ಡೀಸಿ ನಿವಾಸದಲ್ಲಿ ಈಜುಕೊಳ:ಕಾನೂನು ಬಾಹಿರ
Team Udayavani, Jun 23, 2021, 6:33 PM IST
ಮೈಸೂರು: ಜಿಲ್ಲಾಧಿಕಾರಿ ಅಧಿಕೃತ ಸರ್ಕಾರಿನಿವಾಸದಲ್ಲಿ ಈಜುಕೊಳ ನಿರ್ಮಾಣ ಬಗ್ಗೆಮೈಸೂರು ಪ್ರಾದೇಶಿಕ ಆಯುಕ್ತರಿಂದಸರ್ಕಾರಕ್ಕೆ 6 ಅಂಶಗಳ ನ್ಯೂನತಾತನಿಖಾ ವರದಿ ಸಲ್ಲಿಕೆಯಾಗಿದೆ.
ನ್ಯೂನತೆಗಳೇನು: ಮೈಸೂರು ಜಿಲ್ಲಾಧಿಕಾರಿಗಳಅಧಿಕೃತನಿವಾಸದಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿದ್ದು,ಅಂದಾಜು ಪಟ್ಟಿಗೆ ತಾಂತ್ರಿಕ ವರ್ಗದವರಿಂದಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.ಈಜುಕೊಳ ನಿರ್ಮಾಣ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕಮಂಜೂರಾತಿ ± ಡೆದಿಲ್ಲ. ಈಜುಕೊಳದನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇÍ ಇಲ್ಲ. ಕಾಮಗಾರಿನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.
ಪಾರಂಪರಿಕ ರಕ್ಷಣಾ ಸಮಿತಿಯಅನುಮೋದನೆ ಪಡೆದಿಲ್ಲ.ಜಿಲ್ಲಾಧಿಕಾರಿಗಳ ಅಧಿಕೃತನಿವಾರ್ಯ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಜಿಲ್ಲಾಧಿಕಾರಿಗಳ ಅಧಿಕೃತನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕಹಿತಾಸಕ್ತಿ ಹೊಂದಿರುವುದಿಲ್ಲ ಎಂದುವರದಿಯಲ್ಲಿ ತಿಳಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತನಿವಾಸ ಪಾರಂಪರಿಕ ಕಟ್ಟಡವಾಗಿದ್ದು,ನಿಯಮ ಬಾಹಿರವಾಗಿ ತಮ್ಮ ಅಧಿಕಾರದುರುಪಯೋಗ ಪಡಿಸಿಕೊಂಡು ನಿರ್ಗಮಿತಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ 32 ಲಕ್ಷರೂ. ವೆಚ್ಚದಲ್ಲಿ ಈಜು ಕೊಳ ನಿರ್ಮಾಣಮಾಡಿದ್ದು, ಈ ಬಗ್ಗೆ ಕ್ರಮತೆಗೆದುಕೊಳ್ಳುವಂತೆಶಾಸಕ ಸಾ.ರಾ. ಮಹೇಶ್ ಮುಖ್ಯಮಂತ್ರಿಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿಗೆಪತ್ರ ಬರೆದಿದ್ದರು. ಬಳಿಕ ಸರ್ಕಾರ ಈಜುಕೊಳನಿರ್ಮಾಣ ಸಂಬಂಧ ತನಿಖೆ ನಡೆಸಿವಾರದೊಳಗೆ ವರದಿ ನೀಡುವಂತೆ ಪ್ರಾದೇಶಿಕಆಯುಕ್ತರಿಗೆ ಆದೇಶ ನೀಡಿತ್ತು.
ಸದ್ಯಕ್ಕೆ ವರದಿಯಲ್ಲಿ ನಿರ್ಗಮಿತಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರುಪ್ರಕರಣಸಂಬಂಧಅಧಿಕಾರ ದುರುಪಯೋಗಮತ್ತು ನಿಯಮ ಮೀರಿರುವುದು ಕಂಡುಬಂದಿದ್ದು, ಈ ಬಗ್ಗೆ ಪ್ರಾದೇಶಿಕ ಆಯುಕ್ತರುಸರ್ಕಾರಕ್ಕೆ ವರದಿ ನೀಡಿದ್ದು, ಸರ್ಕಾರ ಏನುರೋಹಿಣಿ ಸಿಂಧೂರಿ ಮೇಲೆ ಯಾವ ಕ್ರಮಕೈಗೊಳ್ಳಲಿದೆ ಎಂಬುದನ್ನುಕಾದು ನೋಡಬೇಕಿದೆ. ಈ ನಡುವೆಪಾರಂಪರಿಕ ಕಟ್ಟಡವಾದ ಡೀಸಿಗಳ ಅಧಿಕೃತನಿವಾಸವನ್ನು ನವೀಕರಣ ಮಾಡಿರುವಸಂಬಂಧವೂ ತನಿಖೆ ನಡೆಯುತ್ತಿದ್ದು,ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.