‘ಆರ್ ಆರ್ ಆರ್’ ಚಿತ್ರತಂಡದಿಂದ ಸಿಕ್ತು ಬಿಗ್ ಅಪ್ಡೇಟ್… ಏನದು ?

Team Udayavani, Jun 29, 2021, 3:21 PM IST

E5B9tvLUYAII3oy

ಹೈದರಾಬಾದ್ : ದಾಖಲೆ ಬರೆಯಲೆಂದೇ ಸಿದ್ಧವಾಗುತ್ತಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ( ತಾತ್ಕಾಲಿಕ ಶಿರ್ಷೀಕೆ) ಚಿತ್ರತಂಡದಿಂದ ಇದೀಗ ಭರ್ಜರಿ ಗುಡ್ ನ್ಯೂಸ್ ವೊಂದು ಹೊರ ಬಂದಿದೆ.

ಈ ವರ್ಷ ತೆರೆ ಕಾಣಲಿರುವ ಆರ್ ಆರ್ ಆರ್ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯವಾಗಿದೆ. ಕೇವಲ 2 ಸಾಂಗ್ ಮಾತ್ರ ಬಾಕಿ ಉಳಿದಿದ್ದು, ಶೀಘ್ರದಲ್ಲೆ ಅವುಗಳ ಚಿತ್ರೀಕರಣವನ್ನೂ ಮುಗಿಸಲಾಗುತ್ತದೆ. ಬಾಹುಬಲಿಯಂತಹ ಸೂಪರ್ ಡೂಪರ್ ಸಿನಿಮಾ ನೀಡಿರುವ ನಿರ್ದೇಶಕ ರಾಜಮೌಳಿ ಅವರು 2018 ರಲ್ಲಿ ಆರ್ ಆರ್ ಆರ್ ಸಿನಿಮಾ ಕೈಗೆತ್ತಿಕೊಂಡರು. ಈ ಸಿನಿಮಾದಲ್ಲಿ ಜೂನಿಯರ್ ಎನ್‍ಟಿಆರ್ ಹಾಗೂ ರಾಮ್ ಚರಣ್ ಅಭಿನಯಿಸುತ್ತಿದ್ದಾರೆ. ಬಿಗ್ ಬಜೆಟ್ ನಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾ  6 – 7 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಕಳೆದ ಮೂರು ವರ್ಷಗಳಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಚಿತ್ರತಂಡ ಇಂದು ಗುಡ್ ನ್ಯೂಸ್ ನೀಡಿದೆ. ಚಿತ್ರೀಕರಣ ಮುಕ್ತಾಯಗೊಂಡಿರುವುದನ್ನು ತಿಳಿಸಿದ್ದು, ನಾಯಕ ನಟರಾದ ರಾಮ್ ಚರಣ್ ಹಾಗೂ ಜ್ಯೂನಿಯರ್ ಎನ್ ಟಿ ಆರ್ ಅವರು ಎರಡು ಭಾಷೆಗಳಲ್ಲಿ ಡಬ್ಬಿಂಗ್ ಕೂಡ ಮಾಡಿ ಮುಗಿಸಿದ್ದಾರೆ. ಶೀಘ್ರದಲ್ಲೇ ಉಳಿದ ಭಾಷೆಯ ಡಬ್ಬಿಂಗ್ ಮುಗಿಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ನಿರ್ದೇಶಕ ರಾಜಮೌಳಿ ಅವರೂ ತಮ್ಮ ಟ್ವಿಟರಿನಲ್ಲಿ ರಾಮ್ ಚರಣ್ ಹಾಗೂ ಎನ್ ಟಿ ಆರ್ ಬೈಕ್ ಮೇಲೆ ತೆರಳುತ್ತಿರುವ ಫೋಟೊವೊಂದನ್ನು ತಮ್ಮ ಹಂಚಿಕೊಂಡಿದ್ದು, ಮೈ ಹೀರೋಸ್ ಎಂದು ಕ್ಯಾಪ್ಷನ್ ನೀಡಿದ್ದಾರೆ. ಚಿತ್ರೀಕರಣ ವೇಳೆಯಲ್ಲಿ ತೆಗೆಯಲಾದ ಈ ಲುಕ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪುರ ಹರಿದು ಬರುತ್ತಿದೆ.

ಇನ್ನು ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಬಾಲಿವುಡ್ ನಟಿ ಅಲಿಯಾ ಭಟ್, ಅಜಯ್ ದೇವಗನ್, ಸಮುದ್ರ ಖಣಿ, ಕೆಲವು ಅಂತಾರಾಷ್ಟ್ರೀಯ ನಟರು ಪೋಷಕ ಪಾತ್ರದಲ್ಲಿ ಕಾಣಿಸಿ ಕೊಂಡಿ ದ್ದಾರೆ.  ಡಿವಿವಿ ದಾನಯ್ಯ ಹಾಗೂ ಡಿವಿವಿ ಎಂಟರ್‌ ಟೈನ್‍ಮೆಂಟ್ ನಿರ್ಮಿಸುತ್ತಿದ್ದು, ಇದು 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಇನ್ನು ಇದಕ್ಕೆ ಎಂ.ಎಂ ಕೀರವಾಣಿಯವರ ಸಂಗೀತದ ಮಾಧುರ್ಯವಿದೆ.

ಟಾಪ್ ನ್ಯೂಸ್

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.