ಇಂದಿನಿಂದ ಸರಕಾರಿ ಬಸ್ ಸಂಚಾರ ಹೆಚ್ಚಳ
Team Udayavani, Jun 24, 2021, 4:40 AM IST
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಾಕ್ಡೌನ್ ತೆರವುಗೊಂಡಿದ್ದು, ಜನ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಉಡುಪಿ ಕೆಎಸ್ಆರ್ಟಿಸಿ ಘಟಕದಲ್ಲಿ ಜೂ.24ರಿಂದ ಹೆಚ್ಚುವರಿ ಬಸ್ ಓಡಾಟ ನಡೆಸಲು ನಿರ್ಧರಿಸಿದೆ.
ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆ ಗಳು, ನಿರ್ಮಾಣ ಕಾಮಗಾರಿ ಗಳು, ವೃತ್ತಿ ಬದುಕು ಮತ್ತೆ ಪ್ರಾರಂಭಗೊಂಡಿವೆ. ಬುಧವಾರ ನಗರದಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆ ಕೊರತೆಯ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ, ಕಾರು, ಆಟೋ ಸಂಚಾರ ನಗರದಲ್ಲಿ ಹೆಚ್ಚಾಗಿ ಕಂಡು ಬಂತು. ಇದರಿಂದಾಗಿ ನಗರದಲ್ಲಿ ಬೆಳಗ್ಗೆ 10ರಿಂದ 12ವರೆಗೆ ಟ್ರಾಫಿಕ್ ಜಾಂ ಉಂಟಾಗಿತ್ತು.
ಹೆಚ್ಚುವರಿ ಬಸ್ :
ಉಡುಪಿ -ಕುಂದಾಪುರ ಮಾರ್ಗವಾಗಿ 12 ಕೆಎಸ್ಆರ್ಟಿಸಿ ಬಸ್ಗಳು, ಕಾರ್ಕಳ ಮಾರ್ಗವಾಗಿ 7, ಮಂಗಳೂರು ಮಾರ್ಗ ವಾಗಿ 4 ಬಸ್ ಸೇರಿದಂತೆ ಒಟ್ಟು 53 ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ನಡೆಸಲಿದೆ. ಬುಧವಾರ ಒಟ್ಟು 41 ಬಸ್ಗಳು ಸಂಚರಿಸಿವೆ. ಮುಂದಿನ ದಿನದಲ್ಲಿ ಬೇಡಿಕೆಗೆ ತಕ್ಕಂತೆ ಬಸ್ಗಳನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತದೆ ಎಂದು ಉಡುಪಿ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಉದಯ ಕುಮಾರ್ ಶೆಟ್ಟಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.