ಜು.1ರಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನ

Team Udayavani, Jun 29, 2021, 11:06 PM IST

29-20

ಶಿವಮೊಗ್ಗ: ವಿದ್ಯಾರ್ಥಿಗಳಿಗಾಗಿ ವಿಶೇಷ ಲಸಿಕಾ ಅಭಿಯಾನವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜು.1 ರಿಂದ 3 ರ ವರೆಗೆ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಎಂಪಿಎಲ್‌ ನ್ಪೋರ್ಟ್ಸ್ ಫೌಂಡೇಷನ್‌, ಸೇವಾ ಭಾರತಿ ಕರ್ನಾಟಕ, ಪಿಇಎಸ್‌ ಶಿವಮೊಗ್ಗ, ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜು. 1,2,3 ರಂದು ಶಿವಮೊಗ್ಗ ನಗರ ಹೊರತುಪಡಿಸಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಮತ್ತು ಪದವಿ ಕಾಲೇಜುಗಳಲ್ಲಿ 18 ವರ್ಷ ಮೇಲ್ಪಟ್ಟ ಸುಮಾರು 17 ಸಾವಿರಕ್ಕೂ ಅ ಧಿಕ ವಿದ್ಯಾರ್ಥಿಗಳಿಗೆ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಎಲ್ಲವನ್ನೂ ಸರ್ಕಾರವೇ ಮಾಡುವುದು ಕಷ್ಟಸಾಧ್ಯ. ಕೋವಿಡ್‌ ಸಂದರ್ಭದಲ್ಲಿ ಅನೇಕ ಸಂಘ-ಸಂಸ್ಥೆಗಳು ಅನೇಕ ರೀತಿಯ ಸಹಕಾರ ನೀಡಿವೆ. ಈಗ ಸೇವಾ ಭಾರತಿ ಹಾಗೂ ಪಿಇಎಸ್‌, ಎಂಪಿಎಲ್‌ ನ್ಪೋಟ್‌ Õì ಫೌಂಡೇಷನ್‌ ಸಹಯೋಗದಲ್ಲಿ ಅಭಿಯಾನ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ತೀರ್ಮಾನಿಸಿದ್ದು, ಈಗಾಗಲೇ ಜಿಲ್ಲೆಯಲ್ಲಿ 4.48 ಲಕ್ಷ ಜನರಿಗೆ ಪ್ರಥಮ ಡೋಸ್‌ ನೀಡಲಾಗಿದೆ. 88,106 ಜನರಿಗೆ ಎರಡನೇ ಡೋಸ್‌ ನೀಡಲಾಗಿದೆ ಎಂದರು.

ಜು.1 ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡ ಈ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಪ್ರಾಯೋಜಿತ ಸಂಸ್ಥೆಯ ಎಲ್ಲರೂ ಉಪಸ್ಥಿತರಿರುವರು. ಎಲ್ಲಾ ಅನುದಾನಿತ, ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳು ಈ ಅವಕಾಶ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಪರಿಸರ ಹಾನಿ ಮಾಡಿ ಅಭಿವೃದ್ಧಿ ಇಲ್ಲ: ಇಎಸ್‌ಐ ಆಸ್ಪತ್ರೆ ಜಾಗದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆದಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಒಟ್ಟು 5 ಎಕರೆ ಜಾಗವನ್ನು ಇಎಸ್‌ಐ ಆಸ್ಪತ್ರೆಗೆ ಕಾಯ್ದಿರಿಸಿದ್ದು ಎರಡೂವರೆ ಎಕರೆಯಲ್ಲಿ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ. ಪ್ಲಾÂನಿಂಗ್‌ ಪ್ರಕಾರ ಗುಡ್ಡದ ಬುಡಕ್ಕೆ ಯಾವುದೇ ರೀತಿಯ ಡ್ಯಾಮೇಜ್‌ ಆಗದ ರೀತಿಯಲ್ಲಿ ಆ್ಯಂಬುಲೆನ್ಸ್‌ ಓಡಾಡುವ ದೃಷ್ಟಿಯಿಂದ ಮಾತ್ರ ಸ್ವಲ್ಪ ಗುಡ್ಡವನ್ನು ಮೇಲ್ಭಾಗದಲ್ಲಿ ಕೊರೆದು ಸಮತಟ್ಟು ಮಾಡಲಾಗಿದ್ದು, ಪ್ರಕೃತಿ ಮತ್ತು ಪರಿಸರಕ್ಕೆ ಹಾನಿ ಮಾಡಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡುವುದಿಲ್ಲ ಎಂದರು.

ಗೋಷ್ಠಿಯಲ್ಲಿ ಮೇಯರ್‌ ಸುನಿತಾ ಅಣ್ಣಪ್ಪ, ಉಪಮೇಯರ್‌ ಶಂಕರ್‌ ಗನ್ನಿ, ಪಿಇಎಸ್‌ ಕಾಲೇಜಿನ ಅ ಧಿಕಾರಿ ಆರ್‌. ನಾಗರಾಜ್‌, ಸಹ್ಯಾದ್ರಿ ನಾರಾಯಣ ಹೃದಯಾಲಯದ ಫ್ಯಾಕಲ್ಟಿ ಡೈರೆಕ್ಟರ್‌ ವರ್ಗೀಸ್‌, ಡಿಎಚ್‌ಒ ಡಾ| ರಾಜೇಶ್‌ ಸುರಗಿಹಳ್ಳಿ, ಪ್ರಮುಖರಾದ ಸುರೇಂದ್ರ, ಜಗದೀಶ್‌, ಸೇವಾ ಭಾರತಿಯ ಡಾ|ರವಿಕಿರಣ್‌, ಆರ್‌.ಎಸ್‌.ಎಸ್‌. ಮುಖಂಡ ಯಾದವ್‌ ಕೃಷ್ಣ, ಸಂತೋಷ್‌ ಬಳ್ಳೆಕೆರೆ ಮೊದಲಾದವರಿದ್ದರು.

ಟಾಪ್ ನ್ಯೂಸ್

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.