ಮುಂಬೈನ ಅರ್ಧದಷ್ಟು ಮಕ್ಕಳಲ್ಲಿ ಪ್ರತಿಕಾಯ ಸೃಷ್ಟಿ : ಸೀರೋ ಸರ್ವೇಯಿಂದ ಈ ಮಾಹಿತಿ ಬಹಿರಂಗ
Team Udayavani, Jun 28, 2021, 9:35 PM IST
ನವ ದೆಹಲಿ: ಮುಂಬೈನ ಶೇ.50ರಷ್ಟು ಮಕ್ಕಳ ದೇಹದಲ್ಲಿ ಈಗಾಗಲೇ ಕೊರೊನಾ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಸೃಷ್ಟಿಯಾಗಿವೆ ಎಂಬ ಮಾಹಿತಿಯು ಸೀರೋ ಸರ್ವೇಯಿಂದ ಹೊರಬಿದ್ದಿದೆ.
ಮೂರನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆಯು (ಬಿಎಂಸಿ) ಮುಂಬೈನಾದ್ಯಂತ 1ರಿಂದ 18 ವರ್ಷದೊಳಗಿನವರ ಸೀರೋ ಸರ್ವೇ ನಡೆಸಿದ್ದು, ಅರ್ಧದಷ್ಟು ಮಂದಿಯಲ್ಲಿ ಪ್ರತಿಕಾಯ ಸೃಷ್ಟಿಯಾಗಿರುವ ವಿಚಾರ ತಿಳಿದು ಬಂದಿದೆ.
ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, 2,176 ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಬಿವೈಎಲ್ ನಾಯರ್ ಆಸ್ಪತ್ರೆ ಮತ್ತು ಕಸ್ತೂರ್‌ಬಾ ಮಾಲಿಕ್ಯೂಲರ್ ಡಯಾಗ್ನಾಸ್ಟಿಕ್ ಲ್ಯಾಬೊರೇಟರಿ ಈ ಸಮೀಕ್ಷೆ ನಡೆಸಿದೆ. ಅದರಂತೆ, ಶೇ.50ಕ್ಕೂ ಹೆಚ್ಚು ಮಕ್ಕಳಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದ್ದು, ಅವರ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿರುವುದು ಗೊತ್ತಾಗಿದೆ.
ಸಮಿತಿಗೆ ಮಾಹಿತಿ:
ಮೇ ತಿಂಗಳಲ್ಲಿ ಒಟ್ಟಾರೆ ಸೋಂಕಿತರ ಪೈಕಿ ಶೇ.10.31ರಷ್ಟು ಮಂದಿಯಲ್ಲಿ ಕೊರೊನಾ ಸೋಂಕಿನ ಕಳವಳಕಾರಿ ರೂಪಾಂತರಿ ಪ್ರಕರಣಗಳು ಕಂಡುಬಂದಿದ್ದವು. ಜೂನ್ 20ರ ವೇಳೆಗೆ ಈ ಪ್ರಮಾಣ ಶೇ.51ಕ್ಕೇರಿತ್ತು ಎಂದು ಸಂಸದೀಯ ಸಮಿತಿಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೀಟಾ ಬಲಿಷ್ಠ:
ಈ ನಡುವೆ, ಕೊರೊನಾದ ಬೀಟಾ ರೂಪಾಂತರಿಯ ವಿರುದ್ಧ ಈಗಿರುವ ಲಸಿಕೆಗಳು ಪರಿಣಾಮಕಾರಿಯಾಗಿಲ್ಲ ಎಂದು ಬೋಸ್ಟನ್‌ನ ಮಕ್ಕಳ ಆಸ್ಪತ್ರೆಯ ಸಂಶೋಧಕರು ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ವೈರಾಣುವಿನ ಸ್ಪೈಕ್ ಪ್ರೊಟೀನ್‌ನ ಅಧ್ಯಯನ ನಡೆಸಿದಾಗ, ಬೀಟಾ ವಿರುದ್ಧ ಲಸಿಕೆ ಕಡಿಮೆ ಪರಿಣಾಮ ಬೀರಿದ್ದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :ವಿಧಾನ ಸಭಾ ಚುನಾವಣೆಯೇ ನಮ್ಮ ಮುಖ್ಯ ಗುರಿ : ಮಾಯಾವತಿ
ಸಮಸ್ಯೆ ಇತ್ಯರ್ಥಕ್ಕೆ ಮನವಿ:
ಕೊವಿಶೀಲ್ಡ್ ಲಸಿಕೆ ಪಡೆದವರಿಗೆ ಐರೋಪ್ಯ ಒಕ್ಕೂಟಕ್ಕೆ ಪ್ರವೇಶ ನಿರಾಕರಿಸಿರುವ ಸುದ್ದಿಗೆ ಸಂಬಂಧಿಸಿ ಸೀರಂ ಇನ್ ಸ್ಟಿಟ್ಯೂಟ್ ಸಿಇಒ ಅಡಾರ್ ಪೂನಾವಾಲ ಪ್ರತಿಕ್ರಿಯಿಸಿದ್ದಾರೆ. ಐರೋಪ್ಯ ಒಕ್ಕೂಟಕ್ಕೆ ಪ್ರಯಾಣಿಸುವ ಭಾರತೀಯರಿಗೆ ಸಮಸ್ಯೆ ಎದುರಾಗಿರುವ ವಿಚಾರ ಗಮನಕ್ಕೆ ಬಂದಿದ್ದು, ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದಿದ್ದಾರೆ.
40,845 ಬ್ಲ್ಯಾಕ್ ಫಂಗಸ್ ಪ್ರಕರಣ
ದೇಶದಲ್ಲಿ ಈವರೆಗೆ 40,845 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಜತೆಗೆ, ಈ ಫಂಗಸ್ ನಿಂದ ಮೃತಪಟ್ಟವರ ಸಂಖ್ಯೆ 3,129ಕ್ಕೇರಿದೆ ಎಂದಿದ್ದಾರೆ. ಇದೇ ವೇಳೆ, ಡೆಲ್ಟಾ ಪ್ಲಸ್ ರೂಪಾಂತರಿಯು ಲಸಿಕೆಯ ಪರಿಣಾಮಕಾರಿತ್ವದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಅಥವಾ ಈ ರೂಪಾಂತರಿ ವಿರುದ್ಧ ಲಸಿಕೆ ಕೆಲಸ ಮಾಡಲ್ಲ ಎಂಬುದು ಇನ್ನೂ ಸಾಬೀತಾಗಿಲ್ಲ ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷ ವಿ.ಕೆ. ಪೌಲ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.