ಡ್ರಗ್ಸ್‌ ಮಾರಾಟ ಕಂಡರೆ ಮಾಹಿತಿ ನೀಡಿ: ಶ್ರೀನಿವಾಸುಲು


Team Udayavani, Jun 27, 2021, 3:38 PM IST

w3er3r4t

ಕಲಬುರಗಿ: ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಗುರಿ ಎಲ್ಲರ ಕರ್ತವ್ಯವಾಗಿದೆ. ಹೀಗಾಗಿ ಎಲ್ಲಿಯಾದರೂ ಗಾಂಜಾ ಹಾಗೂ ಮತ್ತಿತರ ಡ್ರಗ್ಸ್‌ ಮಾರಾಟ, ಸಾಗಣೆ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಉಪ ಪೊಲೀಸ್‌ ಆಯುಕ್ತ ಅಡೂxರು ಶ್ರೀನಿವಾಸುಲು ಹೇಳಿದರು.

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಜಗತ್‌ ವೃತ್ತದಲ್ಲಿ ಶನಿವಾರ ಮಾದಕ ದ್ರವ್ಯ ದಾಸರಾಗುವುದರಿಂದ ಸಂಭವಿಸುವ ಆರೋಗ್ಯ ಸಮಸ್ಯೆ, ಆರ್ಥಿಕ ಹಾನಿ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲು ಮತ್ತು ದೃಶ್ಯಗಳು ಮತ್ತು ಗಣ್ಯರ ಸಂದೇಶಗಳ ಸಾರುವ ಎಲ್‌ಇಡಿ ಪರದೆಯ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಮೇಲೆ ಪೋಷಕರು ಸದಾ ನಿಗಾ ಇಟ್ಟಿರಬೇಕು.

ಅದರಲ್ಲೂ ಹದಿಹರೆಯದ ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ಯುವಕರ ಕಾಳಜಿ ಮಾಡಬೇಕು. ಅವರ ವರ್ತನೆ ಹಾಗೂ ಅವರಲ್ಲಿ ಏನಾದರೂ ಅಸಹಜ ಬದಲಾವಣೆ, ನಡವಳಿಕೆಯಲ್ಲಿ ಸಂಶಯ ಬರುವಂತೆ ಕಂಡು ಬಂದಲ್ಲಿ ಸೂಕ್ಷ್ಮವಾಗಿ ಗಮನಿಸುತ್ತಿರಬೇಕೆಂದು ಕರೆ ನೀಡಿದರು. ಯುವ ಸಮುದಾಯ ಅಲ್ಪತೃಪ್ತಿಗಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಹೀಗಾಗಿ ಮಕ್ಕಳು ನೋಡಿಕೊಂಡು ಅವರನ್ನು ಡ್ರಗ್ಸ್‌ ಚಟದಿಂದ ವಿಮುಕ್ತಗೊಳಿಸುವಂತೆ ಮಾಡಬೇಕು.

ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿದರೆ ಅವರಿಗೆ ಸೂಕ್ತ ಚಿಕಿತ್ಸೆ, ಸಮಾಲೋಚನೆ ಮಾಡುವ ಮೂಲಕ ಮಾದಕ ವ್ಯಸನದಿಂದ ದೂರವಾಗುವಂತೆ ಮಾಡಬಹುದಾಗಿದೆ ಎಂದರು. ಗಾಂಜಾ ಮಾರಾಟ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಕಠಿಣ ಕ್ರಮ ವಹಿಸುತ್ತಿದೆ. ಈ ಹಿಂದೆ ಹಲವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಈಗಲೂ ಗಾಂಜಾ ಮಾರಾಟ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಸಾರ್ವಜನಿಕರು ಗಾಂಜಾ ಮಾರಾಟ ಮತ್ತು ಸಾಗಣೆ ಕಂಡು ಬಂದಲ್ಲಿ ಮಾಹಿತಿ ನೀಡಬೇಕು. ಜತೆಗೆ ತುರ್ತು ಸ್ಪಂದನೆ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

“ಬಿ’ ಉಪ ವಿಭಾಗದ ಎಸಿಪಿ ಗಿರೀಶ ಎಸ್‌.ಬಿ. ಮಾತನಾಡಿ, ಡ್ರಗ್ಸ್‌ ಸೇವಿಸುವ ಚಟಗಾರರಾಗದಂತೆ ಜನರಿಗೆ ಅರಿವು ಮೂಡಿಸಲು ಧಾರ್ಮಿಕ ನಾಯಕರು, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಪ್ರಮುಖರ ಸಂದೇಶವಿರುವ ದೃಶ್ಯಗಳನ್ನು ಎಲ್‌ಇಡಿ ಪರದೆ ಮೇಲೆ ತೋರಿಸಲಾಗುತ್ತದೆ. ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯ ಎಲ್ಲ ಪ್ರದೇಶಗಳಲ್ಲಿ ಸಂಚರಿಸಿ ಜಾಗೃತಿ ಸಂದೇಶ ತಲುಪಿಸುವ ಪ್ರಯತ್ನ ಇದಾಗಿದೆ ಎಂದರು. “ಎ’ ಉಪ ವಿಭಾಗದ ಎಸಿಪಿ ಅಂಶುಕುಮಾರ, ಸಂಚಾರ ವಿಭಾದ ಎಸಿಪಿ ಸುಧಾ ಆದಿ, ಇನ್‌ಸ್ಪೆಕ್ಟರ್‌ ಗಳಾದ ಎಸ್‌.ಆರ್‌.ನಾಯಕ, ಅಸ್ಲಂಭಾಷಾ, ಕಪಿಲ್‌ ದೇವ, ಸಂತೋಷ ಎಲ್‌.ಟಿ. ಇದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.