ಬೀದರ: ಬಹುತೇಕ ಚಟುವಟಿಕೆ ಪುನರಾರಂಭ

ನೈಟ್‌ ಕರ್ಫ್ಯೂ ಮತ್ತು ವಿಕೇಂಡ್‌ ಕಕರ್ಫ್ಯೂ ಈ ಹಿಂದಿನಂತೆ ಮುಂದುವರೆಯಲಿದೆ

Team Udayavani, Jun 21, 2021, 7:42 PM IST

Bidar

ಬೀದರ: ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿದ್ದ ಲಾಕ್‌ಡೌನ್‌ ನಿರ್ಬಂಧಗಳಿಂದ ಗಡಿ ಜಿಲ್ಲೆ ಬೀದರ ಸೋಮವಾರದಿಂದ ಮುಕ್ತವಾಗಲಿದೆ. ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದಾಖಲಾಗುತ್ತಿರುವ ಹಿನ್ನೆಲೆ ಕೆಲವು ಷರತ್ತುಗಳನ್ನು ಅನ್ವಯಿಸಿ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ಸಾರಿಗೆ ಸೇರಿ ಎಲ್ಲ ಚಟುವಟಿಕೆಗಳು ಆರಂಭಗೊಳ್ಳಲಿವೆ. ಅನ್‌ಲಾಕ್‌ಗಾಗಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಶೇ.5ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ದರ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಲಾಕ್‌ಡೌನ್‌ನಿಂದ ಮುಕ್ತಗೊಳಿಸಲಾಗಿದ್ದು, ಅದರಲ್ಲಿ ಬೀದರ ಜಿಲ್ಲೆ ಸಹ
ಸೇರಿದೆ. ಸಾರ್ವಜನಿಕ ಸಾರಿಗೆ, ವಾಣಿಜ್ಯ ಮತ್ತು ಕೈಗಾರಿಕೆ ಒಳಗೊಂಡಂತೆ ಎಲ್ಲ ಬಗೆಯ ಚಟುವಟಿಕೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ. ಹೆಚ್ಚು ಕಡಿಮೆ ಎರಡು ತಿಂಗಳ ನಂತರ ಜಿಲ್ಲೆಯಲ್ಲಿ ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ.

ಅವಕಾಶ ಯಾವುದಕ್ಕಿದೆ, ಯಾವುದಕ್ಕಿಲ್ಲ: ಲಾಕ್‌ಡೌನ್‌ನ ಆರಂಭದ ದಿನಗಳಲ್ಲಿ ಬೆಳಿಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿತ್ತು. ನಂತರ ವಾರದ ಹಿಂದೆ ಸಮಯದ ಅವಧಿಯನ್ನು ಮಧ್ಯಾಹ್ನ 2ರವರೆಗೆ ವಿಸ್ತರಿಸಲಾಗಿತ್ತು. ಈಗ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5ರವರೆಗೆ ಹೊಟೇಲ್‌, ರೆಸ್ಟೋರೆಂಟ್‌, ಕ್ಲಬ್‌ ಹಾಗೂ ಜಿಮ್‌ಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಇನ್ನೂ ಸಭೆ-ಸಮಾರಂಭಗಳು, ಪೂಜಾ ಕಾರ್ಯಕ್ರಮ, ರಾಜಕೀಯ ಸಮಾವೇಶ, ಮಾಲ್‌ ಮತ್ತು ಈಜು ಕೊಳಗಳಿಗೆ ಅವಕಾಶ ಇರುವುದಿಲ್ಲ. ನೈಟ್‌ ಕರ್ಫ್ಯೂ ಮತ್ತು ವಿಕೇಂಡ್‌ ಕಕರ್ಫ್ಯೂ ಈ ಹಿಂದಿನಂತೆ ಮುಂದುವರೆಯಲಿದೆ ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾಗಶಃ ಲಾಕ್‌ಡೌನ್‌ ತೆರವು ಬಳಿಕ ಜನರು ಮೈಮರೆಯದೇ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್
ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ನಿತ್ಯದ ವ್ಯಾಪಾರ ವಹಿವಾಟು ಮತ್ತು ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬೇಕು ಎಂದು ಮನವಿ ಮಾಡಿರುವ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ವಹಿಸುವ ಎಚ್ಚರಿಕೆ ನೀಡಿದೆ.

ಕೋವಿಡ್‌ ಅನ್‌ಲಾಕ್‌ ಹಿನ್ನೆಲೆ ಬೀದರ ಜಿಲ್ಲೆಯಲ್ಲಿ ಸೋಮವಾರದಿಂದ ಸಾರಿಗೆ ಸಂಚಾರ ಆರಂಭಗೊಳ್ಳಲಿದ್ದು, ಇದಕ್ಕಾಗಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯಲ್ಲಿ 520 ಬಸ್‌ಗಳ ಪೈಕಿ 200ಕ್ಕಿಂತ ಹೆಚ್ಚು ಬಸ್‌ಗಳು ರಸ್ತೆಗಿಳಿಯಲಿವೆ. ಸರ್ಕಾರದ ಮಾರ್ಗಸೂಚಿಯಂತೆ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಬಸ್‌ಗಳ ಕಾರ್ಯಾಚರಣೆ ನಡೆಸಲಾಗುವುದು. ಬೀದರನಿಂದ ಕಲುºರ್ಗಿ ಮತ್ತು ಜಿಲ್ಲೆಯ ಪ್ರತಿ ತಾಲೂಕುಗಳ ನಡುವೆ ಬಸ್‌ ಓಡಾಡಲಿವೆ. ಪ್ರಯಾಣಿಕರ ಆರೋಗ್ಯ ದೃಷ್ಟಿಯಿಂದ ಬಸ್‌ಗಳಲ್ಲಿ ಸ್ಯಾನಿಟೈಜರ್‌ನಿಂದ ಸ್ವಚ್ಛತೆ ಕಾರ್ಯ ಆಗಿದ್ದು, ಸಿಬ್ಬಂದಿಗಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಬೀದರ ವಿಭಾಗದ ಶೇ. 95ರಷ್ಟು ಸಿಬ್ಬಂದಿಗಳು ಈಗಾಗಲೇ ಕೊರೊನಾ ವ್ಯಾಕ್ಸಿನ್‌ ಪಡೆದುಕೊಂಡಿದ್ದಾರೆ.
ಸಿ.ಎಸ್‌ ಫುಲೇಕರ್‌, ವಿಭಾಗೀಯ ನಿಯಂತ್ರಣಾಧಿಕಾರಿ,
ಎನ್‌ಈಕೆಎಸ್‌ಆರ್‌ಟಿಸಿ, ಬೀದರ.

ಟಾಪ್ ನ್ಯೂಸ್

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.