ರಾಜ್ಯದಲ್ಲಿ ಎನ್ ಡಿಪಿಎಸ್ ಕಾಯ್ದೆ ಜಾರಿಗೆ ನಿಯಮಾವಳಿ ರೂಪಿಸಿಲಾಗುವುದು: ಬಸವರಾಜ ಬೊಮ್ಮಾಯಿ

Team Udayavani, Jun 26, 2021, 4:50 PM IST

ರಾಜ್ಯದಲ್ಲಿ ಎನ್ ಡಿಪಿಎಸ್ ಕಾಯ್ದೆ ಜಾರಿಗೆ ನಿಯಮಾವಳಿ ರೂಪಿಸಿಲಾಗುವುದು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ NDPS (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಇದರೊಂದಿಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ  ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು

ಕೇಂದ್ರ ಸರ್ಕಾರ NDPS ಕಾನೂನನ್ನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಹಾಗೂ ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ದೃಢ ನಿರ್ಧಾರ.ಹೀಗಾಗಿ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ  ಮಾಡಲು ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ನ್ಯಾಷನಲ್ ಲಾ ಸ್ಕೂಲ್ ಜತೆ ಸಭೆ  ನಡೆದಿದ್ದು ಕಾನೂನಿನನ್ವಯ ನಿಯಮ ರೂಪಿಸಿ ಜಾರಿಗೆ ತರಲು ಅಧ್ಯಯನ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಮೀಸಲಾತಿ ಪ್ರತಿಭಟನೆ, ಫಡ್ನವೀಸ್ ಸೇರಿ ಬಿಜೆಪಿ ಪ್ರತಿಭಟನಾಕಾರರು ವಶಕ್ಕೆ

ಡಾರ್ಕ್ ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ನಮ್ಮ ಪೊಲೀಸರು ನಿಯಂತ್ರಿಸಿದ್ದಾರೆ. ಡಾರ್ಕ್ ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿವೆ.  ಅದರ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್ ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ :

ಡ್ರಗ್ಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ‌.  ಕರ್ನಾಟಕ ಪೊಲೀಸರ ಡ್ರಗ್ ವಿರೋಧಿ ಕಾರ್ಯಾಚರಣೆಯಿಂದ ಬೇರೆ ಎಲ್ಲ ತನಿಖಾ ಏಜೆನ್ಸಿಗಳು ಜಾಗೃತವಾದವು ಅನ್ನುವುದು ಬಹಳ ಮುಖ್ಯ. ಸಾಮಾನ್ಯವಾಗಿ ಇದುವರೆಗೆ ಬೇರೆ ಏಜೆನ್ಸಿಗಳು ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದವು. ಆದರೆ ಈಗ ಕರ್ನಾಟಕ ಪೊಲೀಸರು ಅಪರಾಧ ಪತ್ತೆ ವಿಚಾರದಲ್ಲಿ ಬೇರೆ ಸಂಸ್ಥೆಗಳನ್ನು ಜಾಗೃತಗೊಳಿಸುತ್ತಿವೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಅವರು ಹೇಳಿದರು.

50 ಕೋಟಿ ಮೊತ್ತದ ಮಾದಕವಸ್ತುಗಳ ನಾಶ:

2020 21 ನೇ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿ ರುವ 3000 ಕೆಜಿ ಗಿಂತಲೂ ಹೆಚ್ಚು ತೂಕದ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೊಮ್ಮಾಯಿ ಪೊಲೀಸರಿಗೆ ಮಾದಕವಸ್ತು ತಡೆ ಮತ್ತು ನಾಶಪಡಿಸುವ ಕುರಿತು ಪ್ರಮಾಣ ವಚನ ಬೋಧಿಸಿದರು.

ಇದುವರೆಗಿನ ಡ್ರಗ್ಸ್  ವಿರುದ್ಧದ ಹೋರಾಟದ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಒಂದೇ ವರ್ಷದಲ್ಲಿ ವಶಪಡಿಸಿಕೊಂಡಿರುವುದು ಐತಿಹಾಸಿಕ. ಇದು ಕರ್ನಾಟಕ ಪೊಲೀಸರ ಸಣ್ಣ ಸಾಧನೆಯೇನಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿಗಳು ನಡೆದವು. ಇದರ ಜಾಡು ಹಿಡಿದು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತುಗಳ ಜಾಲವನ್ನು ನಮ್ಮ ಪೊಲೀಸರು ಭೇದಿಸಿದರು. ಅದೆಷ್ಟೋ ಯುವಕರು, ಕುಟುಂಬಗಳು ಮಾದಕ ವಸ್ತುಗಳಿಂದ ಹಾಳಾಗುವುದನ್ನು ತಪ್ಪಿಸಿದರು ಎಂದು ಬಸರಾಜ್ ಬೊಮ್ಮಾಯಿ ಹೇಳಿದರು.

ಡ್ರಗ್ಸ್ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ಡ್ರಗ್ಸ್ ಮಾರಾಟ ಜಾಲವನ್ನು ಮೆಟ್ಟಿ ನಿಲ್ಲುವುದೇ ನಮ್ಮ ಸಂಕಲ್ಪ. ಡಾರ್ಕ್ ವೆಬ್ ಮೂಲಕ ಡ್ರಗ್ಸ್ ಜಾಲ ಬೇಧಿಸಿದ ಮೊದಲ ರಾಜ್ಯ ಕರ್ನಾಟಕ. -ಬಸವರಾಜ್ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.