ತಾಕತ್ತಿದ್ದರೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಿಸಲಿ: ರಾಮುಲು
Team Udayavani, Jun 23, 2021, 10:20 PM IST
ಚಿತ್ರದುರ್ಗ: ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ತಾಕತ್ತಿದ್ದರೆ ಕಾಂಗ್ರೆಸ್‌ನವರು ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಸಚಿವ ಶ್ರೀರಾಮುಲು ಸವಾಲೆಸೆದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ. ತಮ್ಮ ಹುಳುಕು ಮುಚ್ಚಿಟ್ಟು ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ ಹೇಳುತ್ತಿದ್ದಾರೆ. ಮೋದಿ ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ, ಅದು ಧೂಳಿಪಟ ಆಗುತ್ತಿದೆ ಎಂದರು.
ಕರ್ನಾಟಕದಲ್ಲಿಯೂ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಚ್ಚಾಟ ಇಲ್ಲ. ಶಾಸಕ ಅರವಿಂದ ಬೆಲ್ಲದ್ ಫೋನ್ ಟ್ಯಾಪ್ ವಿಚಾರ ತನಿಖೆ ನಂತರ ಸತ್ಯ ಬಯಲಾಗಲಿದೆ. ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ಸಿಡಿ ಪ್ರಕರಣ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ನಮ್ಮ ಪಕ್ಷ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸುವ ಪ್ರಶ್ನೆಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.