ಕಿಮ್ಸ್‌ನ ಪ್ರಸೂತಿ ವಿಭಾಗಕ್ಕೆ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಲಕ್ಷಾ ಅಂಕ
Team Udayavani, Jun 29, 2021, 5:27 PM IST
ಹುಬ್ಬಳ್ಳಿ: ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಹಾಗೂ ಶಸ್ತ್ರಚಿಕಿತ್ಸೆ ಮಾಡಿ ತಾಯಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದಕ್ಕೆ ಇಲ್ಲಿನ ಕಿಮ್ಸ್‌ನ ಪ್ರಸೂತಿ ಗೃಹ ಮತ್ತು ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣದಲ್ಲಿ ಕ್ರಮವಾಗಿ ಶೇ. 92.5 ಮತ್ತು ಶೇ. 90 ಅಂಕಗಳನ್ನು ನೀಡಿದ್ದು, ರಾಷ್ಟ್ರಮಟ್ಟದಲ್ಲಿ ಎರಡನೇ ಅತ್ಯುತ್ತಮ ಪ್ರಸೂತಿ ಮತ್ತು ಶಸ್ತ್ರಚಿಕಿತ್ಸೆ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಿಮ್ಸ್ ಆಸ್ಪತ್ರೆಯ ಪ್ರಸೂತಿ ಗೃಹ ಹಾಗೂ ಶಸ್ತ್ರಚಿಕಿತ್ಸೆ ವಿಭಾಗದ ತಂಡ ಕೋವಿಡ್ -19 ಒಂದನೇ ಅಲೆಯಲ್ಲಿ 130 ಹಾಗೂ ಎರಡನೇ ಅಲೆಯಲ್ಲಿ 235 ಸೇರಿ ಒಟ್ಟು 365 ಗರ್ಭಿಣಿಯರಿಗೆ ಯಶಸ್ವಿಯಾಗಿ ಸುರಕ್ಷಿತ ಹೆರಿಗೆ ಮಾಡಿದ್ದು, ಇದರ ಕಾರ್ಯಕ್ಕೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣದಲ್ಲಿ ಅತೀ ಹೆಚ್ಚಿನ ಅಂಕಗಳನ್ನು ನೀಡಿದೆ. ಸಾಮಾನ್ಯವಾಗಿ ಸುರಕ್ಷಿತ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಶೇ.70 ಸಾಧನೆ ಮಾಡಿದಂತಹ ಸರ್ಕಾರಿ ಆಸ್ಪತ್ರೆಗೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣ ನೀಡುತ್ತದೆ. ಆದರೆ ಕಿಮ್ಸ್ ಆಸ್ಪತ್ರೆಯ ಪ್ರಸೂತಿ ಗೃಹ ಮತ್ತು ಶಸ್ತ್ರಚಿಕಿತ್ಸೆ ವಿಭಾಗ ಕೊರೊನಾ ಸಂದರ್ಭದಲ್ಲೂ ಅತ್ಯುತ್ತಮ ಸೇವೆ ಮೂಲಕ ಲಕ್ಷಾ ಪ್ರಮಾಣೀಕರಣದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಹೆಗ್ಗಳಿಕೆಗೆ ಭಾಜನವಾಗಿದೆ. ಕಳೆದ ವರ್ಷ ರಾಜ್ಯಮಟ್ಟದ ಮಾನ್ಯತೆ ಪಡೆದಿದ್ದ ಕಿಮ್ಸ್ ಈ ಭಾರಿಗೆ ರಾಷ್ಟ್ರಮಟ್ಟದ ಕೀರ್ತಿ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.