ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿ ವಿಜಯಪುರಕ್ಕೆ ಸ್ಥಳಾಂತರವಾಗಲಿ : ಯತ್ನಾಳ್ ಆಗ್ರಹ
Team Udayavani, Jun 29, 2021, 9:17 PM IST
ವಿಜಯಪುರ : ಪಾರಂಪರಿಕ ಹಿನ್ನೆಲೆ ವಿಜಯಪುರ ನಗರ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆ. ಜಗತ್ತಪ್ರಸಿದ್ಧ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ನೂರಕ್ಕೂ ಹೆಚ್ಚು ಸ್ಮಾರಕಗಳು ವಿಜಯಪುರ ನಗರದಲ್ಲಿವೆ. ಹೀಗಾಗಿ ವಿಶ್ವದರ್ಜೆಯ ಸ್ಮಾಕರಗಳೇ ಇಲ್ಲದ ಧಾರವಾಡ ನಗರದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿಯನ್ನು ವಿಜಯಪುರ ಪಾರಂಪರಿಕ ನಗರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಮಂಗಳವಾರ ನಗರದಲ್ಲಿ ಭೂತನಾಳ ಬಳಿ ಪ್ರವಾಸೋದ್ಯಮ ನಿಮಗದಿಂದ ನಿರ್ಮಿಸುತ್ತಿರುವ ತ್ರಿಸ್ಟಾರ್ ಹೊಟೇಲ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಐತಿಹಾಸಿಕ ಎಲ್ಲ ಸ್ಮಾರಕಗಳ ವ್ಯಾಪ್ತಿಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಇದರಿಂದ ಪ್ರವಾಸಿಗರು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲ ಆಗಮಿಸಲು ಸಹಕಾರಿ ಆಗಲಿದೆ, ಹೀಗಾಗಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಹಾಗೂ ಅಗತ್ಯ ಅನುದಾನ ನೀಡಬೇಕು ಎಂದು ವೇಧಿಕೆ ಮೇಲಿದ್ದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಅವರಿಗೆ ಮನವಿ ಮಾಡಿದರು.
ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಐತಿಹಾಸಿಕ ಸ್ಮಾರಕಗಳಿಗೆ ವಿದ್ಯುತ್ ಅಲಂಕಾರ ವ್ಯವಸ್ಥೆ ಕಲ್ಪಿಸಬೇಕು. ಉತ್ತರ ಭಾರತದ ತಾಜ್‍ಮಹಲ್ ರೀತಿಯಲ್ಲಿ ವಿಶ್ವವಿಖ್ಯಾತಿ ಇಬ್ರಾಹೀಂ ರೋಜಾ, ಗೋಲಗುಮ್ಮಟ ಸ್ಮಾರಕಗಳು ವಿಜಯಪುರ ನಗರದಲ್ಲಿವೆ. ಈ ಸ್ಮಾರಕಗಳ ಸೌಂದರ್ಯ ಹಾಗೂ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು.
ಇದನ್ನೂ ಓದಿ :ಚಾ,ನಗರ : ‘ಸ್ಯಾಟಲೈಟ್ ಫೋನ್’ ಬಳಕೆ ತನಿಖಾ ತಂಡದ ಪೇದೆ ಹೃದಯಾಘಾತದಿಂದ ಸಾವು
ಇದಲ್ಲದೇ ನಿರ್ಮಾಣ ಹಮತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣ ನನ್ನ ಅವಧಿಯಲ್ಲೇ ಪೂರ್ಣಗೊಳ್ಳಲಿದ್ದು, ನಾನೇ ಅದರ ಉದ್ಘಾಟನೆ ಮಾಡಲಿದ್ದೇನೆ. ಆಹಾರ-ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅವರು ಯತ್ನಾಳ ಶಾಕರಾಗಿರುವ ವರೆಗೆ ವಿಜಯಪುರ ವಿಮಾನ ನಿಲ್ದಾಣ ಯೋಜನೆ ಪೂರ್ಣಗೊಳ್ಳುವುದಿಲ್ಲ ಎಂದು ಹೇಳಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಬರುವ ಎರಡು ವರ್ಷಗಳ ಶಾಸಕ್ವದ ಇದೇ ಅವಧಿಯಲ್ಲಿ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಮಾಡಲಿವೆ. ಇದರಲ್ಲಿ ಅನುಮಾನವೇ ಬೇಡ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.