ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷೆಯೇ ಬಲುದೊಡ್ಡ ಸವಾಲು


Team Udayavani, Jun 24, 2021, 6:00 AM IST

ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷೆಯೇ ಬಲುದೊಡ್ಡ ಸವಾಲು

ಕೋವಿಡ್‌ ಸೋಂಕಿನ ಎರಡನೇ ಅಲೆ ನಿಯಂತ್ರಣಕ್ಕೆ ಬರತೊಡಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಲವೊಂದು ನಿರ್ಬಂಧಗಳ ಹೊರತಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು, ಜನಜೀವನ ಸಹಜಸ್ಥಿತಿಗೆ ಮರಳತೊಡಗಿದೆ. ಇದರ ನಡುವೆ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೊರೊನಾ ನಿರೋಧಕ ಲಸಿಕೆ ನೀಡಿಕೆ ಪ್ರಕ್ರಿಯೆಯೂ ಸಮರೋಪಾದಿಯಲ್ಲಿ ಸಾಗಿದ್ದು ಕಳೆದೆರಡು ದಿನಗಳಿಂದೀಚೆಗೆ ದಾಖಲೆ ಪ್ರಮಾಣದಲ್ಲಿ ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ರಾಜ್ಯ ಸರಕಾರ ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಅಧಿಕೃತವಾಗಿ ಎಸೆಸೆಲ್ಸಿ ಪರೀಕ್ಷೆ ದಿನಾಂಕವಿನ್ನೂ ಘೋಷಣೆಯಾಗಿಲ್ಲವಾದರೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರ ಹೇಳಿಕೆಯಂತೆ ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ಸಲ್ಲಿಸಿರುವ ಪ್ರಾಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು ಇದರಂತೆ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸಿದ್ಧತೆ ನಡೆಸುವಂತೆ ತಿಳಿಸಲಾಗಿದೆ.

ಈ ಬಾರಿ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ವಿಭಿನ್ನ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು ಆರು ಪರೀಕ್ಷೆಗಳ ಬದಲಾಗಿ ಕೇವಲ ಎರಡು ಪರೀಕ್ಷೆಗಳು ನಡೆಯಲಿವೆೆ. ಗಣಿತ, ವಿಜ್ಞಾನ ಮತ್ತು ಸಮಾಜವಿಜ್ಞಾನ ಈ ಮೂರು ವಿಷಯಗಳನ್ನು ಒಳಗೊಂಡಂತೆ ಒಂದು ಕೋರ್‌ ವಿಷಯಗಳ ಪರೀಕ್ಷೆ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಇನ್ನೊಂದು ಪರೀಕ್ಷೆ ನಡೆಯಲಿದೆ.

ಪ್ರತಿಯೊಂದೂ ಪರೀಕ್ಷಾ ಕೊಠಡಿಯಲ್ಲಿ ಡೆಸ್ಕ್ಗೆ ಒಬ್ಬರಂತೆ ತಲಾ 12 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಪರೀಕ್ಷೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬಂದಿ ಕಡ್ಡಾಯವಾಗಿ ಕೊರೊನಾ ನಿರೋಧಕ ಲಸಿಕೆಯ ಕನಿಷ್ಠ ಒಂದು ಡೋಸ್‌ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸ್ವತ್ಛತೆಗೆ ಆದ್ಯತೆ, ಪ್ರತಿಯೊಂದೂ ಪರೀಕ್ಷಾ ಕೇಂದ್ರದಲ್ಲಿಯೂ ಆರೋಗ್ಯ ತಪಾಸಣೆ ಕೌಂಟರ್‌, ಥರ್ಮಲ್‌ ಸ್ಕ್ಯಾನರ್‌, ಪಲ್ಸ್‌ ಆಕ್ಸಿಮೀಟರ್‌, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಪ್ರತೀ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ, ಅಗತ್ಯಬಿದ್ದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ, ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಎರಡು ಕೊಠಡಿಗಳ ಮೀಸಲು..ಮತ್ತಿತರ ಮಾರ್ಗಸೂಚಿಗಳನ್ನು ಎಸ್‌ಒಪಿ ಹೊಂದಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಒಪಿಯ ಅನುಷ್ಠಾನವನ್ನು ಖಾತರಿಪಡಿಸುವ ಹೊಣೆಗಾರಿಕೆಯನ್ನು ಆಯಾಯ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ವಹಿಸಲಾಗಿದೆ.

ಕೊರೊನಾ ಎರಡನೇ ಅಲೆ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿದ್ದರೂ ಜನರು ಮತ್ತೆ ಕೋವಿಡ್‌ ಮಾರ್ಗಸೂಚಿಯನ್ನು ಗಾಳಿಗೆ ತೂರಲಾರಂಭಿಸಿದ್ದಾರೆ. ಈ ಬೆಳವಣಿಗೆಗಳ ನಡುವೆಯೇ ಕೋವಿಡ್‌ ಸೋಂಕಿನ ಮತ್ತೂಂದು ರೂಪಾಂತರಿ ವೈರಸ್‌ ಡೆಲ್ಟಾ ಪ್ಲಸ್‌ ಸೋಂಕು ತಗಲಿರುವ ಕೆಲವೊಂದು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು ಒಂದಿಷ್ಟು ಕಳವಳವನ್ನು ಮೂಡಿಸಿದೆ. ಸದ್ಯ 18ಕ್ಕಿಂತ ಕೆಳ ಹರೆಯದವರಿಗೆ ಲಸಿಕೆ ನೀಡಿಕೆ ಇನ್ನೂ ಆರಂಭಗೊಂಡಿಲ್ಲವಾದ್ದರಿಂದ ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುವುದನ್ನು ಖಾತರಿಪಡಿಸುವ ಹೊಣೆಗಾರಿಕೆ ಯೂ ಸರಕಾರದ ಮೇಲಿದೆ. ಪರೀಕ್ಷೆಗಿಂತಲೂ ವಿದ್ಯಾರ್ಥಿಗಳ ಸುರಕ್ಷೆಯೇ ಮೊದಲ ಆದ್ಯತೆಯಾಗಿರುವುದರಿಂದ ಇದು ಸರಕಾರದ ಪಾಲಿಗೆ ಬಲುದೊಡ್ಡ ಸವಾಲೇ ಆಗಿದೆ. ಈ ನಿಟ್ಟಿನಲ್ಲಿ ಸಂಬಂಧಿತ ಇಲಾಖೆ ಮತ್ತು ಜಿಲ್ಲಾಡಳಿತ ವಿದ್ಯಾರ್ಥಿಗಳು ಮತ್ತವರ ಹೆತ್ತವರ ಮನವೊಲಿಸುವ ಮತ್ತು ಅವರಲ್ಲಿ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು.

ಟಾಪ್ ನ್ಯೂಸ್

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.