ಯೋಗ ಜಗತ್ತಿಗೆ ಭಾರತದ ಅಮೂಲ್ಯ ಕೊಡುಗೆ

ಈಗ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಯೋಗ ಅಗತ್ಯವಾಗಿದೆ

Team Udayavani, Jun 22, 2021, 7:12 PM IST

Yoga

ಕಲಬುರಗಿ: ವಿಶ್ವ ಯೋಗ ದಿನವನ್ನು ಸೋಮವಾರ ಜಿಲ್ಲೆಯಲ್ಲಿ ಸರ್ಕಾರ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಗುಂಪು ಸೇರಿದ ಮನೆಗಳು ಮತ್ತು ಆನ್‌ಲೈನ್‌ ಮೂಲಕ ಆಚರಿಸಲಾಯಿತು. ಕೆಲವೆಡೆ ಮಾತ್ರ ಸಾಂಕೇತಿಕವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಯೋಗ ದಿನ ನಡೆಸಲಾಯಿತು.

ನಗರದ ಚಂದ್ರಶೇಖರ ಪಾಟೀಲ್‌ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆಯುಷ್‌ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಿಂಗುಲಾಂಬಿಕಾ ಆಯುರ್ವೇದ ಮಹಾವಿದ್ಯಾಲಯ ಸಹಯೋಗದಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆನ್‌ಲೈನ್‌ ತರಬೇತಿ ನೀಡುವ ಮೂಲಕ
ಆಚರಿಸಲಾಯಿತು. ಯೋಗಪಟು ಸುದೀಪ್‌ ಬಿ.ಮಾಳಗಿ ಹಾಗೂ ಹಿಂಗುಲಾಂಬಿಕಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರವೀಣಕುಮಾರ ಚೌಧರಿ ವಿಶೇಷ ತರಬೇತಿ ನೀಡಿದರು. ಜೂಮ್‌ ಆ್ಯಪ್‌  ಮೂಲಕ ಕಾರ್ಯಕ್ರಮದ ನೇರ ಪ್ರಸಾರ ಮತ್ತು ಆನ್‌ ಲೈನ್‌ ಮೂಲಕ ಯುವ ವಿದ್ಯಾರ್ಥಿಗಳಿಗೆ ತರಬೇತಿ
ನೀಡಲಾಯಿತು. ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಯುವಜನತೆ, ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದರು.

ಹಿಂಗುಲಾಬಿಕಾ ಆಯುರ್ವೇದಿಕ್‌ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಸ್ಮಿತಾ ಕಣ್ಮಸೆ ಅವರು ಯೋಗದ ವಿವಿಧ ಭಂಗಿಗಳ ಬಗ್ಗೆ ತಿಳಿಸಿದರು. ಅಲ್ಲದೇ, ಯೋಗಾಸನಗಳ ಉಪಯೋಗದ ಬಗ್ಗೆ ವಿವರಿಸಿದರು. ಜಿಲ್ಲಾ ಆಯುಷ್‌ ಅಧಿ ಕಾರಿ ಡಾ.ಗಿರಿಜಾ ಎಸ್‌.ಯು. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್‌ ನಾಯ್ಕ ಉಪಸ್ಥಿತರಿದ್ದರು.

ರೋಗದಿಂದ ಆರೋಗ್ಯ ರಕ್ಷಣೆ: ಯೋಗವು ಜಗತ್ತಿಗೆ ಭಾರತ ನೀಡಿದ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪ್ರಪಂಚದ ಆರೋಗ್ಯ ರಕ್ಷಣೆಗೆ ಇದು ಮುನ್ನುಡಿ ಬರೆದಿದೆ ಎಂದು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಉಪಸಭಾಪತಿ ಅರುಣಕುಮಾರ ಲೋಯ ಹೇಳಿದರು.

ನಗರದ ಕುಸನೂರ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಯುವ ರೆಡ್‌ಕ್ರಾಸ್‌ ಮತ್ತು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಯೋಗ ದಿನಾಚರಣೆ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಬಸವರಾಜ ಗಾದಗೆ ಮಾತನಾಡಿ, ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಯೋಗ ಪ್ರತಿಯೊಬ್ಬರಿಗೂ ಅವಶ್ಯ ಸಾಧನವಾಗಿದೆ ಎಂದರು.

ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಸಾಲಿಮಠ ಆನ್‌ಲೈನ್‌ ಮೂಲಕ ಯೋಗಾಭ್ಯಾಸ ಮಾಡಿಸಿದರು. ಆನ್‌ಲೈನ್‌ನಲ್ಲಿ 500ಕ್ಕೂ ಅಧಿಕ ಜನರು ಯೋಗಾಚರಣೆಯಲ್ಲಿ ಪಾಲ್ಗೊಂಡರು. ಪ್ರಮುಖರಾದ ಜಿ.ಎಸ್‌.ಪದ್ಮಾಜಿ, ಶಿವರಾಜ ಅಂಗಡಿ, ಡಾ.ಶಂಭುಲಿಂಗಪ್ಪ, ಡಾ.ಶರಣಗೌಡ ಬಿರಾದಾರ,
ಡಾ.ಶುಭಾಂಗಿ ಪಾಟೀಲ ಉಪಸ್ಥಿತರಿದ್ದರು.

