![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 23, 2021, 12:17 PM IST
ಧಾರವಾಡ: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಪ್ರತಿ ಮಕ್ಕಳ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ರೂ.ಗಳನ್ನು ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಕಮಲಾಪುರದಲ್ಲಿ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
ಹುಬ್ಬಳ್ಳಿ- ಧಾರವಾಡದಲ್ಲಿ ಮೂರು ಜನ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ 162 ಜನ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಮಕ್ಕಳ ಕಲ್ಯಾಣಕ್ಕಾಗಿ ಮುಖ್ಯಮಂತ್ರಿಗಳು ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಜಾರಿಗೆ ತಂದಿದ್ದಾರೆ. ಅಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು. ಎಸ್ಸೆಸ್ಸೆಲ್ಸಿ ನಂತರ ಗಂಡು ಮಗುವಿಗೆ ಉಚಿತವಾಗಿ ಲ್ಯಾಪ್ ಟಾಪ್ ಹೆಣ್ಣು ಮಗುವಿಗೆ ಉನ್ನತ ವ್ಯಾಸಂಗಕ್ಕಾಗಿ 1 ಲಕ್ಷ ರೂಪಾಯಿ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಇದನ್ನೂ ಓದಿ: ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಈಶ್ವರಪ್ಪ
ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದಲೂ ಬಾಲ ಸ್ವರಾಜ್ ಎಂಬ ಯೋಜನೆ ಜಾರಿಗೆ ತರಲಾಗಿದೆ. ಯಾವ ಮಕ್ಕಳು ಕೊರೊನಾದಿಂದ ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೋ ಅಂತಹ ಮಕ್ಕಳನ್ನು ಗುರುತಿಸಿ ನಮ್ಮ ಇಲಾಖೆ ಅಧಿಕಾರಿಗಳು ವೆಬ್ ಸೈಟ್‌ನಲ್ಲಿ ದಾಖಲು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರಬಹುದು ಎಂಬ ಉದ್ದೇಶದಿಂದ ಸರ್ಕಾರ ಈಗಲೇ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಪ್ರತಿ ತಾಲೂಕಿನಲ್ಲಿ ಹಾಸ್ಟೆಲ್ ಗುರುತಿಸಿ ಅಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗುತ್ತಿದೆ ತಾಯಿ, ಮಗು ಆ ಕ್ವಾರಂಟೈನ್‌ಲ್ಲಿ ಇರಬಹುದು. 18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ತೆರೆಯಲಾಗುತ್ತಿದೆ. ಅಲ್ಲಿ ಅವರಿಗೆ ಪೌಷ್ಟಿಕ ಆಹಾರದ ಜೊತೆಗೆ ಎಲ್ಲ ರೀತಿ ಸೌಲಭ್ಯ ನೀಡಲಾಗುವುದು ಎಂದರು.
ಇದನ್ನೂ ಓದಿ: ಫೇಸ್ ಬುಕ್ ನಲ್ಲಿ ಪರಿಚಯ: ಬಳಿಕ ಪ್ರೀತಿ-ಮದುವೆ; ಯುವತಿಯ ಮೃತದೇಹ ಪತ್ತೆ !
ಮುಖ್ಯಮಂತ್ರಿಗಳಿಗೆ ದೇವಿ ಶೆಟ್ಟಿ ನೇತೃತ್ವದ ಸಮಿತಿ ಶಾಲೆಗಳನ್ನು ತೆರೆಯಬಹುದು ಎಂದು ವರದಿ ನೀಡಿದೆ. ಈಗಾಗಲೇ ಕಾಲೇಜು ಹಂತದ ಶಾಲಾ, ಕಾಲೇಜುಗಳನ್ನು ಮಾತ್ರ ಹಂತ ಹಂತವಾಗಿ ತೆರೆಯಲಾಗುವುದು ಎಂದು ಸಿಎಂ ಹೇಳಿಕೆ ನೀಡಿದ್ದಾರೆ ಎಂದರು.
You seem to have an Ad Blocker on.
To continue reading, please turn it off or whitelist Udayavani.