ಮಕ್ಕಳ ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

ಕೊರೊನಾ 3ನೇ ಹಂತ ಮಕ್ಕಳನ್ನು ಬಾಧಿಸುವ ಶಂಕೆ­! ಉಸ್ತುವಾರಿ ಸಚಿವ ಕಾರಜೋಳ ಸೂಚನೆ 

Team Udayavani, Jun 23, 2021, 5:23 PM IST

013

ಬೆಳಗಾವಿ: ಸಂಭವನೀಯ ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ವರದಿಗಳಿವೆ. ಈ ಹಿನ್ನಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮೂರನೇ ಅಲೆ ಮಕ್ಕಳಿಗೆ ಬರುವ ಸಂಭವನೀಯತೆ ಇದೆ ಎಂಬ ಅಭಿಪ್ರಾಯವಿದ್ದರೂ ಇದರ ಬಗ್ಗೆ ಖಚಿತತೆ ಇಲ್ಲ. ಆದರೂ ಮಕ್ಕಳ ಚಿಕಿತ್ಸೆಗೆ ಬೇಕಾಗಿರುವ ಔಷಧಿ, ವೈದ್ಯಕೀಯ ಉಪಕರಣಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸಹ ಮಕ್ಕಳ ವೈದ್ಯರು ಲಭ್ಯವಿರಬೇಕು ಎಂದರು.

ತುರ್ತು ಸಂದರ್ಭದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಔಷಧಿಗಳ ಕೊರತೆ ಉಂಟಾಗಬಾರದು. ಏನೇ ಕೊರತೆ ಇದ್ದರೆ ಮುಂಚಿತವಾಗಿಯೇ ತಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.

ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಶೇ.3 ರಷ್ಟಿರುವುದು ಕಳವಳಕಾರಿಯಾಗಿದೆ. ಆದ್ದರಿಂದ ಈ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉತ್ತಮ ಕೆಲಸ ಮಾಡಿರುವ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ತಂಡದವರಿಗೆ ಕೃತಜ್ಞತೆ ಸಲ್ಲಿಸಿದರು.

ಬಿಮ್ಸ್‌ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಗೆ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ ಆಡಳಿತ ಉಸ್ತುವಾರಿಯಾಗಿರುವ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದರಿಂದ ಜನರಲ್ಲಿ ಸರಕಾರಿ ಆಸ್ಪತ್ರೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಮ್ಸ್‌ ಆಡಳಿತ ಉಸ್ತುವಾರಿ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರು, ಬಿಮ್ಸ್‌ ಆಸ್ಪತ್ರೆಯಲ್ಲಿ ಸ್ವತ್ಛತೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳಿದ್ದ ಹಿನ್ನಲೆಯಲ್ಲಿ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಅಗತ್ಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಅದೇ ರೀತಿ ಊಟೋಪಹಾರ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಮಾಡಬೇಕಿದೆ. ಬಿಮ್ಸ್‌ ಆವರಣದಲ್ಲಿ ಸಿಲಿಂಡರ್‌ ಗಳಿಗೆ ಆಕ್ಸಿಜನ್‌ ಮರುಪೂರಣ ಘಟಕ ಸ್ಥಾಪಿಸುವ ಅಗತ್ಯವಿದ್ದು ಇದರಿಂದ ತುರ್ತು ಚಿಕಿತ್ಸಾ ಘಟಕದ ಸಾಮಾನ್ಯ ವಾರ್ಡುಗಳಲ್ಲಿ ಇರುವ ರೋಗಿಗಳಿಗೆ ಕೂಡ ಸಿಲಿಂಡರ್‌ ಮೂಲಕ ಆಕ್ಸಿಜನ್‌ ಪೂರೈಸಬಹುದು ಎಂದು ವಿವರಿಸಿದರು.

ಒಂದು ಲಕ್ಷ ಲಸಿಕೆ ದಾಖಲೆ: ಸಾಕಷ್ಟು ಪೂರ್ವ ಸಿದ್ಧತೆಯ ಪರಿಣಾಮವಾಗಿ ಒಂದೇ ದಿನ ಒಂದು ಲಕ್ಷಕ್ಕೂ ಅಧಿಕ ಲಸಿಕೆ ನೀಡುವ ಮೂಲಕ ದಾಖಲೆ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಐದಕ್ಕಿಂತ ಹೆಚ್ಚು ಸೋಂಕುಗಳು ಕಂಡುಬಂದ ಜಿಲ್ಲೆಯ 150 ಹಳ್ಳಿಗಳನ್ನು ಸಂಪೂರ್ಣ ಸೀಲ್‌ ಡೌನ್‌ ಮಾಡಿದ ಪರಿಣಾಮ ಸೋಂಕು ನಿಯಂತ್ರಣ ಸಾಧ್ಯವಾಯಿತು. ಮುಂಬರುವ ದಿನಗಳಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಈಗ 2658 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.3.77 ಇದ್ದು ಸರಕಾರಿ ಆಸ್ಪತ್ರೆಗಳಲ್ಲಿ ಒಟ್ಟಾರೆ 567 ಆಕ್ಸಿಜನ್‌ ಬೆಡ್‌ ಗಳಿವೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ವಿ.ಮುನ್ಯಾಳ ಸಭೆಯ ಗಮನಕ್ಕೆ ತಂದರು. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ 268 ಮಕ್ಕಳ ಚಿಕಿತ್ಸೆಗೆ ಹಾಸಿಗೆಗಳು ಲಭ್ಯವಿವೆ. ಇದಲ್ಲದೇ ಬಿಮ್ಸ್‌ ನಲ್ಲಿ ಮಕ್ಕಳ ತುರ್ತು ನಿಗಾ ಘಟಕ ಕೂಡ ಆರಂಭಿಸಲಾಗಿದೆ ಎಂದು ಆರ್‌ ಸಿ ಎಚ್‌. ಡಾ.ಐ.ಪಿ.ಗಡಾದ ತಿಳಿಸಿದರು.

ಸಭೆಯಲ್ಲಿ ಶಾಸಕ ಅನಿಲ ಬೆನಕೆ, ನಗರ ಪೊಲೀಸ್‌ ಆಯುಕ್ತ ಡಾ.ಕೆ. ತ್ಯಾಗರಾಜನ್‌, ಜಿಪಂ ಸಿಇಒ ದರ್ಶನ್‌, ಎಸ್‌ಪಿ ಲಕ್ಷ್ಮಣ ನಿಂಬರಗಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

1

Udupi: ಅಧಿಕ ಲಾಭದ ಆಮಿಷ; ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.