ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

Team Udayavani, Jun 22, 2021, 8:15 PM IST

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಳದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಆದೇಶಿಸಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ಬೀದರ್‌ ಸೇರಿದಂತೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಸಚಿವ ಎಸ್‌.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ-1994ರ ಸೆಕ್ಷನ್‌ 10 (2) ಪ್ರಕಾರ ವಿಧಾನಮಂಡಳದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡಬೇಕು. ಅದೇ ರೀತಿ ಅಯೋಗದ ವರದಿ ಆಧರಿಸಿ ಲೋಕಾಯುಕ್ತ ಸಂಸ್ಥೆಯು 2016ರಲ್ಲಿ ನೀಡಿದ ವರದಿ ಮೇಲೆ ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್‌ 12 (2) ಪ್ರಕಾರ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಆ.8ಕ್ಕೆ ಮುಂದೂಡಿತು.

ಇದನ್ನೂ ಓದಿ :ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶನ ನೀಡಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ ಅದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್‌ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅದೇ ರೀತಿ 2016ರಲ್ಲಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಸೇರಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಬಳಿ ಇರುವ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub
ಉದಯವಾಣಿ ದಿನಪತ್ರಿಕೆ - Epaper