ಕಾಂಗ್ರೆಸ್ ನಲ್ಲಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ: ಬಿಜೆಪಿ
Team Udayavani, Jun 28, 2021, 3:28 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಸರಣಿ ಟ್ವೀಟ್ ಮಾಡಡಲಾಗಿದೆ.
ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ:ಕಾಸರಗೋಡಿನ ಗ್ರಾಮಗಳ ಹೆಸರು ಬದಲಾವಣೆ ಪ್ರಕ್ರಿಯೆ ಸ್ಥಗಿತಕ್ಕೆ ಕೇರಳ ಸರ್ಕಾರಕ್ಕೆ ಪತ್ರ: ಸಿಎಂ
ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಕಾಂಗ್ರೆಸ್, ದೇಶದ ವಿರುದ್ಧ ಟೂಲ್‌ಕಿಟ್ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್ ತಯಾರಿಸಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ! ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.