3ನೇ ಅಲೆ ತಡೆಗೆ ಸಕಲ ಸಿದ್ಧತೆ ಕೈಗೊಳ್ಳಿ: ರಾಜೇಗೌಡ
Team Udayavani, Jun 26, 2021, 12:49 PM IST
ಚಿಕ್ಕಮಗಳೂರು: ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರ ಸಮಿತಿ ವರದಿ ನೀಡಿದ್ದು ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಆಗ್ರಹಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಭೀಕರತೆ ಬಗ್ಗೆ ತಜ್ಞರ ಸಮಿತಿ ಮುಂಚಿತವಾಗಿ ಎಚ್ಚರಿಸಿದ್ದರೂ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷé ವಹಿಸಿದ್ದರಿಂದ ಸಾವು- ನೋವು ಉಂಟಾಯಿತು. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮೂರನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು. ದೇಶದಲ್ಲಿ 135 ಕೋಟಿ ಜನಸಂಖ್ಯೆಯಿದ್ದು, ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಸಾಧ್ಯವಾಗಿಲ್ಲ, ಲಸಿಕೆ ಉತ್ಪಾದನೆ ಸಂಸ್ಥೆಗೆ ಮುಂಗಡ ಹಣ ನೀಡದಿರುವುದರಿಂದ ಲಸಿಕೆ ಪೂರೈಕೆಯಲ್ಲಿ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿಲಸಿಕೆ ವಿತರಣೆ ವಿಳಂಬವಾಗುತ್ತಿದ್ದು ಲಸಿಕೆ ವಿತರಣೆಗೆ ವೇಗ ಮುಟ್ಟಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ವಿಫಲವಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್, ಔಷಧಿಗಾಗಿ ಪರದಾಡಬೇಕಾಯಿತು. ನನ್ನ ಕ್ಷೇತ್ರದಲ್ಲೇ 18 ವೆಂಟಿಲೇಟರ್ ಇದ್ದರೂ ಆಕ್ಸಿಜನ್ ಕೊರತೆಯಿಂದ ಬಳಕೆಗೆ ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೊರೊನಾ ಎರಡನೇ ಅಲೆಯಲ್ಲಿ ಭಾರೀ ಸಾವು- ನೋವುಗಳು ಉಂಟಾಗಿದ್ದು, ಜಿಲ್ಲೆಯಲ್ಲಿ 336 ಮಂದಿ ಮೃತಪಟ್ಟಿದ್ದಾರೆ. ಸರ್ಕಾರ ಸಾವಿನ ಲೆಕ್ಕವನ್ನು ಮುಚ್ಚಿಡುತ್ತಿದೆ. ದೇಶದಲ್ಲಿ 3 ಲಕ್ಷ 98 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಲೆಕ್ಕ ನೀಡುತ್ತಿದ್ದಾರೆ. ದೇಶದಲ್ಲಿಅಂದಾಜು 10 ಲಕ್ಷಕ್ಕೂ ಮೇಲ್ಪಟ್ಟು ಸೋಂಕಿತರು ಮೃತಪಟ್ಟಿದ್ದಾರೆ. ಸರ್ಕಾರ ಸಾವಿನ ಲೆಕ್ಕವನ್ನು ಸುಳ್ಳುನೀಡುತ್ತಿದೆ. ತಜ್ಞರು ಎಚ್ಚರಿಸಿದರೂ ಸರ್ಕಾರ ಸೋಂಕು ತಡೆಯಲು ತಯಾರಿ ನಡೆಸಿಕೊಳ್ಳಲಿಲ್ಲ, ಸರ್ವಪಕ್ಷಗಳಸಭೆ ಕರೆದು ಕ್ರಿಯಾಯೋಜನೆ ರೂಪಿಸಿ ಸಕಲ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಯಾವುದೇ ಸಿದ್ಧತೆ ಮಾಡಿಕೊಳ್ಳದ ಪರಿಣಾಮ ಸಮಸ್ಯೆ ಎದುರಿಸಬೇಕಾಯಿತು.
ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರಶಾಲಾ- ಕಾಲೇಜುಗಳ ಆರಂಭಕ್ಕೆ ಮುಂದಾಗಿದ್ದು, 18ರಿಂದ 45 ವರ್ಷದವರಿಗೆ ಇನ್ನೂ ಲಸಿಕೆ ನೀಡಿಲ್ಲ. ಶಾಲಾ- ಕಾಲೇಜು ತೆರೆಯಲು ಸರ್ಕಾರ ನಡೆಸಿರುವ ಸಿದ್ಧತೆ ಏನು ಎಂದು ಪ್ರಶ್ನಿಸಿದ ಅವರು, ಇನ್ನಾದರೂ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸರ್ವಪಕ್ಷಗಳ ಸಭೆ ಕರೆದು ಸಲಹೆ- ಸೂಚನೆಗಳನ್ನು ಪಡೆದುಕೊಂಡು ಮೂರನೇ ಅಲೆ ತಡೆಗಟ್ಟಲು ಸಿದ್ಧತೆ ನಡೆಸುವಂತೆ ಆಗ್ರಹಿಸಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಇಡೀ ದೇಶವನ್ನು ರಾಮರಾಜ್ಯ ಮಾಡುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲೂ ಸುಧಾರಣೆ ತರುತ್ತೇವೆ ಎಂದು ಜನತೆಗೆ ಮಾತು ನೀಡಿದ್ದರು. ಬಿಜೆಪಿ ಸರ್ಕಾರ ನೀಡಿದ ಭರವಸೆ ಸುಳ್ಳಾಗಿದೆ. ವಿದೇಶದಲ್ಲಿ ಇಟ್ಟಿರುವ ಕಪ್ಪುಹಣ ಹಾಗೂ ದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಹಣವನ್ನು ತಂದು ಬಡವರಿಗೆ ನೀಡುತ್ತೇವೆಂದು ಭರವಸೆ ನೀಡಿದ್ದರು. ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿದ್ದರು. ಈ ಯಾವ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್, ಎ.ಎನ್. ಮಹೇಶ್, ಮಹಮದ್ ನಯಾಜ್, ಹಿರೇಮಗಳೂರು ಪುಟ್ಟಸ್ವಾಮಿ, ಸಂತೋಷ್ ಇದ್ದರು.
ಲಾಕ್‌ಡೌನ್‌ನಿಂದ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಇತರೆ ಸಮುದಾಯದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸದಿರುವುದರಿಂದ ಬದುಕು ಕಷ್ಟವಾಗಿದೆ. ನನ್ನ ಕ್ಷೇತ್ರದಲ್ಲಿ ನನ್ನ ಇತಿಮಿತಿಯಲ್ಲಿ ನೆರವು ನೀಡಿದ್ದೇನೆ.
ಬಿಜೆಪಿ ಜನಪ್ರತಿನಿಧಿಗಳು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿರುವುದು ಸರಿ ಇದೆ. ಜನಪ್ರತಿನಿಧಿ ಗಳನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು. ಸರ್ವಾಧಿಕಾರಿ ಧೋರಣೆ ಸರಿಯಲ್ಲ.-ಟಿ.ಡಿ. ರಾಜೇಗೌಡ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.