ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ : ಡಾ.ಕೆ.ಸುಧಾಕರ್
ದೇಶದಲ್ಲೇ ಮೊಟ್ಟಮೊದಲ ವೈದ್ಯರ ಸ್ಮಾರಕ
Team Udayavani, Jul 1, 2021, 6:19 PM IST
ಬೆಂಗಳೂರು : ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬಳಸಬಹುದು!
ದೆಹಲಿಯಲ್ಲಿ ಸೈನಿಕ ಸ್ಮಾರಕವಿದ್ದು, ಅಲ್ಲಿ ಯೋಧರಿಗೆ ಎಲ್ಲರೂ ಗೌರವ ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲಿ ಸ್ಮಾರಕ ನಿರ್ಮಿಸಿ ಯಾವಾಗಲೂ ಅವರನ್ನು ಸ್ಮರಿಸಬೇಕು. ಈ ಕಷ್ಟಕಾಲದಲ್ಲಿ ಶ್ರಮಿಸುತ್ತಿರುವ ಎಲ್ಲ ವೈದ್ಯರಿಗೆ ಸರ್ಕಾರದ ಪರವಾಗಿ ಧನ್ಯವಾದ ಎಂದರು.
ಅನೇಕ ವರ್ಷಗಳಿಂದ ಭತ್ಯೆಗೆ ಹೋರಾಟ ನಡೆದಿತ್ತು. ನಮ್ಮ ಸರ್ಕಾರ ಶೇ.30, 40 ರವರೆಗೂ ಭತ್ಯೆ ಹೆಚ್ಚಳ ಮಾಡಿದೆ. ಐತಿಹಾಸಿಕವಾಗಿ 1,763 ವೈದ್ಯರನ್ನು ನೇರ ನೇಮಕ ಮಾಡಲಾಗಿದೆ. ಜೊತೆಗೆ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರನ್ನು ನೇಮಿಸಲಾಗಿದೆ. 1 ಸಾವಿರಕ್ಕೂ ಅಧಿಕ ವೈದ್ಯರು ಮೆಡಿಕಲ್ ಕಾಲೇಜುಗಳಿಗೆ ನೇಮಕವಾಗಿದ್ದಾರೆ. ಎಲ್ಲ ಸೇರಿ 4 ಸಾವಿರ ವೈದ್ಯರ ನೇಮಕ ನಡೆದಿದೆ ಎಂದರು.
ವೈದ್ಯರ ಮೇಲೆ ಹಲ್ಲೆ : ಎಚ್ಚರಿಕೆ
ರೋಗಿಗಳ ಕಡೆಯವರು ವೈದ್ಯರು, ಆರೋಬ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5-7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಇನ್ನು, ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ ಎಂದರು.
ಇದನ್ನೂ ಓದಿ : ಬಲು ಅಪರೂಪದ ಕೊಂಡದಕುಳಿ ಭಾಗವತಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.