ಹಂದಿ ಹಾವಳಿ ನಿಯಂತ್ರಣಕ್ಕೆ ಸಚಿವರ ಸೂಚನೆ


Team Udayavani, Jun 30, 2021, 10:01 PM IST

30-15

ದಾವಣಗೆರೆ: ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಂದಿಗಳ ನಿಯಂತ್ರಣಕ್ಕೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌, ಅಧಿ ಕಾರಿಗಳಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಾವಣಗೆರೆ ಸ್ಮಾರ್ಟ್‌ ಸಿಟಿ ಯೋಜನೆ ನಗರ ಮಟ್ಟದ ಎಂಟನೇ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಸ್ಮಾರ್ಟ್‌ ಸಿಟಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಎಲ್ಲೆಂದರಲ್ಲಿ ಹಂದಿ, ಬೀದಿನಾಯಿಗಳ ಓಡಾಟ ಸರ್ವೇಸಾಮಾನ್ಯವಾಗಿದೆ. ಅನೇಕರಿಗೆ ಹಂದಿ ಕಚ್ಚಿದ ಪ್ರಸಂಗಗಳೂ ನಡೆದಿವೆ. ಪ್ರತ್ಯೇಕ ಜಾಗ ಮೀಸಲಿರಿಸಿ ಹಂದಿಗಳ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ಈಗಾಗಲೇ ಹೆಬ್ಟಾಳು ಬಳಿ 6-7 ಎಕರೆ ಪ್ರದೇಶದಲ್ಲಿ ಹಂದಿಗಳ ದೊಡ್ಡಿ ನಿರ್ಮಿಸುವ ಮೂಲಕ ಸಮಸ್ಯೆ ನಿವಾರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಬೀದಿನಾಯಿ ದಾಳಿಯಿಂದ ಜನರಿಗೆ ತೊಂದರೆಯಾಗದಂತೆ ನಾಯಿಗಳಿಗೆ ಸಂತಾನಹರಣ ಲಸಿಕೆ ನೀಡಲಾಗುತ್ತಿದೆ ಎಂದರು.

ರಸ್ತೆಯಲ್ಲಿರುವ ಎಲ್ಲ ಫುಟ್‌ಪಾತ್‌ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಸೂಕ್ತ ಜಾಗ ಒದಗಿಸಿಕೊಡಬೇಕು. ಸ್ಥಳಾವಕಾಶ ಲಭ್ಯ ಇರುವ ಕಡೆ ಅಗತ್ಯ ಮೂಲಸೌಲಭ್ಯದೊಂದಿಗೆ ಫುಡ್‌ ಕೋರ್ಟ್‌ ತೆರೆಯಲು ಮುಂದಾಗಬೇಕು ಎಂದು ಸಚಿವರು ಹೇಳಿದರು. ಬೀದಿಬದಿ ವ್ಯಾಪಾರಿಗಳಿಗೆ ಮೀಸಲಿಟ್ಟಿರುವ ಸ್ಥಳದಲ್ಲೇ ವ್ಯಾಪಾರ ಮಾಡುತ್ತಿದ್ದಾರೆ.

ಕೆಲವರು ಮುಖ್ಯ ರಸ್ತೆಗಳ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಸಂಚಾರ ಕಿರಿಕಿರಿ, ಸ್ವತ್ಛತೆಗೆ ತಡೆಯಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದರು. ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಕುಂದವಾಡ ಕೆರೆಯ ಸುತ್ತ ಬಂಡ್‌ ಸುಧಾರಣೆಯೊಂದಿಗೆ ಸೈಕಲ್‌ ಪಥ ಕಾಮಗಾರಿ ಪೂರ್ಣಗೊಳಿಸಲು ಕೆರೆಯ ನೀರನ್ನು ಖಾಲಿ ಮಾಡಿ ಜ. 2 ರಿಂದ ಕಾಮಗಾರಿ ಪ್ರಾರಂಭಿಸಲಾಗಿದೆ. ಯುವ ಭಾರತ ಗ್ರೀನ್‌ ಬ್ರಿಗೇಡ್‌ನಿಂದ ಕಾಮಗಾರಿ ಸ್ಥಗಿತಗೊಳಿಸುವಂತೆ ಹೈಕೋಟ್‌ ನಲ್ಲಿ ರಿಟ್‌ ಸಲ್ಲಿಸಿದ್ದು, ಕಾಮಗಾರಿ ಪಕ್ಕದಲ್ಲಿ ನಿರ್ವಹಿಸುತ್ತಿರುವ ರಾಜಕಾಲುವೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದರು.

ರವೀಂದ್ರ ಮಲ್ಲಾಪುರ ಮಾತನಾಡಿ, ದಾವಣಗೆರೆ ನಗರಕ್ಕೆ ಬೇಸಿಗೆ ಸೇರಿದಂತೆ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ 0.20 ಟಿ.ಎಂ.ಸಿ ನೀರು ನಿರಂತರವಾಗಿ ಇರುವಂತೆ ನೋಡಿಕೊಳ್ಳಲು 76.11 ಕೋಟಿ ರೂ. ವೆಚ್ಚದಲ್ಲಿ ರಾಜನಹಳ್ಳಿ-ಮಾಕನೂರು ಗ್ರಾಮಗಳ ಬಳಿ ತುಂಗಭದ್ರಾ ನದಿಗೆ ಬ್ಯಾರೇಜ್‌ ನಿರ್ಮಾಣ ಮಾಡಲಾಗುತ್ತಿದೆ.

ಬ್ಯಾರೇಜ್‌ ನಿರ್ಮಾಣಕ್ಕೆ ನದಿಯ ಎರಡು ಬದಿಯಲ್ಲಿನ ಖಾಸಗಿ ಜಮೀನಿನಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳಬೇಕಿದ್ದು, ಅವಶ್ಯವಿರುವ ಭೂಮಿಯನ್ನು ಗುರುತಿಸಿ ಸ್ಥಳ ಪರಿಶೀಲಿಸಿ ಮಾಕನೂರು ಗ್ರಾಮದಲ್ಲಿ ಸುಮಾರು 5 ಎಕರೆ, ರಾಜನಹಳ್ಳಿ ಗ್ರಾಮದ 2 ಎಕರೆ ಭೂಮಿ ಸ್ವಾ ಧೀನಪಡಿಸಿ ಕೊಳ್ಳಬೇಕಾಗಿದೆ. ಆದರೆ ಮಾಲೀಕರು ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ದಾವೆ ಹೂಡಿದ್ದಾರೆ. ಭೂಮಿ ಅಳತೆಗೆ ತಕರಾರು ಮಾಡುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.

ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸಿಕೊಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್‌ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಬೇಕು. ಸ್ಮಾರ್ಟ್‌ ಸಿಟಿಯಡಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

ಸಭೆಯಲ್ಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್‌.ಎ. ರವೀಂದ್ರನಾಥ್‌, ಮಹಾಪೌರ ಎಸ್‌.ಟಿ. ವೀರೇಶ್‌ ಇತರರು ಭಾಗಹಿಸಿದ್ದರು.

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.