ನರೇಗಾ ಯೋಜನೆಯಿಂದ ಪ್ರತಿ ಮನೆ ಬಾಗಿಲಿಗೆ ಕೆಲಸ

Team Udayavani, Jun 29, 2021, 3:58 PM IST

ನರೇಗಾ ಯೋಜನೆಯಿಂದ  ಪ್ರತಿ ಮನೆ ಬಾಗಿಲಿಗೆ ಕೆಲಸ

ಮಂಡ್ಯ: ಪ್ರತಿಯೊಂದು ಹಳ್ಳಿಗಳಲ್ಲಿ ಜನರು ತಮ್ಮ ಮನೆ ಬಾಗಿಲು ಗಳಲ್ಲೇ ಕೆಲಸ ಮಾಡಲು ಅವಕಾಶ ಕಲ್ಪಿಸುವ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ದೊರೆಯುವ ಪ್ರಯೋಜನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.

ತಾಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿಯ ಮೊಳೆ ಕೊಪ್ಪಲು ಗ್ರಾಮದಲ್ಲಿ ಜಿಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಜಾಬ್‌ಕಾರ್ಡ್‌ ಮೇಳ’ದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್‌ ಕಾರ್ಡ್‌ ವಿತರಿಸಿ ಮಾತನಾಡಿದ ಅವರು, ಜನರು ತಾವು ಇರುವ ಊರುಗಳಲ್ಲೇ ಕೆಲಸ ಪಡೆದು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಯಲ್ಲಿ ಸಿಗುವ ಪ್ರಯೋಜನಗಳನ್ನು ಪಡೆಯಲು ಮುಂದಾಗಬೇಕು.ಕೋವಿಡ್‌ ಮೂರನೇ ಅಲೆ ಬಂದರೆ ಅದನ್ನು ಎದುರಿಸಲು ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜನಸಮುದಾಯಕ್ಕೆ ನರೇಗಾ ವರದಾನ: ಜಿಪಂ ಸಿಇಒ ಜಿಆರ್‌ಜೆ ದಿವ್ಯಪ್ರಭು ಮಾತನಾಡಿ, ಕೋವಿಡ್‌ ಸಂಕಷ್ಟದಿಂದ ಗ್ರಾಮಗಳಿಗೆ ವಲಸೆ ಬಂದಿರುವ, ಸಂಕಷ್ಟಕ್ಕೀಡಾಗಿರುವಜನಸಮುದಾಯಕ್ಕೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯೂ ವರದನವಾಗಲಿದೆ ಎಂದು ತಿಳಿಸಿದರು.

ಏಕಕಾಲಕ್ಕೆ ಅಭಿಯಾನಕ್ಕೆ ಚಾಲನೆ: ಕೋವಿಡ್‌-19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರು ಹಾಗೂ ವಲಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನೀಡುವ ಸಲುವಾಗಿ ಜಾಬ್‌ ಕಾರ್ಡ್‌ ಮೇಳ ಆಯೋಜಿಸಲಾಗಿದೆ.

ಬಡ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ233 ಗ್ರಾಪಂಗಳಲ್ಲಿ ಏಕಕಾಲಕ್ಕೆ ಜಾಬ್‌ ಕಾರ್ಡ್‌ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ಆದೇಶ ಅಭಿಯಾನ, ಕಾಮಗಾರಿಗೆ ಚಾಲನೆ, ಕಾಮಗಾರಿ ಮುಕ್ತಾಯ ಗೊಳಿಸುವ, ಆಸ್ತಿ ಬಳಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಕೈಜೋಡಿಸಿದರೆ ನರೇಗಾ ಯೋಜನೆ ಯಶಸ್ಸು ಕಾಣಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್‌ ಕಾರ್ಡ್‌ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷೆ ತನುಜಾ,ಉಪಾಧ್ಯಕ್ಷೆ ಮಮತಾ, ತಾಪಂ ಇಒ ವೇಣು, ಸಹಾಯಕನಿರ್ದೇಶಕ ಶ್ರೀನಿವಾಸ್‌, ಪಿಡಿಒ ದಯಾನಂದ್‌, ಜನವಾದಿ ಸಂಘಟನೆಯ ದೇವಿ, ಜಿಲ್ಲಾ ಐಇಸಿ ಸಂಯೋಜಕಿ ರೇಖಾ ಕೀಲಾರ, ತಾಲೂಕು ಸಂಯೋಜಕಿ ಆಶಾ ಮತ್ತಿತರರಿದ್ದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.