ಬೃಹತ್‌ ಉದ್ಯಾನವನ ನಿರ್ಮಾಣ: ಬೆಳ್ಳಿ ಪ್ರಕಾಶ್‌


Team Udayavani, Jun 22, 2021, 10:17 AM IST

ಬೃಹತ್‌ ಉದ್ಯಾನವನ ನಿರ್ಮಾಣ: ಬೆಳ್ಳಿ  ಪ್ರಕಾಶ್‌

ಕಡೂರು: ಪಟ್ಟಣವು ದಿನೇ ದಿನೇ ಬೆಳೆಯುತ್ತಿದ್ದು ಜನಸಂಖ್ಯೆಯೂ ಹೆಚ್ಚುತ್ತಿದೆ. ಉತ್ತಮ ಆರೋಗ್ಯಕ್ಕಾಗಿ ಬೃಹತ್‌ ಉದ್ಯಾನವನ ನಿರ್ಮಾಣದ ಅವಶ್ಯಕತೆ ಇರುವುದರಿಂದ ಉದ್ಯಾನವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು.

ಪಟ್ಟಣದ ಪುರಸಭೆಯ ಪಂಪ್‌ಹೌಸ್‌ನ ಮುಂಭಾಗದ ಜಾಗದಲ್ಲಿ ಉದ್ಯಾನವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದ ಜನತೆಗೆ ವಾಯು ವಿಹಾರಕ್ಕಾಗಿ ಇಂದು ಉತ್ತಮ ಉದ್ಯಾನವನ ಅತ್ಯವಶ್ಯಕವಾಗಿ ಬೇಕಾಗಿತ್ತು. ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಮತ್ತು ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಪಂಪ್‌ಹೌಸ್‌ ಮುಂದೆ ಇರುವ ಈ ಜಾಗದಲ್ಲಿ ಉದ್ಯಾನವನನಿರ್ಮಾಣವಾಗಲಿದೆ. ಇದಕ್ಕೆ ಬೇಕಾದ ಸಹಕಾರವನ್ನು ಪುರಸಭೆಗೆ ನೀಡಲು ತಾವು ಸಿದ್ಧ ಎಂದರು.

ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಮಾತನಾಡಿ, ನಾಗರಿಕರಿಗೆ ವಾಯುವಿಹಾರಕ್ಕಾಗಿ ಒಂದು ಬೃಹತ್‌ ಉದ್ಯಾನವನ ನಿರ್ಮಾಣಕ್ಕಾಗಿ ಪುರಸಭೆಯ ಸಭೆಯಲ್ಲಿ ಸರ್ವ ಸದಸ್ಯರ ಒಪ್ಪಿಗೆ ಹಾಗೂ ಶಾಸಕ ಬೆಳ್ಳಿಪ್ರಕಾಶ್‌ ಅವರ ಸಲಹೆ, ಸಹಕಾರ ಪಡೆದು ಸುಮಾರು 36 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಸಲು ಈಗಾಗಲೇ 29 ಲಕ್ಷ ರೂ.ಗಳಿಗೆ ಟೆಂಡರ್‌ ಪ್ರಕ್ರಿಯೆ ಮುಗಿದಿದೆ ಎಂದರು.

6 ಎಕರೆ ಭೂಮಿಯಲ್ಲಿ ಬೃಹತ್‌ ಉದ್ಯಾನವನ ನಿರ್ಮಾಣ ಮಾಡಲಾಗುವುದು. ಪಾರ್ಕ್‌ ಒಳಭಾಗದಲ್ಲಿ ಸುತ್ತಲೂ ದೀಪ ಅಳವಡಿಸಲು 9 ಲಕ್ಷ ರೂ.ಗಳು ವೆಚ್ಚವಾಗಲಿದೆ ಎಂದರು.

ಉಪಾಧ್ಯಕ್ಷೆ ವಿಜಯ ಚಿನ್ನರಾಜ್‌, ಸದಸ್ಯರಾದ ಸಂದೇಶ್‌ಕುಮಾರ್‌ (ಸುಬ್ಬಣ್ಣ), ಮಂಜುಳಾ ಚಂದ್ರು, ಯತಿರಾಜ್‌, ಗೋವಿಂದರಾಜ್‌, ಸುಧಾ ಉಮೇಶ್‌, ತೋಟದ ಮನೆ ಮೋಹನ್‌, ಪುಷ್ಪಾ ಮಂಜುನಾಥ್‌, ಜ್ಯೋತಿ ಆನಂದ್‌, ಮೋಹನ್‌, ಹಾಲಮ್ಮ, ಯಾಸೀನ್‌, ಮಂಡಿ ಇಕ್ಬಾಲ್‌ ಮತ್ತು ಕಾಂತರಾಜ್‌, ಮಂಜುನಾಥ್‌ ಪಂಗ್ಲಿ, ಶಂಕರ್‌, ಪುರಸಭೆ ಮುಖ್ಯಾ ಧಿಕಾರಿ ಎಚ್‌. ಎನ್‌. ಮಂಜುನಾಥ್‌, ವೃತ್ತ ನಿರೀಕ್ಷಕ ಮಂಜುನಾಥ್‌, ಗುತ್ತಿಗೆದಾರ ಬಿಕಾಂ ಶ್ರೀನಿವಾಸ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

2

Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.