ಬಿತ್ತನೆಗೆ ಸಕಾಲಿಕ ಮಳೆ ನಿರೀಕ್ಷೆಯಲ್ಲಿ ರೈತ

Team Udayavani, Jun 28, 2021, 9:36 PM IST

27mdr1

ವರದಿ : ಹು.ಬಾ. ವಡ್ಡಟ್ಟಿ

ಮುಂಡರಗಿ: ಎಲ್ಲೆಡೆ ಮುಂಗಾರು ಮಳೆ ಅಬ್ಬರ ಶುರುವಾಗಿದ್ದರೂ, ತಾಲೂಕಿನಲ್ಲಿ ಮಳೆ ಮಾತ್ರ ಚುರುಕಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಬಿತ್ತನೆ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗಿದೆ.

ಬಿತ್ತನೆಗೆ ಪೂರಕವಾದ ಹದವಾದ ಮಳೆಗಾಗಿ ರೈತರು ಕಾಯುವಂತಾಗಿದೆ. ಈಗಾಗಲೇ 5 ಮಳೆಗಳು ಆಗಿದ್ದು, 6ನೇ ಮಳೆ ಪ್ರಾರಂಭವಾಗಿದೆ. ಮೇ-ಜೂನ್‌ ತಿಂಗಳಿನಲ್ಲಿ ವಾಡಿಕೆಯಂತೆ ಮಳೆ ಬಿದ್ದಿದೆ. ವಾರದಲ್ಲಿ ಒಂದೆರಡು ದಿನಗಳ ಕಾಲ ಬಿರುಸಿನ ಮಳೆಯಾಗಿದ್ದರಿಂದ ವಾಡಿಕೆ ಪ್ರಮಾಣ ತಲುಪಿದೆ. ಆದರೆ, ಬೆಳೆಗಳ ಬಿತ್ತನೆಗೆ ಪೂರಕವಾದ ಹದವಾದ ಮಳೆ ಸುರಿದಿಲ್ಲ. ಮುಖ್ಯವಾಗಿ ಮುಂಗಾರು ಬೆಳೆಗಳಾದ ಶೇಂಗಾ, ಜೋಳ, ಸಜ್ಜೆ, ಗೋವಿನಜೋಳ, ಸೂರ್ಯಕಾಂತಿ, ದ್ವಿದಳ ಧಾನ್ಯಗಳಾದ ತೊಗರಿ, ಅಲಸಂ ದಿ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ತಾಲೂಕಿನ ಮುಂಗಾರಿನ ಹಂಗಾಮಿನ ಬಿತ್ತನೆ ಶೇ.30 ರಿಂದ 45ರಷ್ಟು ಮಾತ್ರ ಆಗಿದೆ ಎನ್ನುತ್ತಾರೆ ರೈತರು.

ವಿವಿಧೆಡೆ ಭಾಗಶಃ ಬಿತ್ತನೆ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ನೀರಾವರಿ ಮತ್ತು ಖುಷ್ಕಿ ಭೂಮಿಯಲ್ಲಿ ಒಟ್ಟು 48,500 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಶೇಂಗಾ 6,000 ಹೆಕ್ಟೇರ್‌, ಸೂರ್ಯಕಾಂತಿ 6,000 ಹೆಕ್ಟೇರ್‌, ಹೈಬ್ರಿàಡ್‌ ಜೋಳ 600 ಹೆಕ್ಟೇರ್‌, ಗೋವಿನಜೋಳ 17,600 ಹೆಕ್ಟೇರ್‌, ಸಜ್ಜೆ 500 ಹೆಕ್ಟೇರ್‌, ತೊಗರಿ 100 ಹೆಕ್ಟೇರ್‌, ಹೆಸರು 12,000 ಹೆಕ್ಟೇರ್‌, ಭತ್ತ 2,700 ಹೆಕ್ಟೇರ್‌, ಕಬ್ಬು 1000 ಹೆಕ್ಟೇರ್‌, ಬಿಟಿ ಹತ್ತಿ 2,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಗೆ ಕೃಷಿ ಇಲಾಖೆ ಗುರಿ ನಿಗದಿಪಡಿಸಿದೆ. ಅದರಲ್ಲಿ ಈವರೆಗೆ ಕೇವಲ ಸೂರ್ಯಕಾಂತಿ 700 ಹೆಕ್ಟೇರ್‌, ಹೆಸರು 2,500 ಹೆಕ್ಟೇರ್‌, ಶೇಂಗಾ 2,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆಯಿಂದಾಗಿ ಈಗಾಗಲೇ ಮೊಳಕೆಯೊಡೆದಿರುವ ಬೆಳೆಗಳಿಗೆ ಕೀಟಬಾಧೆ ಹಾಗೂ ಹಳದಿ ರೋಗ ಕಾಡುತ್ತಿರುವುದು ಕೃಷಿಕರಲ್ಲಿ ಆತಂಕ ಮೂಡಿಸಿದೆ.

ಬಿತ್ತನೆ ಬೀಜಕ್ಕಿಲ್ಲ ಕೊರತೆ: ಮುಂಡರಗಿ ಮತ್ತು ಡಂಬಳ ರೈತ ಸಂಪರ್ಕ ಕೇಂದ್ರದಲ್ಲಿ 32 ಕ್ವಿಂಟಲ್‌ ಹೆಸರು, ಹೈಬ್ರಿಡ್‌ ಜೋಳ 13 ಕ್ವಿಂಟಲ್‌, ಗೋವಿನಜೋಳ 241 ಕ್ವಿಂಟಲ್‌, ಶೇಂಗಾ 3 ಕ್ವಿಂಟಲ್‌, 41 ಕ್ವಿಂಟಲ್‌ ತೊಗರಿ ಬೀಜಗಳು ಮಾರಾಟವಾಗಿವೆ. ರೈತರು ಬಿತ್ತನೆ ಬೀಜ ಖರೀದಿಸಿ ಸಂಗ್ರಹಿಸಿಟ್ಟುಕೊಂಡು, ಹದವಾದ ಮಳೆಗಾಗಿ ಕಾಯುತ್ತಿರುವುದು ತಿಳಿದುಬಂದಿದೆ.

ಟಾಪ್ ನ್ಯೂಸ್

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.