ಡೆಲ್ಟಾ ಹಿನ್ನೆಲೆ : ಗೋವಾದಲ್ಲಿ ಕೆಲ ದಿನಗಳ ಕಾಲ ಕರ್ಫ್ಯೂ ಸಾಧ್ಯತೆ : ಪ್ರಮೋದ ಸಾವಂತ್
Team Udayavani, Jun 25, 2021, 4:49 PM IST
ಪಣಜಿ: ರಾಜ್ಯದಲ್ಲಿ ಜೂನ್ 28 ರವರೆಗೆ ಕರ್ಫ್ಯೂ ಜಾರಿಯಲ್ಲಿದ್ದು ಸದ್ಯ ಡೆಲ್ಟಾ ಪ್ಲಸ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಕೆಲ ದಿನಗಳ ಕಾಲ ಕರ್ಫ್ಯೂ ಮುಂದುವರೆಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಹಿಂದಿನಂತೆಯೇ ಒಪಿಡಿ ಸೇವೆ ಪುನರಾರಂಭಗೊಳ್ಳಲಿದೆ ಎಂದು ಸಿಎಂ ಸಾವಂತ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಪಣಜಿಯಲ್ಲಿ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು- ಗೋವಾ ಸರ್ಕಾರವು ಜೂನ್ 28 ರ ಬೆಳಿಗ್ಗೆ 7 ಗಂಟೆಯವರೆಗೆ ರಾಜ್ಯದಲ್ಲಿ ಸದ್ಯ ಕರ್ಫ್ಯೂ ಜಾರಿಯಲ್ಲಿದೆ. ಇದು ಮೂರನೇಯ ಬಾರಿ ಕರ್ಫ್ಯೂ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ರಾಜ್ಯದಲ್ಲಿ ಮೀನು ಮಾರುಕಟ್ಟೆಗಳನ್ನು ತೆರೆಯಲು ಅವಕಾಶ ನೀಡಿದೆ. ಇಷ್ಟೇ ಅಲ್ಲದೆಯೇ ಮಾಲ್ಗಳಲ್ಲಿಯ ಅಂಗಡಿಗಳನ್ನು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಡೆಲ್ಟಾಪ್ಲಸ್ ಕೋವಿಡ್ ರೂಪಾಂತರಿ ಪತ್ತೆಯಾದ ಹಿನ್ನೆಲೆಯಲ್ಲಿ ಗೋವಾ ಮಹಾರಾಷ್ಟ್ರ ಗಡಿಯಲ್ಲಿ ಸ್ಕ್ರೀನಿಂಗ್ ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿ ಖಾಸಗಿ ಪ್ರಯೋಗಾಲಯ ಸ್ಥಾಪಿಸಲು ಅನುಮತಿ ನೀಡಿದ್ದೇವೆ. ಗೋವಾದಲ್ಲಿ ಇದುವರೆಗೂ ಡೆಲ್ಟಾಪ್ಲಸ್ ರೂಪಾಂತರಿಯ ಯಾವುದೇ ಪ್ರಕರಣ ದೃಢಪಟ್ಟಿಲ್ಲ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.