1,563 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
Team Udayavani, Jun 29, 2021, 9:54 AM IST
ಬೆಂಗಳೂರು: ಪಾಲಿಕೆಗೆ ಪ್ರಸಕ್ತ ಸಾಲಿನಲ್ಲಿ ಈವರೆಗೆ 1,563.78 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ. ಹೀಗಾಗಿ, ಎಲ್ಲ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ವಸೂಲಾತಿ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಾಲಿಕೆಯಲ್ಲಿ ಕಂದಾಯ ಇಲಾಖೆಯು ಬಹುಮುಖ್ಯ ಪಾತ್ರವಹಿಸಲಿದೆ. ಹೀಗಾಗಿ, ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಬಾಕಿ ವಸೂಲಾತಿ, ಕಡಿಮೆ ಮೌಲ್ಯಮಾಪನವಾಗಿರುವ ಸ್ವತ್ತುಗಳು, ತೆರಿಗೆವ್ಯಾಪ್ತಿಯಿಂದ ಹೊರಗಿರುವ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಗಮನ ಹರಿಸಬೇಕು. ಹೆಚ್ಚು ತೆರಿಗೆ ವಸೂಲಿಗೆ ಶ್ರಮಿಸಬೇಕು ಎಂದರು.
ತೆರಿಗೆ ಪಾವತಿಸದವರಿಗೆ ಕಾನೂನು ಕ್ರಮ: ವಿಶೇಷ ಆಯುಕ್ತ(ಕಂದಾಯ) ಬಸವರಾಜ್ ಮಾತನಾಡಿ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಸದವರಿಗೆ ಡಿಮಾಂಡ್ ನೋಟಿಸ್ ಮತ್ತು ಹಲವು ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಯೊಳಗೆ ತರಲು ಎಲ್ಲಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ತೆರಿಗೆ ಪಾವತಿಸದವರ ಮೇಲೆಕಾನೂನುಕ್ರಮಕೈಗೊಂಡು,ಆಸ್ತಿ ತೆರಿಗೆ ವಸೂಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಎಲ್ಲ ವಲಯದ ಜಂಟಿ ಆಯುಕ್ತರು, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು, ಸಹಾಯಕಕಂದಾಯ ಅಧಿಕಾರಿಗಳು ಇದ್ದರು.
ಶೇ.5 ರಿಯಾಯಿತಿ: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಜೂ.30ರವರೆಗೆ ಶೇ.5ರಷ್ಟು ರಿಯಾಯಿತಿ ನೀಡಲಗಿದೆ. ಈ ಕಾಲಮಿತಿಯೊಳಗೆತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ಸಿಗಲಿದೆ. ಹೀಗಾಗಿ, ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳ ಮೂಲಕ ತೆರಿಗೆದಾರರಿಗೆ ಶೇ.5ರಷ್ಟು ರಿಯಾಯಿತಿ ಬಗ್ಗೆ ಮಾಹಿತಿ ನೀಡಿ, ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚಿಸಿದರು.
ತೆರಿಗೆಬಾಕಿ: ನೋಟಿಸ್:
ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ತೆರಿಗೆ ವಸೂಲಿಗೆಕ್ರಮಕೈಗೊಳ್ಳಬೇಕು. ಎಲ್ಲ ಸಹಾಯಕಕಂದಾಯ ಅಧಿಕಾರಿಗಳು ಆಯಾ ವ್ಯಾಪ್ತಿಯಲ್ಲಿ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಂತೆ ನೋಟಿಸ್ ಜಾರಿಗೊಳಿಸಿ, ಬಾಕಿ ತೆರಿಗೆ ವಸೂಲಾತಿಮಾಡಬೇಕು. ಅಲ್ಲದೆ, ಹೊಸದಾಗಿ ನಿರ್ಮಿಸುತ್ತಿರುವಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ತಾಕೀತು ಮಾಡಿದರು.
ಪಾಲಿಕೆ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ಆಸ್ತಿ ಮಾಲೀಕರಿಗೆಖಾತಾ ಮೇಳ ಯೋಜಿಸಬೇಕು. ಆ ಮೂಲಕ ಆಸ್ತಿ ತೆರಿಗೆ ವ್ಯಾಪ್ತಿಗೆ ಆಸ್ತಿಗಳನ್ನು ಸೇರಿಸಿ, ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮವಹಿಸಬೇಕು. –ಗೌರವ್ ಗುಪ್ತ, ಬಿಬಿಎಂಪಿ ಆಯುಕ್ತ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.