‘ವಿಕ್ರಾಂತ ರೋಣ’ ಡಬ್ಬಿಂಗ್ ಶುರು ಮಾಡಿದ ಸುದೀಪ್
Team Udayavani, Jun 28, 2021, 8:04 PM IST
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ತೆರೆಗೆ ಬರುವುದನ್ನು ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ವಿಕ್ರಾಂತ್ ರೋಣ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯವಾಗಿದೆ. ಇದೀಗ ಮಾತಿನ ಜೋಡನೆ ಕಾರ್ಯ ಜೋರಾಗಿ ನಡೆದಿದೆ. ಇತ್ತೀಚಿಗಷ್ಟೆ ನಟ ರವಿಶಂಕರ್ ಗೌಡ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಿ ಮುಗಿಸಿದ್ದರು. ಇದೀಗ ನಾಯಕ ನಟ ಕಿಚ್ಚು ಸುದೀಪ್ ಅವರು ಡಬ್ಬಿಂಗ್ ಕೆಲಸ ಶುರು ಮಾಡಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರಿನಲ್ಲಿ ಬರೆದುಕೊಂಡಿರುವ ಸುದೀಪ್, ಬಹಳ ಸಮಯದ ನಂತರ ಸಿನಿಮಾಗೆ ಕಂಠದಾನ ಮಾಡುತ್ತಿದ್ದೇನೆ. ವಿಕ್ರಾಂತ್ ರೋಣ ಸಿನಿಮಾದ ಡಬ್ಬಿಂಗ್ ಮಾಡುತ್ತಿದ್ದೇನೆ. ಸಿನಿಮಾ ಕೆಲಸಗಳು ಆರಂಭವಾಗಿರುವುದನ್ನು ನೋಡಲು ತುಂಬಾ ಖುಷಿಯಾಗುತ್ತಿದೆ ಎಂದಿದ್ದಾರೆ.
ಇನ್ನು ಸುದೀಪ್ ಸದ್ಯ ಬಿಗ್ ಬಾಸ್ 8ರ ಸೆಕೆಂಡ್ ಇನ್ನಿಂಗ್ಸ್ನ ನಿರೂಪಣೆಯಲ್ಲೂ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾಗಿಂತ ಮೊದಲು ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಬೇಕಿದೆ. ಈಗಾಗಲೇ ಎರಡೂ ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೊದಲು ಕೋರಿಗೊಬ್ಬ 3 ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆದ ನಂತರವೇ ವಿಕ್ರಾಂತ್ ರೋಣ ತೆರೆ ಕಾಣಲಿದೆಯಂತೆ.
Seems so long that I gave my voice for a film. Finally starting my voice over for #VikrantRona.
Yeah,,,, supa happy to see it shaping well and the way we all wanted it to.@anupsbhandari @shaliniartss @AJANEESHB @nirupbhandari @neethaofficial @williamdaviddop #ShivuArt pic.twitter.com/JrWPJUCG3c— Kichcha Sudeepa (@KicchaSudeep) June 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.