಇಲಾಖೆಯು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯದೆ ಅಧಿಕೃತ ನಿವಾಸ ಜಲಸನ್ನಿಧಿಯಲ್ಲಿ ನವೀಕರಣ ಮಾಡಿದ್ದರು. ಕಟ್ಟಡದ ನೆಲಹಾಸು ನವೀಕರಣಕ್ಕೆ 16.50 ಲಕ್ಷ ಖರ್ಚು ಮಾಡಿದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ತನಿಖೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ:ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಾದೇಶಿಕ ಆಯುಕ್ತರಿಗೆ ಈ ಬಗ್ಗೆ ನಿರ್ದೇಶನ ನೀಡಲಾಗದ್ದು, ಏಳು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯು ಪಾರಂಪರಿಕ ಕಟ್ಟಡವಾಗಿದೆ. ಈ ಕಟ್ಟಡದಲ್ಲಿ ನವೀಕರಣ ಮಾಡಬೇಕಾದರೆ ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ ರೋಹಿಣಿ ಸಿಂಧೂರಿ ಅವರು ಯಾವುದೇ ಪೂರ್ವಾನುಮತಿ ಪಡೆಯದೆ ನವೀಕರಣ ಮಾಡಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.