ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ: ಶ್ರೀನಿವಾಸ ಪೂಜಾರಿ
Team Udayavani, Jun 22, 2021, 11:08 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ(23-6-2021) ಬೆಳಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೆಲವು ಸಮಸ್ಯೆಗಳಾಗಿದ್ದವು. ಜವುಳಿ ವ್ಯಾಪರಸ್ಥರು ಸೇರಿದಂತೆ ಹಲವು ಅಂಗಡಿಗಳ ಮಾಲಕರು ಬದುಕಿ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ ಎಂದು ದೂರು ನೀಡುತ್ತಿದ್ದರು. ಎಲ್ಲಾ ಶಾಸಕರು ಲಾಕ್ ಡೌನ್ ಸಡಿಲ ಮಾಡಬೇಕೆಂದು ಆಗ್ರಹ ಮಾಡುತ್ತಿದ್ದರು. ಇದಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಚರ್ಚಿಸಿ ಜನಜೀವನಕ್ಕೆ ತೊಂದರಯಾಗದಂತೆ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!
ಆದರೆ ಈ ಸಂದರ್ಭದಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕು. ಎಲ್ಲೆಂದರಲ್ಲಿ ತಿರುಗಾಡಬಾರದು. ಲಸಿಕೆಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಬಾರದು. ಜನಜಂಗುಳಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.