ಕೋವಿಡ್‌ 3 ನೇ ಅಲೆ ತಡೆಗೆ ಸಿದ್ಧತೆ ಅಗತ್ಯ: ಡಾ| ಅಂಶುಮಂತ್‌


Team Udayavani, Jun 22, 2021, 9:59 AM IST

ಕೋವಿಡ್‌ 3 ನೇ ಅಲೆ ತಡೆಗೆ ಸಿದ್ಧತೆ ಅಗತ್ಯ: ಡಾ| ಅಂಶುಮಂತ್‌

ಚಿಕ್ಕಮಗಳೂರು: ಕೋವಿಡ್‌ 3ನೇ ಅಲೆ ಮಕ್ಕಳ ಮೇಲೆ ಬಾಧಿ ಸಲಿದೆ ಎಂದು ತಜ್ಞರು ವರದಿ ನೀಡಿದ್ದು ಜಿಲ್ಲಾಡಳಿತ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ| ಅಂಶುಮಂತ್‌ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ 2ನೇ ಅಲೆ ತಡೆಯುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರವರು ಮತ್ತು ಆರೋಗ್ಯ ಮತ್ತು ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ಅವರು ಅಸಮಾಧಾನ ವ್ಯಕ್ತಪಡಿಸಿರುವುದು ಕೋವಿಡ್‌ ನಿಯಂತ್ರಿಸುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿಫಲವಾಗಿದೆ ಎಂಬುದು ತಿಳಿಯುತ್ತದೆ ಎಂದರು.

ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿ ಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಜಿಲ್ಲಾಡಳಿತ 3ನೇ ಅಲೆ ತಡೆಗೆ ಈಗಿನಿಂದಲೇ ತಯಾರಿ ನಡೆಸಿಕೊಳ್ಳಬೇಕು. ಜಿಲ್ಲೆಯ ಜನರ ಆತಂಕವನ್ನು ದೂರ ಮಾಡಬೇಕು. ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದರು.

ಲಸಿಕೆ ನೀಡುವ ಕಾರ್ಯ ಕುಂಠಿತವಾಗಿದ್ದು, ಲಸಿಕೆ ಕಾರ್ಯಕ್ಕೆ ಚುರುಕು ಮುಟ್ಟಿಸಬೇಕು ಎಂದ ಅವರು, ಎಲ್ಲರಿಗೂ ಲಸಿಕೆ ನೀಡುವಂತೆ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನಂತರ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುವುದಾಗಿ ತಿಳಿಸಿದೆ. ಉಚ್ಚ ನ್ಯಾಯಾಲಯದ ಜನರ ಮೇಲಿನ ಕಾಳಜಿಯನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕೋವಿಡ್‌ 3ನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಕೋವಿಡ್‌ ವಾರಿಯರ್ಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು. ಆರೋಗ್ಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಮಕ್ಕಳ ಪೋಷಕರಲ್ಲಿ ವ್ಯಾಕ್ಸಿನ್‌ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್‌ ದೂಷಿಸುವುದು, ತಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಮಾಡುವುದನ್ನು ಬಿಟ್ಟು ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಮುಂದಾಗಬೇಕು. ಸಂಸದರು, ಶಾಸಕರು, ಮುಖ್ಯಮಂತ್ರಿಗಳ ರಾಜ ಕೀಯ ಕಾರ್ಯದರ್ಶಿ, ವಿಧಾನ ಪರಿಷತ್‌ ಉಪಸಭಾಪತಿಗಳು ತಮ್ಮ ಪ್ರಭಾವವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಮುಂದಾಗಬೇಕು ಎಂದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.