ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರುಪಾಲು
Team Udayavani, Jun 28, 2021, 5:06 PM IST
ಬೆಳಗಾವಿ: ಕೃಷ್ಣಾ ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ನೀರು ಪಾಲಾಗಿರುವ ದುರ್ದೈವಿಗಳನ್ನು ಗೋಪಾಲ ಬನಸುಡೆ (36), ಸದಾಶಿವ (24),ಧರೆಪ್ಪ (22) ಹಾಗೂ ಶಂಕರ ಬನಸುಡೆ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಸಾಲಬಾಧೆ ಶಂಕೆ:ಒಂದೇ ಕುಟುಂಬದ 6 ಜನ ಆತ್ಮಹತ್ಯೆ; 4 ಮಕ್ಕಳೊಂದಿಗೆ ಬಾವಿಗೆ ಹಾರಿದ ದಂಪತಿಗಳು
ನಾಲ್ವರು ಸಹೋದರರು ಗ್ರಾಮದಲ್ಲಿ ಜಾತ್ರೆ ಇರುವ ಕಾರಣ ಕುಟುಂಬದ ಸದಸ್ಯರ ಜೊತೆಗೆ ಬಟ್ಟೆ ತೊಳೆಯಲು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಸದಾಶಿವ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೂವರೂ ಸಹೋದರರು ಸದಾಶಿವ ಜೊತೆ ನೀರು ಪಾಲಾಗಿದ್ದಾರೆ. ಇಡೀ ಗ್ರಾಮದಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳೀಯರ ನೆರವಿನಿಂದ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.