ಮುಗನೂರ ಶುದ್ಧ ನೀರಿನ ಘಟಕ ಅವ್ಯವಸ್ಥೆ  ಆಗರ


Team Udayavani, Jun 26, 2021, 9:49 AM IST

ಮುಗನೂರ ಶುದ್ಧ ನೀರಿನ ಘಟಕ ಅವ್ಯವಸ್ಥೆ  ಆಗರ

ಕಮತಗಿ: ಹುನಗುಂದ ತಾಲೂಕಿನ ಮುಗನೂರ ಗ್ರಾಮದ ಹೊರ ವಲಯದಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಘಟಕವು ಅವ್ಯವಸ್ಥೆಯ ಆಗರವಾಗಿದೆ. ನೀರನ್ನು ಶುದ್ಧೀಕರಿಸುವ ಘಟಕವು ಸಂಪೂರ್ಣ ಪಾಚಿಯಿಂದ ಕೂಡಿದೆ.

ಮುಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ಬಸವನಾಳ, ಮುಗನೂರ, ಅಂಬ್ಲಿಕೊಪ್ಪ, ಸುರಳಿಕಲ್ಲ, ಕಡಿವಾಲ-ಕಲ್ಲಾಪುರ, ಯರನಾಯಕನಾಳ ಹಾಗೂ ಬಸರಿಕಟ್ಟಿ ಗ್ರಾಮಗಳ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು ಎಂದುಸರ್ಕಾರವು ಕಳೆದ ಹಲವು ವರ್ಷಗಳ ಹಿಂದೆ ಮುಗನೂರ ಗ್ರಾಮದ ಹೊರ ವಲಯದ ಶುದ್ಧ ಕುಡಿಯುವ ನೀರನ್ನು ಸಂಗ್ರಹಿಸುವ ಘಟಕ ಆರಂಭಿಸಿದೆ. ಆದರೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಅಶುದ್ಧ ಕುಡಿಯುವ ನೀರಿನ ಘಟಕವಾಗಿದೆ.

ಆಲಮಟ್ಟಿ ಜಲಾಶಯದಿಂದ ಬಹುಗ್ರಾಮ ಕುಡಿಯವ ನೀರಿನ ಯೋಜನೆಗೆ ನೀರನ್ನು ಪೈಪ್‌ಲೈನ್‌ ಮೂಲಕ ಬಳಸಿಕೊಳ್ಳಲಾಗಿದೆ. ಮುಗನೂರ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರನ್ನು ಶುದ್ಧಿಕರಿಸಿ 8 ಗ್ರಾಮಗಳಿಗೆಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ.

ಘಟಕದ ಪ್ರದೇಶವು ಸಂಪೂರ್ಣ ಪಾಚಿಯಿಂದ ಕೂಡಿ ಅಶುದ್ಧವಾಗಿದ್ದು, ಕಳೆದ ಹಲವು ತಿಂಗಳಿನಿಂದ ಘಟಕ ಸ್ವತ್ಛಗೊಳಿಸಬೇಕು ಎಂದು ಸ್ಥಳೀಯರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ಶುದ್ಧ ಕುಡಿಯುವ ನೀರಿನ ಘಟಕದ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕೆಂಪುಮಣ್ಣು ಅಗೆಯುತ್ತಿದ್ದು, ಇದರ ಧೂಳು ಈ ನೀರನ್ನು ಸೇರಿಕೊಳ್ಳುತ್ತಿದೆ. ಇದೇ ಪ್ರದೇಶದಲ್ಲಿ ಮಧ್ಯಸೇವನೆ ಸೇರಿದಂತೆ ಇತರೆ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಶೀಘ್ರದಲ್ಲಿಯೇ ಈ ಘಟಕವನ್ನು ಸ್ವತ್ಛಗೊಳಿಸಿ ಸಾರ್ವಜನಿಕರಿಗೆ ಶುದ್ಧವಾದ ನೀರು ಪೂರೈಕೆಮಾಡಬೇಕು ಎಂದು ಗ್ರಾಮದ ಯುವಕರಾದಸಂಗಣ್ಣ ಗಂಜೀಹಾಳ, ಸಂಗಮೇಶ ಹೊರಕೇರಿ, ಮಹಾಂತೇಶ ಕಲಾದಗಿ, ನಜೀರ್‌ ಓಲೇಕಾರ ಆಗ್ರಹಿಸಿದ್ದಾರೆ.

ಸಾರ್ವಜನಿಕರಿಗೆ ಶುದ್ಧವಾದ ನೀರನ್ನುಪೂರೈಕೆ ಮಾಡುವ ಸಂಬಂಧ ಸರ್ಕಾರವು ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಿದ್ದು, ಅದು ಅವ್ಯವಸ್ಥೆಯ ಆಗರವಾಗಿದೆ. ಸ್ವತ್ಛತೆ ಮಾಡದೇ ಹಾಗೆಯೇ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ವತ್ಛಗೊಳಿಸಿಸಾರ್ವಜನಿಕರಿಗೆ ಶುದ್ಧ ನೀರು ಪೂರೈಸಬೇಕು.  –ಮಹಾಂತೇಶ ಕಲಾದಗಿಪ್ರಧಾನ ಕಾರ್ಯದರ್ಶಿ, ಕರವೇ ಗ್ರಾಮ ಘಟಕ , ಮುಗನೂರ

 

-ಪ್ರಕಾಶ ಆರ್‌. ಗುಳೇದಗುಡ್ಡ

 

ಟಾಪ್ ನ್ಯೂಸ್

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.