ನಮ್ಮ ಕ್ಲಿನಿಕ್ ಮೆಡಿಕಲ್ ತಂಡದಿಂದ ಲಸಿಕೆ ವಿತರಣೆ
Team Udayavani, Jun 28, 2021, 10:14 PM IST
ಬಳ್ಳಾರಿ: ನಗರದ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಗಿದ್ದು 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ ನೀಡಲಾಯಿತು. ಬೆಂಗಳೂರಿನ ಯುನೈಟೆಡ್ ವೇಸ್ ಅಸೋಸಿಯೇಷನ್ನ ನಮ್ಮ ಕ್ಲಿನಿಕ್ ಮೆಡಿಕಲ್ ಟೀಂ ಡಾ| ಋತ್ವಿಕ್ ನೇತೃತ್ವದ 9 ಜನ ವೈದ್ಯರ ತಂಡ, ಜಿಲ್ಲಾಡಳಿತದ ಸಲಹೆಯಂತೆ ಲಸಿಕಾಕರಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಜಿಲ್ಲಾ ಆರೋಗ್ಯ ಇಲಾಖೆಗೆ ಸಹಕಾರ ನೀಡಿದರು.
ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಮಾಜ ಸೇವೆ ಹಿನ್ನೆಲೆಯ ಸ್ವಯಂ ಸೇವಾ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿಯಂತೆ ನೇರವಾಗಿ ಕೋವಿಡ್ ಲಸಿಕೆಯನ್ನು ಖರೀದಿಸಿ ನಮ್ಮ ಕ್ಲಿನಿಕ್ ಮೆಡಿಕಲ್ ಟೀಂ ಮೂಲಕ ಆಯಾ ಜಿಲ್ಲಾಡಳಿತದ ಜೊತೆ ಚರ್ಚಿಸಿ ತದನಂತರ ಆಯ್ದ ಸ್ಥಳಗಳಲ್ಲಿ ಅದರಲ್ಲೂ ನಗರದ ಸ್ಲಮ್ ಪ್ರದೇಶ, ಗ್ರಾಮೀಣ ಭಾಗದಲ್ಲಿ ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಈ ತಂಡವು ಲಸಿಕೆ ಹಾಕುವ ಉದ್ದೇಶ ಹೊಂದಿದೆ. ಸದ್ಯ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ಕೋವಿಡ್ ಲಸಿಕಾ ಕಾರ್ಯ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸುಮಾರು 600ಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದ್ದು, ಈ ಪೈಕಿ 493 ಜನರಿಗೆ ನಮ್ಮ ಕ್ಲಿನಿಕ್ ಮೆಡಿಕಲ್ ತಂಡದವರು ನೀಡಿದ್ದು, ಇನ್ನುಳಿದ 100 ಜನರಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಯಿತು. ಬೆಳಗ್ಗೆ 9.30 ರಿಂದ ಸಂಜೆವರೆಗೂ ಲಸಿಕೆ ಕಾರ್ಯಕ್ರಮ ನಡೆಯಿತು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರು ತಿಳಿಸಿರು.
ಆಟೋದಲ್ಲೇ ಲಸಿಕೆ ನೀಡಿಕೆ: ಕಾರ್ಯಕ್ರಮದ ವೇಳೆ ಮೂಳೆ, ಕ್ಷಯರೋಗದಿಂದ ಬಳಲುತ್ತಿದ್ದ ಗುಗ್ಗರಹಟ್ಟಿಯ ನಿವಾಸಿ ವಿರೇಶ ಎನ್ನುವವರು ನಡೆಯಲು ಆಗದಿದ್ದರೂ ಲಸಿಕೆ ಹಾಕಿಸಿಕೊಳ್ಳಲು ಆಟೋದಲ್ಲಿ ತಮ್ಮ ಪತ್ನಿಯೊಂದಿಗೆ ಬಂದರು.
ಅವರ ನೋಂದಣಿ ಪ್ರಕಿಯೆಯನ್ನು ಪೂರ್ಣಗೊಳಿಸಿ ಆಟೊದಲ್ಲಿಯೇ ಅವರಿಗೆ ವೈದ್ಯಕೀಯ ಸಿಬ್ಬಂದಿ ಲಸಿಕೆ ನೀಡಿ ವಾಪಸ್ ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ತ್ರಿವೇಣಿ, ವೈದ್ಯಾಧಿಕಾರಿ ಡಾ| ಶಗುಪ್ತಾ ಶಾಹೀನ್, ಮುಖಂಡರಾದ ಸೂರಿ, ಕೆ. ಶ್ರೀಕಾಂತ, ಕೆ.ಹೊನ್ನೂರಸ್ವಾಮಿ, ತಿಪ್ಪೇಸ್ವಾಮಿ, ಕೆ. ಪ್ರಹ್ಲಾದ ಮತ್ತು ಯುವ ಪದಾ ಧಿಕಾರಿಗಳು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಶಾಂತಮ್ಮ, ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಯಶೋದಾ, ಜಿಲಾನ್, ಸರಳಾ ಕುಮಾರಿ, ಉಮಾಮಹೇಶ್ವರಿ, ಅರುಣಾ ನಿರಂಜನ, ಎರ್ರಿಸ್ವಾಮಿ, ದೇವರಾಜ, ನಾಗವೇಣಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.