3ನೇ ಅಲೆ ಎದುರಿಸಲು ರಿಮ್ಸ್‌ ನಲ್ಲಿ ಸಿದ್ಧತೆ


Team Udayavani, Jun 29, 2021, 8:44 PM IST

sdfeffgghg

ರಾಯಚೂರು: ಕೊರೊನಾ ಎರಡನೇ ಅಲೆ ಪ್ರಭಾವ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಮೊದಲ ಅಲೆಯಿಂದ ಕಲಿಯದ ಪಾಠ 2ನೇ ಅಲೆ ಕಲಿಸಿದ್ದು, 3ನೇ ಅಲೆ ಸಮರ್ಥವಾಗಿ ಎದುರಿಸಲು ರಿಮ್ಸ್‌ನಲ್ಲಿ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಎರಡನೇ ಅಲೆಯಲ್ಲಿ ರೋಗಿಗಳು ಆಕ್ಸಿಜನ್‌, ಬೆಡ್‌, ವೆಂಟಿಲೇಟರ್‌, ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಸೇರಿದಂತೆ ಕೆಲವೊಂದು ಸೌಲಭ್ಯಗಳು ಸಿಗದೇ ಪರದಾಡಿದ್ದು ಸುಳ್ಳಲ್ಲ.

ಆದರೆ, ಖಾಸಗಿ ಆಸ್ಪತ್ರೆಗಳನ್ನು ಮೀರಿ ರಿಮ್ಸ್‌, ಒಪೆಕ್‌ನಲ್ಲಿ ಉತ್ತಮ ಸೇವೆ ನೀಡಲಾಯಿತು ಎಂದು ಜನರೇ ಹೇಳುತ್ತಿರುವುದು ವಿಶೇಷ. ಕೆಲವೊಂದು ಖಾಸಗಿ ಆಸ್ಪತ್ರೆಗಳು ಆಕ್ಸಿಜನ್‌ ಸಿಗದೆ ರಿಮ್ಸ್‌, ಒಪೆಕ್‌ಗೆ ರೋಗಿಗಳನ್ನು ಶಿಫಾರಸು ಮಾಡಿದ್ದು ಇದಕ್ಕೊಂದು ತಾಜಾ ನಿದರ್ಶನ. ಅದೆಲ್ಲ ಸದ್ಯಕ್ಕೆ ಮುಗಿದ ಕತೆಯಾಗಿದ್ದು, ಈಗ ಎಲ್ಲೆಡೆ ಮೂರನೇ ಅಲೆ ಭಯ ಸೃಷ್ಟಿಯಾಗಿದೆ. ಆದರೆ, ಎರಡನೇ ಅಲೆಗೆ ನಿರೀಕ್ಷಿತ ಮಟ್ಟದ ಸಿದ್ಧತೆ ಮಾಡಿಕೊಳ್ಳದೇ ಆರಂಭದಲ್ಲಿ ಕಂಗೆಟ್ಟಿದ್ದ ರಿಮ್ಸ್‌ ಆಡಳಿತ ಮಂಡಳಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತದೆ.

ಸಾಕಷ್ಟು ವಿಚಾರದಲ್ಲಿ ಈಗಾಗಲೇ ಮುಂದಾಲೋಚನೆ ಮಾಡಿ ಮುಂದಡಿ ಇಟ್ಟಿದೆ. ಮಕ್ಕಳಿಗೆ ಪ್ರತ್ಯೇಕ ವಾರ್ಡ್‌: ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ಅದರಲ್ಲೂ ಅಪೌಷ್ಟಿಕ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಬಹುದು ಎಂಬ ಶಂಕೆಯಿದ್ದು, ಜಿಲ್ಲೆಯಲ್ಲಿ ಅಂಥ ಮಕ್ಕಳ ಸಂಖ್ಯೆ 40 ಸಾವಿರ ಇದೆ ಎಂದು ಜಿಲ್ಲಾಧಿಕಾರಿಯೇ ತಿಳಿಸಿದ್ದಾರೆ.

ಈ ಎಲ್ಲ ಅಂಕಿ ಅಂಶ ಗಮನದಲ್ಲಿರಿಸಿಕೊಂಡು ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮಕ್ಕಳಿಗೆ ಸೋಂಕು ಬಂದಲ್ಲಿ ಯಾವ ಪ್ರಮಾಣದಲ್ಲಿ ಇರಲಿದೆಯೋ ಎಂಬ ಅಂದಾಜಿರದ ಕಾರಣ ರಿಮ್ಸ್‌ನಲ್ಲಿ ಕೇವಲ ಮಕ್ಕಳಿಗಾಗಿಯೇ ಕೋವಿಡ್‌ ವಾರ್ಡ್‌ ಆರಂಭಿಸಲು ನಿರ್ಧರಿಸಲಾಗಿದೆ. ಒಪೆಕ್‌ನಲ್ಲಿ ಈಗ 150 ಬೆಡ್‌ ಗಳ ಕೋವಿಡ್‌ ಆಸ್ಪತ್ರೆ ಮುಂದುವರಿಯುತ್ತಿದ್ದು, ಅಲ್ಲಿ ದೊಡ್ಡವರಿಗೆ ಮಾತ್ರ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಅದರ ಜತೆಗೆ ಮಕ್ಕಳಿಗಾಗಿ 70 ಐಸಿಯು, 70 ವೆಂಟಿಲೇಟರ್‌, 150 ಆಕ್ಸಿಜನ್‌ ಬೆಡ್‌ ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಈಗಾಗಲೇ ಇದಕ್ಕೆ ಬೇಕಾದ ಮಾನಿಟರ್‌, ಯಂತ್ರೋಪಕರಣಗಳ ಅಳವಡಿಕೆ, ಆಕ್ಸಿಜನ್‌ ಪೂರೈಕೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮಕ್ಕಳಿಗಾಗಿ ಟ್ರಯಸ್‌ ಸಿದ್ಧಪಡಿಸಿದ್ದು, ಇನ್ನೂ 50 ಬೆಡ್‌ಗಳ ಟ್ರಯಸ್‌ ಮಾಡುವ ಆಲೋಚನೆ ಇದೆ. ಮಕ್ಕಳು, ವಯಸ್ಕರನ್ನು ಪ್ರತ್ಯೇಕವಾಗಿ ಇಡುವುದರಿಂದ ರೋಗದ ತೀವ್ರತೆ ಕಡಿಮೆ ಮಾಡಬಹುದು ಎನ್ನುತ್ತಾರೆ ವೈದ್ಯಾಧಿ ಕಾರಿಗಳು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.