ದಕ್ಷಿಣ ಕನ್ನಡ : ವಾರಾಂತ್ಯ ಕರ್ಫ್ಯೂ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
Team Udayavani, Jun 25, 2021, 9:10 PM IST
ಮಹಾನಗರ: ದಕ್ಷಿಣ ಕನ್ನಡದಲ್ಲಿ ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಸಂದರ್ಭ ಸಂಪೂರ್ಣ ಲಾಕ್‌ಡೌನ್ ಇದ್ದು, ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲೆಯ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಜತೆಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂ. 28ರ ಬೆಳಗ್ಗೆ 7ರ ವರೆಗೆ ಸಂಪೂರ್ಣ ಲಾಕ್‌ಡೌನ್ ಇರಲಿದ್ದು, ಹಾಲು ವಿತರಣೆ ಕೇಂದ್ರಗಳು, ಆಸ್ಪತ್ರೆ, ಕೆಲವು ಸರಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅವಕಾಶವಿದೆ. ಇತರ ಯಾವುದೇ ಚಟುವಟಿಕೆಗಳು ಇಲ್ಲದಿರುವುದರಿಂದ ಜನರ ಓಡಾಟದ ಆವಶ್ಯಕತೆಯೂ ಇರುವುದಿಲ್ಲ. ಸಂಪೂರ್ಣ ಬಂದ್ ಮಾಡುವುದರಿಂದ ಕೊರೊನಾ ಹರಡುವಿಕೆ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯ ಎಂದರು.
ಇದನ್ನೂ ಓದಿ :ನಗರಗಳಲ್ಲಿ ಸಂಪೂರ್ಣ ಅನ್‌ಲಾಕ್ ಜಾರಿಗೊಳಿಸಲು ಸಾಧ್ಯವಿಲ್ಲ: ಗೌರವ್ ಗುಪ್ತ
ಪರೀಕ್ಷೆ ಗುರಿ ಸಾಧಿಸಿ
ಜಿ.ಪಂ. ಸಿಇಒ ಡಾ| ಕುಮಾರ್ ಮಾತನಾಡಿ, ತಾಲೂಕುಗಳಿಗೆ ಪ್ರತೀ ದಿನ ನಿಗದಿ ಪಡಿಸಿರುವ ಕೊರೊನಾ ಪರೀಕ್ಷೆಯ ಗುರಿಯನ್ನು ಸಾಧಿಸ ಬೇಕು; ಜಿಲ್ಲೆಯಲ್ಲಿ ಸುಳ್ಯ ತಾಲೂಕನ್ನು ಹೊರತುಪಡಿಸಿದರೆ ಇತರ ತಾಲೂಕುಗಳಲ್ಲಿ ನಿಗದಿತ ಗುರಿ ಮುಟ್ಟುತ್ತಿಲ್ಲ; ಹೀಗಾಗದಂತೆ ಮುಂದಿನ ದಿನಗಳಲ್ಲಿ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಎಡಿಸಿ ಡಾ| ಪ್ರಜ್ಞಾ ಅಮ್ಮೆಂಬಳ, ಎಸಿ ಮದನ ಮೋಹನ್, ಡಿಎಚ್‌ಒ ಡಾ| ಕಿಶೋರ್ ಕುಮಾರ್ ಮೊದಲಾದವರಿದ್ದರು.
ಡಿಸಿ ಸೂಚನೆಯ ಮುಖ್ಯಾಂಶಗಳು
– ಕೆಮ್ಮು, ಶೀತ, ಜ್ವರ ಬಂದವರಿಗೆ ಕ್ಲಿನಿಕ್‌ಗಳಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಂತಹ ರೋಗಿಗಳ ಕೊರೊನಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಲೇಬೇಕು.
– ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬಂದಿ ಕೊರೊನಾ ಪೂರ್ಣ ಮುಕ್ತವಾಗಿದೆ ಎಂಬ ಮನೋಭಾವವನ್ನು ಹೊಂದದಿರಿ.
– ಸೋಂಕಿತರನ್ನು ಕಡ್ಡಾಯವಾಗಿ ಕೇರ್ ಸೆಂಟರ್‌ಗೆ ದಾಖಲಿಸಿ.
– ಕೊರೊನಾ ನಿರೋಧಕ ಚುಚ್ಚು ಮದ್ದುಗಳನ್ನು ಅಂದಂದೇ ಪೂರ್ಣ ಪ್ರಮಾಣದಲ್ಲಿ ನೀಡಲು ಯೋಜನೆ ರೂಪಿಸಿ. ಇದಕ್ಕಾಗಿ ನಿವೃತ್ತ ವೈದ್ಯರ ಬಳಕೆ ಸೂಕ್ತ.
ಅಂಗಡಿಗೆ ಮಕ್ಕಳನ್ನು ಕರೆತಂದರೆ ದಂಡ
3ನೇ ಅಲೆಯಲ್ಲಿ ಮಕ್ಕಳನ್ನು ಸೋಂಕು ಬಾಧಿಸುವ ಸಂಭವ ಇರುವ ಕಾರಣ ಹೆತ್ತವರು ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ಅಂಗಡಿ ಮುಂಗಟ್ಟುಗಳಿಗೆ ಕರೆತಂದರೆ ಅಂತಹವರಿಗೆ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ದ.ಕ. ಜಿಲ್ಲೆಯೊಳಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರವಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ಜನಸಂಚಾರ, ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಜಿಲ್ಲಾ ವ್ಯಾಪ್ತಿಯೊಳಗೆ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಕೆಎಸ್ಸಾರ್ಟಿಸಿ ಬಸ್ ಸಂಚಾರ ಇರುವುದಿಲ್ಲ. ಹೊರ ಜಿಲ್ಲೆಗಳಿಗೆ ತೆರಳುವ ಬಸ್‌ಗಳು ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಕಾರ್ಯಾಚರಣೆ ನಡೆಸಲಿವೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.