ಜ್ವಲಂತ ಸಮಸ್ಯೆಗಳನ್ನು ಜೀವಂತ ಇಟ್ಟ ಕಾಂಗ್ರೆಸ್
Team Udayavani, Jun 26, 2021, 4:13 PM IST
ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಎಲ್ಲ ಜ್ವಲಂತಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನಮಾಡಿತೇವಿನಾ ಅವುಗಳಿಗೆ ಪರಿಹಾರಕಂಡುಕೊಳ್ಳಲಿಲ್ಲಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟೀಕಿಸಿದರು.
ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರಹಮ್ಮಿಕೊಂಡಿದ್ದ ಇ-ಪ್ರಶಿಕ್ಷಣ ವರ್ಗಕಾರ್ಯಕ್ರಮದಲ್ಲಿ ಮೋದಿ ಸರಕಾರದ 7ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್ ಮೂಲಕ ಮಾತನಾಡಿದ ಅವರು,ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.
ಕಾಶ್ಮೀರ,ರಾಮಮಂದಿರ, ವಲಸಿಗರ ದುಃಸ್ಥಿತಿ, ಉದ್ಯೋಗ,ಕೈಗಾರಿಕೆ, ಆರ್ಥಿಕತೆ, ಮೂಲಸೌಕರ್ಯ, ತೆರಿಗೆ,ಕಪ್ಪುಹಣ ಇತ್ಯಾದಿ ಅಂಶಗಳ ಬಗ್ಗೆ ಕಾಂಗ್ರೆಸ್ ಅದೆಷ್ಟುಉಪೇಕ್ಷೆ ಮಾಡಿತ್ತು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.ಇತಿಹಾಸವೇ ಎಲ್ಲ ಸತ್ಯಗಳನ್ನು ಬಿಚ್ಚಿಡುತ್ತಿದೆ. ಆದರೆ,ಬಿಜೆಪಿ ಸರಕಾರಈಎಲ್ಲ ಸಮಸ್ಯೆಗಳಿಂದ ದೇಶವನ್ನುಹೊರ ತಂದಿದೆ ಎಂದು ಡಿಸಿಎಂ ತಿಳಿಸಿದರು.
ಎರಡು ರಾಷ್ಟ್ರವನ್ನಾಗಿಸಿದ್ದ ಕಾಂಗ್ರೆಸ್: ಒಂದುಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ.ಒಂದೇ ಭಾರತ-ಒಂದೇ ದೇಶ ಎನ್ನುವುದುಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇವಿಧಿಯನ್ನು ತೆಗೆಯಲಾಯಿತು. ಈಗಕಾಶ್ಮೀರವೂ ಭಾರತದ ಅಂತರ್ಭಾಗ.ಕಾಂಗ್ರೆಸ್‌ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲಎಂದುಕಿಡಿಕಾರಿದರು.
ಕೋವಿಡ್ನಿಂದಲೇ ಸ್ವಾವಲಂಬನೆಯತ್ತ: ಕೋವಿಡ್‌ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತಪರಿಕಲ್ಪ ನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗಸೃಷ್ಟಿಗೆ ಉತ್ತೇಜನ ನೀಡಿದರು. ಭಾರತವು ಕೇವಲಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆಸಾಧಿಸಿತು ಲಸಿಕೆಯೂ ಹೊರಹೊಮ್ಮಿತು ಎಂದರು.ಬಳ್ಳಾರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಚನ್ನಬಸವ ಗೌಡ,ಜಿÇÉಾ ಪ್ರಧಾನ ಕಾರ್ಯದರ್ಶಿ ಡಾ.ರಮೇಶ್, ಜಿಲ್ಲಾ ಪ್ರಭಾರಿ ಸಚ್ಚಿದಾನಂದ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.