ಆಮ್ ಆದ್ಮಿ ಪಕ್ಷಕ್ಕೆ ಉದ್ಯಮಿ ಮಹೇಶ್ ಸಾವನಿ ಸೇರ್ಪಡೆ ಬೆಳವಣಿಗೆಯ ಸಂಕೇತ : ಮನೀಶ್ ಸಿಸೋಡಿಯಾ


Team Udayavani, Jun 28, 2021, 3:43 PM IST

Philanthropist and Businessman Mahesh Savani joins Aam Aadmi Party in Gujarat

ಸೂರತ್ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷದ ಆಡಳಿತ ವಯಖರಿಯನ್ನು ಮೆಚ್ಚಿ ಹಲವಾರು ಮಂದಿ ಆಮ್ ಆದ್ಮಿ ಪಕ್ಷದತ್ತ ಮುಖಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಗುಜರಾತ್ ನ ದೊಡ್ಡ ಉದ್ಯಮಿ ಮಹೇಶ್ ಸಾವನಿ ಅವರನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಸೋಡಿಯಾ, ಗುಜರಾತ್ ನಲ್ಲಿ ನಮ್ಮ ಪಕ್ಷ ಬೆಳವಣಿಗೆ ಆಗುತ್ತಿರುವುದರ ಬಗ್ಗೆ ನಮಗೆ ಹೆಮ್ಮೆ ಇದೆ. ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷ ಬೆಳವಣಿಗೆಗೆ ಇದೂ ಕೂಡ ಒಂದು ಸಾಕ್ಷಿ. ಗುಜರಾತ್ ನ ದೊಡ್ಡ ಉದ್ಯಮಿ ಹಾಗೂ ದಾನಿ ಸವಾನಿ ನಮ್ಮ ಪಕ್ಷಕ್ಕೆ ಇಂದು(ಸೋಮವಾರ, ಜೂನ್ 28) ಸೇರಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಪ್ರದೇಶವಾದ ಬಳಿಕ ಲಡಾಖ್ ನಲ್ಲಿ ಭಯೋತ್ಪಾದನೆ ಇಳಿಕೆ: ರಾಜ್ ನಾಥ್ ಸಿಂಗ್

4 ತಿಂಗಳೊಳಗೆ, ಎಎಪಿ(ಆಮ್ ಆದ್ಮಿ ಪಾರ್ಟಿ) ನ ವಿದ್ಯಾವಂತ ಯುವಕರ ತಂಡದ ಪರಿಶ್ರಮದಿಂದಾಗಿ ಗುಜರಾತ್ ನಲ್ಲಿ ಪಕ್ಷ ಬೆಳೆಯುತ್ತಿದೆ, ಉತ್ತಮ ಕೆಲಸ ಮಾಡುತ್ತಿದೆ. ದೆಹಲಿಯಲ್ಲಿ ಎಎಪಿ ಕೆಲಸವು ಜನಪ್ರಿಯತೆಯನ್ನು ಗಳಿಸಿದೆ ಮಾತ್ರವಲ್ಲ, ನಾಯಕರು ಮತ್ತು ಸ್ವಯಂಸೇವಕರ ಪ್ರಯತ್ನದಿಂದಾಗಿ ಗುಜರಾತ್‌ ನಲ್ಲಿನ ಕೆಲಸವೂ ಜನಪ್ರಿಯತೆಯನ್ನು ಗಳಿಸುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯುವ ಕಾರಣದಿಂದಾಗಿ ಎಎಪಿ ಯ ಕಾರ್ಯವನ್ನು ಮೆಚ್ಚಿ ದೇಶದಾದ್ಯಂತ ಇಂದು ಯುವಕರು ನಮ್ಮ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರುವುದು ನಮಗೆ ಹೊಸ ಭರವಸೆ ಮೂಡಿಸಿದೆ. ಏತನ್ಮಧ್ಯೆ, ಗುಜರಾತ್ ನ ಅಗ್ರ ಪಂಕ್ತಿಯ ಉದ್ಯಮಿಗಳಲ್ಲಿ ಒಬ್ಬರಾದ ಮಹೇಶ್ ಸಾವನಿ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ. ನಮ್ಮ ಪಕ್ಷ ದೇಶದದ್ಯಂತ ಹೊಸ ಅಲೆಯನ್ನು ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.

ಗುಜರಾತ್‌ ನಲ್ಲಿ ಬದಲಾವಣೆಯನ್ನು ಕಾಣುವ ತುರ್ತು ಅಗತ್ಯದ ಕುರಿತು ಮಾತನಾಡಿದ ಸಿಸೋಡಿಯಾ, “ಮಹೇಶ್ ಜಿ ಎಎಪಿಗೆ ಸೇರ್ಪಡೆಗೊಂಡಿರುವುದರಿಂದ, ಗುಜರಾತ್ ನ ಉದ್ಯಮ ಕ್ಷೇತ್ರ ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯುತ್ತಾರೆನ್ನುವುದರಲ್ಲಿ ಸಂಶಯವಿಲ್ಲ. ನಮ್ಮ ಪಕ್ಷವೂ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ. ಗುಜರಾತ್ ನಲ್ಲಿ ಎಎಪಿ ಯ ಬೆಳವಣಿಗೆ ಹೊಸ ಬದಲಾವಣೆಯ  ಸಂಕೇತವಾಗಿದೆ. ಎಎಪಿ ಈ ಬದಲಾವಣೆ ರಾಜ್ಯಕ್ಕೆ ಮುಖ್ಯ ಎನ್ನುವ ದೃಷ್ಟಿಯಿಂದ ನಮ್ಮನ್ನು ಮುಂದಿನ ಚುನಾವಣೆಯಲ್ಲಿ ಆರಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನಲ್ಲಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ: ಬಿಜೆಪಿ

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.