ಹರಾಜು ಪ್ರಕ್ರಿಯೆ ಮುಂದೂಡಲು ಆಗ್ರಹ
Team Udayavani, Jun 30, 2021, 10:55 PM IST
ನಾಯಕನಹಟ್ಟಿ: ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಬ್ಯಾಂಕ್‌ನಲ್ಲಿ ರೈತರು ಅಡ ಇಟ್ಟಿರುವ ಬಂಗಾರದ ಒಡವೆಗಳ ಹರಾಜು ಪ್ರಕ್ರಿಯೆ ಮುಂದೂಡಬೇಕೆಂದು ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ. ಮುದಿಯಪ್ಪ ಮಾತನಾಡಿ, ಸತತ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ರೈತರಿಗೆ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆತಿಲ್ಲ. ಹೀಗಾಗಿ ರೈತರು ಭಾರೀ ಪ್ರಮಾಣದ ನಷ್ಟದಲ್ಲಿದ್ದಾರೆ. ಜತೆಗೆ ನಾಯಕನಹಟ್ಟಿ ಹೋಬಳಿಯಲ್ಲಿ ಪ್ರಮುಖ ಬೆಳೆಯಾದ ಶೇಂಗಾ ಮಳೆಯಿಲ್ಲದೆ ಸಂಪೂರ್ಣವಾಗಿ ನಷ್ಟವಾಗಿದೆ. ರೈತರಿಗೆ ಬಿತ್ತಿದ ಬೀಜವೂ ದೊರೆಯದ ಪರಿಸ್ಥಿತಿ ಇದೆ.
ಇಂತಹ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಡ ಇಟ್ಟಿರುವ ಒಡವೆಗಳನ್ನು ಹರಾಜು ಮಾಡಿ ರೈತರನ್ನು ಬೀದಿಗೆ ತಳ್ಳುತ್ತಿವೆ. ರೈತರ ಬಗ್ಗೆ ಮೃದು ಧೋರಣೆ ತಳೆಯಬೇಕು, ಸಾಲ ಮರು ಪಾವತಿಗೆ ಕೆಲವು ತಿಂಗಳುಗಳ ಕಾಲ ಅವಕಾಶ ನೀಡಬೇಕೆಂದು ಒಂದೆರಡು ದಿನಗಳ ಹಿಂದೆ ಬ್ಯಾಂಕ್‌ಗೆ ಮನವಿ ಸಲ್ಲಿಸಲಾಗಿದೆ ಎಂದರು.
ಮನವಿ ಸ್ವೀಕರಿಸಿದ ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸೂರ್ಯದೇವ ನಾಯಕ್ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ರೈತರು ಸಾಲವನ್ನು ನವೀಕರಿಸಿಲ್ಲ ಹಾಗೂ ಬ್ಯಾಂಕ್‌ಗೆ ಬಡ್ಡಿಯನ್ನೂ ಪಾವತಿಸಿಲ್ಲ. ಈ ಬಗ್ಗೆ ಹಲವಾರು ಬಾರಿ ನೋಟಿಸ್ ನೀಡಲಾಗಿದೆ. ಹರಾಜು ಪ್ರಕ್ರಿಯೆಗೆ ಒಳಪಟ್ಟ ರೈತರು ಲಿಖೀತವಾಗಿ ಅರ್ಜಿ ನೀಡಿಲ್ಲ. ಹೀಗಾಗಿ ಹರಾಜು ಪ್ರಕ್ರಿಯೆ ಮುಂದೂಡುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ಪಪಂ ಸದಸ್ಯರಾದ ಬಸಣ್ಣ, ಮನ್ಸೂರ್, ಹೋರಾಟ ಸಮಿತಿಯ ಬೋರಸ್ವಾಮಿ, ವಕೀಲ ನಾಗೇಂದ್ರಪ್ಪ, ಆರ್. ಪಾಲಯ್ಯ, ಓಬಣ್ಣ, ಡಿ. ಚೌಡಪ್ಪ, ತಿಪ್ಪೇಸ್ವಾಮಿ, ಕೋಲಮ್ಮನಹಳ್ಳಿ ಬಸವರಾಜ್, ಮಂಜುನಾಥ್, ಮೊಹಮ್ಮದ್, ಎಚ್.ಡಿ. ತಿಪ್ಪೇಸ್ವಾಮಿ, ಮಹಾಂತೇಶ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.