ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ಕೋಟಿ ಕೋಟಿ ನಮನಗಳು: ಎಚ್ ಡಿಕೆ
Team Udayavani, Jul 1, 2021, 9:16 AM IST
ಬೆಂಗಳೂರು: ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ಪತ್ರಕರ್ತರ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ ” ಕೊರೊನಾ ಮುಕ್ತ ” ದತ್ತ ದಾಪುಗಾಲುಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಇಂದು(ಜು.1) ವೈದ್ಯರ ದಿನ: ಅಂದು ಪೆಟ್ರೋಲ್ ಬೆಲೆ 5 ರೂ., ವೈದ್ಯರ ಶುಲ್ಕ 2 ರೂಪಾಯಿ!
ಕೋವಿಡ್ ಸಹಜ ಸ್ಥಿತಿಗೆ ಬರುತ್ತಿರುವುದರಲ್ಲಿ ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ, ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ ಎಂದು ಎಚ್ ಡಿಕೆ ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.