ಹೈಕಮಾಂಡ್‌ ನಿರ್ಣಯಿಸಿದವರೇ ಸಿಎಂ : ಸತೀಶ ಜಾರಕಿಹೋಳಿ

| ಸಿದ್ದು-ಡಿಕೆಶಿ-ಖರ್ಗೆ-ಪರಮೇಶ್ವರ ಸಹಿತ ನಾಲ್ಕಾರು ಅಪೇಕ್ಷಿತರು | ನನಗಿನ್ನೂ ವಯಸ್ಸಿದೆ: ಸತೀಶ

Team Udayavani, Jun 24, 2021, 4:34 PM IST

23 bgk-1

ಬಾಗಲಕೋಟೆ: ಮುಂದಿನ ಚುನಾವಣೆಯಲ್ಲಿ ನಾವು 113 ಸ್ಥಾನ ಗೆಲ್ಲಬೇಕು. ಅದುವೇ ನಮ್ಮ ಮುಂದಿರುವ ಗುರಿ. ಆ ಬಳಿಕ ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕಾರು ಜನ ಸಿಎಂ ಆಗಬೇಕೆಂಬ ಆಸೆ ಹೊಂದಿದವರಿದ್ದಾರೆ. ಅವರವರ ಬೆಂಬಲಿಗರೂ ನಮ್ಮ ನಾಯಕರೇ ಸಿಎಂ ಆಗಲಿ ಎಂದು ಹೇಳುವುದು ಸಹಜ. ಹಾಗೆ ಹೇಳುವವರನ್ನು ನಿಯಂತ್ರಿಸಲು ಆಗಲ್ಲ. ಅದು ಅವರ ಅಭಿಮಾನದ ಮಾತುಗಳು. ಯಾರೆಲ್ಲ ಏನೇ ಅಭಿಮಾನ, ಹೇಳಿಕೆ ವ್ಯಕ್ತಪಡಿಸಿದರೂ, ಕೊನೆಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಮುಂದಿನ ಚುನಾವಣೆಯಲ್ಲಿ ನಾವು 113 ಸ್ಥಾನ ಗೆಲ್ಲಬೇಕು ಎಂಬುದೇ ನಮ್ಮ ಮುಂದಿನ ಗುರಿ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ನಾನು ಸಹಿತ ಎಲ್ಲರೂ ಗೆಲ್ಲಬೇಕು. ಸಿಎಂ ಯಾರು ಆಗಬೇಕು ಎಂಬುದು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ನಿರ್ಧರಿಸುತ್ತದೆ. ಯಾರು, ಯಾರನ್ನೂ ಸೋಲಿಸಲು ಕೆಲಸ ಮಾಡುವುದಿಲ್ಲ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ಖರ್ಗೆ, ಪರಮೇಶ್ವರ ಸಹಿತ ಎಲ್ಲರೂ ಸಿಎಂ ಆಗಬೇಕೆಂಬ ಬಯಕೆ ಅವರವರ ಬೆಂಬಲಿಗರಲ್ಲಿದೆ ಎಂದರು.

ನನಗೆ ಇನ್ನೂ ವಯಸ್ಸಿದೆ. ರಾಜಕೀಯದಲ್ಲಿ ಸಾಕಷ್ಟು ಬೆಳೆದಿದ್ದೇನೆ. ಈಗಲೂ ಬೆಳೆಯುತ್ತಿದ್ದೇನೆ. ನನಗೂ ಸಿಎಂ ಆಗಬೇಕೆಂಬ ಕನಸಿದೆ. ಆದರೆ, ಅದಕ್ಕೆ ಇನ್ನೂ ಸಾಕಷ್ಟು ಸಮಯವಿದೆ. ಈಗ ಯಾರು ಸಿಎಂ ಆಗಬೇಕೆಂದು ಬಯಸಿದ್ದಾರೋ ಅವರೆಲ್ಲ ಆಗಲಿ. ಬಳಿಕ ನಮಗೂ ಒಂದು ಕಾಲ ಬಂದಾಗ ನಾನು ಸಿಎಂ ಆಗುತ್ತೇನೆ ಎಂದರು.

ಜಮೀರ್‌ ಸಿಕ್ಸರ ಬಾರಿಸುತ್ತಾರೆ: ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕೆಂಬ ಶಾಸಕ ಜಮೀರ್‌ ಅಹ್ಮದ ಅವರ ಹೇಳಿಕೆ ಯಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿಲ್ಲ. ಅವರು ಅಭಿಮಾನ- ಪ್ರೀತಿಯಿಂದ ಹಾಗೆ ಹೇಳಿದ್ದಾರೆ. ಅವರು ಯಾವಾಗಲೂ ಸಿಕ್ಸರ್‌ ಬಾರಿಸುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಪರವಾಗಿ ಮತ್ತೂಮ್ಮೆ ಸಿಕ್ಸರ್‌ ಬಾರಿಸಿದ್ದಾರೆ. ಇದಕ್ಕೆ ಗೊಂದಲದ ಲೇಪನ ಮಾಡಬೇಕಿಲ್ಲ ಎಂದು ಹೇಳಿದರು.

ಸರ್ಕಾರ ಜೀವಂತವಾಗಿಲ್ಲ: ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಕೊರೊನಾ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರವಾಹ ವೇಳೆ ಸಂತ್ರಸ್ತರಿಗೆ ಸರ್ಕಾರ ಘೋಷಣೆ ಮಾಡಿದ ಅನುದಾನ ಇನ್ನೂ ಬಂದಿಲ್ಲ. ಮನೆ ಕಟ್ಟಿಕೊಡುವುದಾಗಿ ಹೇಳಿ, ವರ್ಷವಾದ್ರೂ ಮಾಡಿಲ್ಲ. ಇಂತಹ ಅವ್ಯವಸ್ಥೆಯ ಸರ್ಕಾರ ಎಂದೂ ಇರಲಿಲ್ಲ ಎಂದರು. ತೈಲ ಬೆಲೆ ಏರಿಕೆಯಿಂದ ಇಡೀ ದೇಶದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರಕ್ಕೆ ಬಡ ಜನರ ಮೇಲೆ ಕಾಳಜಿ ಇದ್ದರೆ ತಕ್ಷಣ ಬೆಲೆ ಇಳಿಕೆ ಮಾಡಬೇಕು. ಬೆಲೆ ಇಳಿಕೆಯಲ್ಲಿ ರಾಜ್ಯ ಸರ್ಕಾರಗಳ ಪಾತ್ರ ಇರುವುದಿಲ್ಲ. ಕೇಂದ್ರ ಸರ್ಕಾರ ಸರ್ಕಾರವೇ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.