ಮೊದಲ ದಿನ 52 ಸಾವಿರ ಜನರಿಗೆ ಲಸಿಕೆ
Team Udayavani, Jun 22, 2021, 9:53 AM IST
ಬಳ್ಳಾರಿ: 18ವರ್ಷ ಮೇಲ್ಪಟ್ಟವರಿಗೆ ಸೋಮವಾರದಿಂದ ಆರಂಭವಾದ ಕೋವಿಡ್ ಲಸಿಕಾಕರಣದಲ್ಲಿ ಗಣಿನಾಡು ಬಳ್ಳಾರಿ/ ವಿಜಯನಗರ ಜಿಲ್ಲೆಗಳಲ್ಲಿ ಮೊದಲ ದಿನವೇ 52 ಸಾವಿರ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.
ಆರೋಗ್ಯ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ತಾಲೂಕು 25, ಹಡಗಲಿ 24, ಹಗರಿಬೊಮ್ಮನಹಳ್ಳಿ 47, ಹರಪನಹಳ್ಳಿ 34, ಹೊಸಪೇಟೆ 30, ಕೂಡ್ಲಿಗಿ 26, ಸಂಡೂರು 19, ಸಿರುಗುಪ್ಪ 34 ಸೇರಿ ಒಟ್ಟು 241 ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆಮಾಡಲಾಗಿತ್ತು. ಈ ಪೈಕಿ ಮೊದಲ ದಿನವೇ 56 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಹೊಂದಿತ್ತು. ಆದರೆ, ನಿಗದಿತ ಗುರಿ ತಲುಪದಿದ್ದರೂ ಜಿಲ್ಲೆಯಾದ್ಯಂತ 52 ಸಾವಿರ ಜನರಿಗೆ ಮೊದಲ ದಿನ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಇಲಾಖೆ ಆರ್ ಸಿಎಚ್ ಅಧಿಕಾರಿ ಡಾ| ಅನಿಲ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಸ್ಥಳೀಯ ಜನಪ್ರತಿನಿ ಧಿಗಳ ನೇತೃತ್ವ: ಜಿಲ್ಲೆಯಾದ್ಯಂತ 241 ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದ್ದು, ಬಹುತೇಕ ಕಡೆ ಸ್ಥಳೀಯ ಜನಪ್ರತಿನಿಧಿಗಳು ನೇತೃತ್ವ ವಹಿಸಿದ್ದಾರೆ. ಬಳ್ಳಾರಿಯ ಮಹಾನಗರ ಪಾಲಿಕೆ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲಿ ಪಾಲಿಕೆ ನೂತನ ಸದಸ್ಯರು ನೇತೃತ್ವ ವಹಿಸಿ ಸ್ಥಳೀಯ ನಿವಾಸಿಗಳಿಗೆ ಲಸಿಕೆ ಹಾಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.