ದೈನಂದಿನ ಜೀವನದಲ್ಲಿ ಯೋಗ: ಕರ್ನಾಟಕ ಪೀಪಲ್ಸ್‌ ಏಜ್ಯುಕೇಷನ್‌ ಸಂಸ್ಥೆಯ ಡಾ.ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲೂ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ
ಪ್ರಧಾನ ಕಾರ್ಯಾದಶಿ ಡಾ.ಮಾರುತಿರಾವ ಡಿ.ಮಾಲೆ ಮಾತನಾಡಿ, ಈಗ ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಯೋಗ ಅಗತ್ಯವಾಗಿದೆ ಎಂದರು.

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯತ್ಮಿಕ ಆರೋಗ್ಯಕ್ಕೆ ಯೋಗ ಮಹತ್ವ ಪಡೆದಿದೆ. ಅದರಲ್ಲೂ, ಪ್ರಸ್ತುತ ಕೊರೊನಾ ಸೋಂಕಿನಿನ ಬಿಕ್ಕಟ್ಟಿನಲ್ಲಿ ಯೋಗ ಅತ್ಯಂತ ಪ್ರಭಾವವಾಗಿದೆ. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಯೋಗ ಮಾಡಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ವಿಜಯಲಕ್ಷ್ಮೀ ಬಿರಾದಾರ ಅವರು ವಿವಿಧ ಯೋಗಾಸನಗಳನ್ನು ಹೇಳಿ ಕೊಟ್ಟರು. ಕಾಲೇಜಿನ ಪ್ರಾಚಾರ್ಯ ಪ್ರೊ. ಗಿರೀಶ ಮೀಶೆ, ಡಾ.ಚಂದ್ರಶೇಖರ ಶೀಲವಂತ, ಪ್ರೊ.ಸಿದ್ದಪ್ಪ ಎಂ. ಕಾಂತಾ, ಡಾ.ನಿರ್ಮಲಾ ಸಿರಗಾಪುರ, ನರೇಂದ್ರ ಪಾಟೀಲ, ದೇವೇಂದ್ರಪ್ಪ ತೇಲ್ಕರ, ಡಾ.ವಸಂತ ನಾಸಿ ಭಾಗವಹಿಸಿದ್ದರು.

ಪ್ರೊಫೆಸರ್‌ಗಳ ಯೋಗಾ-ಯೋಗ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕುಲಪತಿ ಪ್ರೊ.ದಯಾನಂದ ಅಗಸರ ನೇತೃತ್ವದಲ್ಲಿ ಹಿರಿಯ ಪ್ರಾಧ್ಯಾಪಕರು ಯೋಗಾಭ್ಯಾಸ ನಡೆಸಿದರು. ದೈಹಿಕ ಶಿಕ್ಷಣ ವಿಭಾಗದ ಒಳಾಂಗಣದ ಮುಂಭಾಗದ ಆವರಣದಲ್ಲಿ ಪ್ರೊ.ದಯಾನಂದ ಅಗಸರ, ಕುಲಸಚಿವ ಶರಣಬಸಪ್ಪ ಕೋಟ್ಯಪ್ಪಗೋಳ್‌, ಮೌಲ್ಯಮಾಪನ ಕುಲಸಚಿವ ಪ್ರೊ. ಸೋನಾರ ನಂದಪ್ಪ, ವಿತ್ತಾಧಿ ಕಾರಿ ಪ್ರೊ.ಬಿ.ವಿಜಯ, ಯೋಗಾ ಸಂಚಾಲಕ ಚಂದ್ರಕಾಂತ ಬಿರಾದಾರ, ವಿದ್ಯಾ ವಿಷಯಕ ಪರಿಷತ ಸದಸ್ಯ ರಾಜು ಕಗ್ಗನಮಡಿ, ದೈಹಿಕ ಶಿಕ್ಷಣ ವಿಭಾಗದ ಡಾ.ಎಂ.ಎಸ್‌.ಪಾಸೋಡಿ, ಡಾ.ಎನ್‌.ಜಿ.ಕಣ್ಣೂರ, ಡಾ.ಹನಮಂತ ಜಂಗೆ, ದೇವೇಂದ್ರಪ್ಪ ತೇಲ್ಕರ, ಜಯಪ್ರಕಾಶ ಕರಜಗಿ ವಿವಿಧ ಆಸನ ಪ್ರದರ್ಶಿಸಿದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.